ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರೋತ್ಸಾಹ ಧನ ಪಡೆಯಲು ೨೦೨೪-೨೫ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು https://swdservice.karnataka.gov.in/PrizeMoneyClientAPP/ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ-ತಾಲೂಕಾ ಮಟ್ಟದ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.