Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವ್ಯಕ್ತಿಯ ಸೌಂದರ್ಯ ಹೆಚ್ಚಿಸಲು ಪ್ಲಾಸ್ಟಿಕ್ ಸರ್ಜರಿ ವರದಾನ
(ರಾಜ್ಯ ) ಜಿಲ್ಲೆ

ವ್ಯಕ್ತಿಯ ಸೌಂದರ್ಯ ಹೆಚ್ಚಿಸಲು ಪ್ಲಾಸ್ಟಿಕ್ ಸರ್ಜರಿ ವರದಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗಾಯಗಳು, ದೋಷಗಳು, ಶಸ್ತ್ರಚಿಕಿತ್ಸೆಯಿಂದಾಗುವ ಕಲೆಗಳನ್ನು ಸರಿಪಡಿಸಲು ಮತ್ತು ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸಲು ಪ್ಲಾಸ್ಟಿಕ್ ಸರ್ಜರಿ ವರದಾನವಾಗಿದೆ ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಹೇಳಿದ್ದಾರೆ.
ಮಂಗಳವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಶ್ಪತ್ರೆಯಲ್ಲಿ ನಡೆದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಈ ಹಿಂದೆ ಮನುಷ್ಯನ‌ ಮುಖಚರ್ಯೆ, ಅಂಗವೀಕಲತೆ ಸೇರಿದಂತೆ ನಾನಾ ವಿಕಲತೆಗಳನ್ನು ಸರಿಪಡಿಸುವುದು ಕಷ್ಟಸಾಧ್ಯವಾಗಿತ್ತು. ಆದರೆ ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ದಿಯಿಂದಾಗಿ ಪ್ಲಾಸ್ಟಿಕ್ ಸರ್ಜರಿ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಯಾಗಿದೆ. ಅಪಘಾತ, ಸುಟ್ಟಗಾಯ, ಶೀಳುತುಟಿ, ಜನ್ಮದೋಷ, ಅಂಗವೈಕಲ್ಯ, ಹೆಚ್ಚವರಿ ಬೆರಳುಗಳನ್ನು ಸರಿಪಡಿಸುವುದು. ದೇಹ ಮತ್ತು ಮುಖದ ಆಕಾರವನ್ನು ಬದಲಿಸುವುದು, ಸುಕ್ಕುಗಳನ್ನು ಕಡಿಮೆ ಮಾಡಿ ಚರ್ಮದ ಕಾಂತಿ ಹೆಚ್ಚಿಸುವುದು ಈಗ ಸರಳವಾಗಿದೆ. ವಿಕಾರ ರೂಪವನ್ನು ಸುಂದರವಾಗಿ ಮಾರ್ಪಡಿಸಬಹುದಾಗಿದೆ. ಅಲ್ಲದೆ ಪ್ಲಾಸ್ಟಿಕ್ ಸರ್ಜರಿ ಈಗ ಅತೀ ವೇಗವಾಗಿ ಮುನ್ನುಗ್ಗುತ್ತಿದೆ ಎಂದು ಅವರು ಹೇಳಿದರು.
ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ ಮಾತನಾಡಿ, ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಬಡವರ ಪಾಲಿಗೆ ಸಂಜೀವಿನಿಯಾಗಿದೆ. ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರಿಗೆ ನೇರವಾಗುತ್ತಿದೆ. ಇಲ್ಲಿನ ತಜ್ಞವೈದ್ಯ ಡಾ. ವಿಜಯಕುಮಾರ ಹುಡೇದ ಕಳೆದ ಮೂರು ವರ್ಷಗಳಲ್ಲಿ 1555 ಕ್ಕೂ ಹೆಚ್ಚು ಪ್ಲಾಸ್ಟಿಕ್ ಸರ್ಜರಿಗಳನ್ನು ಮಾಡುವ ಮೂಲಕ ರೋಗಿಗಳ ಮುಖದಲ್ಲಿ ಮಂದಹಾಸ ಮೂಡಿಸಿದ್ದಾರೆ ಎಂದು ಹೇಳಿದರು.
ಪ್ಲಾಸ್ಟಿಕ್ ಸರ್ಜನ ಡಾ. ವಿಜಯಕುಮಾರ ಹುಡೇದ ಮಾತನಾಡಿ, ಪ್ಲಾಸ್ಟಿಕ್ ಸರ್ಜರಿ ದುಬಾರಿ ಎಂಬ ತಪ್ಪು ಗ್ರಹಿಕೆಯಿಂದ ಎಲ್ಲರೂ ಹೊರ ಬರಬೇಕಿದೆ. ಮಹಾನಗರಗಳಿಗೆ ಹೋಲಿಸಿದರೆ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ವೆಚ್ಚ ಕಡಿಮೆ ಇದೆ. ನಮ್ಮಲ್ಲಿ ಸರಾಸರಿ ಪ್ರತಿದಿನ ಎರಡರಂತೆ ಪ್ಲಾಸ್ಟಿಕ್ ಸರ್ಜರಿಗಳು ನಡೆಯುತ್ತಿವೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಸ್ತ್ರಚಿಕಿತ್ಸೆ ವಿಭಾಗದ ಪ್ರಾಧ್ಯಾಪಕ ಡಾ. ಮಂಜುನಾಥ ಕೋಟೆಣ್ಣವರ, ಪ್ಲಾಸ್ಟಿಕ್ ಸರ್ಜನ ಡಾ. ಅನಿಕೇತ ವಲ್ಲಭ, ಹೃದ್ರೋಗ ತಜ್ಞ ಡಾ. ಸಂಜೀವ ಸಜ್ಜನರ, ಮೂತ್ರಪಿಂಡ ವಿಭಾಗದ ಡಾ. ಸಂದೀಪ ಪಾಟೀಲ, ಆಸ್ಪತ್ರೆಯ ಸಹಆಡಳಿತಾಧಿಕಾರಿ ಶಾಂತೇಶ ಸಲಗರ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.