Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 02,2026

ಪ್ರಕೃತಿಯನ್ನು ಉಳಿಸಿ ಬೆಳೆಸಬೇಕು

ಅ.೭ರಿಂದ ರೈತರಿಗೆ ಸಾವಯವ ಕೃಷಿ ಉಚಿತ ತರಬೇತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆಗೆ ಶಿಕ್ಷಣ ಸಿಗದಿದ್ದರೆ ದೇಶದಲ್ಲಿ ಸುಧಾರಣೆ ಅಸಾಧ್ಯ
(ರಾಜ್ಯ ) ಜಿಲ್ಲೆ

ಮಹಿಳೆಗೆ ಶಿಕ್ಷಣ ಸಿಗದಿದ್ದರೆ ದೇಶದಲ್ಲಿ ಸುಧಾರಣೆ ಅಸಾಧ್ಯ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಿಳಾ ವಿವಿ ಸಂಸ್ಥಾಪಕ ವಿಶೇಷಾಧಿಕಾರಿ ಡಾ.ಎಸ್.ಎಂ.ಜಾಮದಾರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಾವು ಮಾಡುವ ಕೆಲಸಗಳು ಕಾಲಾನಂತರದಲ್ಲಿ ಮರೆಯಾಗಬಹುದಾದರೂ, ನಾವು ಕಟ್ಟಿದ ಶಿಕ್ಷಣ ಸಂಸ್ಥೆಗಳು ಶಾಶ್ವತವಾಗಿ ಜನರ ಮನಸ್ಸಿನಲ್ಲಿ ಉಳಿಯುತ್ತವೆ ಎಂದು ನಿವೃತ್ತ ಹಿರಿಯ ಐ.ಎ.ಎಸ್ ಅಧಿಕಾರಿ ಮತ್ತು ಮಹಿಳಾ ವಿವಿಯ ಸಂಸ್ಥಾಪಕ ವಿಶೇಷಾಧಿಕಾರಿ ಡಾ.ಎಸ್.ಎಂ.ಜಾಮದಾರ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯ, ಕ್ರೀಡಾ ನಿರ್ದೇಶನಾಲಯ ಹಾಗೂ ವಸತಿ ನಿಲಯಗಳ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ‘ವಾರ್ಷಿಕ ದಿನಾಚರಣೆ-೨೦೨೫’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳಾ ವಿಶ್ವವಿದ್ಯಾನಿಲಯ ಕೇವಲ ೧೦ ವಾರಗಳ ಅಂತರದಲ್ಲಿ ಸ್ಥಾಪಿತವಾಯಿತು ಎಂಬುದು ಇತಿಹಾಸದಲ್ಲೇ ವಿಶಿಷ್ಟ ಸಾಧನೆ. ವಿಶ್ವವಿದ್ಯಾನಿಲಯ ಸ್ಥಾಪನೆಯ ಆದೇಶ ನನಗೆ ದೊರೆತಾಗ, ಮಹಿಳಾ ಶಿಕ್ಷಣ ಮತ್ತು ಸಬಲೀಕರಣದ ಮಹತ್ವಪೂರ್ಣ ಗುರಿಯನ್ನು ಸಾಧಿಸಬೇಕು ಎಂಬ ದೃಢ ನಿಶ್ಚಯದೊಂದಿಗೆ ಕಾರ್ಯಪ್ರವೃತ್ತನಾದೆ. ಯಾವ ದೇಶದಲ್ಲಿ ಮಹಿಳೆಗೆ ಶಿಕ್ಷಣ ಸಿಗುವುದಿಲ್ಲವೋ, ಆ ದೇಶದಲ್ಲಿ ಸುಧಾರಣೆ ಸಾಧ್ಯವಿಲ್ಲ. ಮಹಿಳೆಯರಿಗಾಗಿ, ಅವರ ಬೆಳವಣಿಗೆಗಾಗಿ ಸ್ಥಾಪಿತ ಈ ವಿಶ್ವವಿದ್ಯಾನಿಲಯ ಮುಂದಿನ ದಿನಗಳಲ್ಲಿ ಸಾವಿರಾರು ಮಹಿಳೆಯರ ಬದುಕನ್ನು ರೂಪಿಸಲಿ, ಶಿಕ್ಷಣದ ಬೆಳಕನ್ನು ಹರಡಲಿ ಎಂದರು.
ಇದೇ ಸಂದರ್ಭದಲ್ಲಿ ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ಡಾ.ಶುಭಾ ಮರವಂತೆ ಮಾತನಾಡಿ, ಅಕ್ಕಮಹಾದೇವಿ ಹೆಸರಿನ ಈ ಮಹಾವಿದ್ಯಾಲಯ ಎಲ್ಲಾ ಮಹಿಳೆಯರಿಗೂ ಪೌರುಷ ಮತ್ತು ಸ್ಫೂರ್ತಿಯ ಸಂಕೇತವಾಗಿದೆ. ಮಹಿಳೆಯರ ಕಾರ್ಯಕ್ಷಮತೆ ಇಂದು ಎಲ್ಲ ಕ್ಷೇತ್ರಗಳಲ್ಲೂ ಬೆಳಗುತ್ತಿದೆ. ಮಹಿಳೆಯರು ಕೇವಲ ಮನೆಯ ಒಳಗಷ್ಟೆ ಅಲ್ಲ, ಇಡೀ ಸಮಾಜದ ಮುಂದಾಳುತ್ವದ ಹುದ್ದೆಗೂ ತಲುಪಬೇಕು. ಮಹಿಳೆಯರ ವ್ಯಕ್ತಿತ್ವವನ್ನು ಗೌರವದಿಂದ ನೋಡುವಂತಹ ಸಮಾಜವೊಂದು ರೂಪುಗೊಳ್ಳಬೇಕು ಈ ಆಶಯವನ್ನೇ ಈ ಸಂಸ್ಥೆ ಬೆಳಗಿಸುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ ಕೋರಿಶೆಟ್ಟಿ ಮಾತನಾಡಿ, ಶಿಕ್ಷಣ, ಸಮುದಾಯ ಮತ್ತು ಮಹಿಳಾ ಸಬಲಿಕರಣ ಎಂಬ ತ್ರಿವರ್ಣ ಧ್ಯೇಯದೊಂದಿಗೆ ಪ್ರಾರಂಭವಾದ ಈ ವಿಶ್ವವಿದ್ಯಾಲಯ, ಇಂದು ಸಾವಿರಾರು ವಿದ್ಯಾರ್ಥಿನಿಯರ ಜೀವನವನ್ನು ಬೆಳಗಿಸುತ್ತಿದೆ. ನಿರಂತರ ಕಲಿಕೆಯ ಮೂಲಕ ಇವರು ಸಾಧನೆಯ ದಿಕ್ಕಿನಲ್ಲಿ ಹೆಜ್ಜೆ ಹಾಕುತ್ತಿದ್ದಾರೆ. ಇಂತಹ ವಿಶಿಷ್ಟ ವೇದಿಕೆಯಲ್ಲಿ ಕುಲಪತಿಯಾಗಿ ಮಾತನಾಡುತ್ತಿರುವುದು ನನಗೆ ಗೌರವದ ವಿಷಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಬಸವರಾಜ ಎಫ್. ಯಲಿಗಾರ, ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಮ್ ಚಂದ್ರಶೇಖರ, ಮಹಿಳಾ ವಿವಿಯ ಸಿಂಡಿಕೇಟ್ ಸದಸ್ಯರಾದ ಡಾ.ರಿಹಾನಾ ಜಬೀನ್ ಹಾಗೂ ಮಲ್ಲಮ್ಮಾ ಯಾಳವಾರ, ಸಿಂಡಿಕೇಟ್ ಸದಸ್ಯರು, ವಿದ್ಯಾ ವಿಷಯಕ ಪರಿಷತ್ ಸದಸ್ಯರು, ವಿವಿಧ ನಿಕಾಯಗಳ ಡೀನರು, ಮುಖ್ಯಸ್ಥರು, ಸಂಯೋಜಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರದರ್ಶಕ ಕಲೆ ಕೇಂದ್ರ ವಿಭಾಗದ ವಿದ್ಯಾರ್ಥಿನಿಯರು ಮಹಿಳಾ ಗೀತೆ ಹಾಡಿದರು. ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ವಿದ್ಯಾರ್ಥಿನಿ ಕ್ಷೇಮಪಾಲನ ನಿರ್ದೇಶನಾಲಯ ನಿರ್ದೇಶಕಿ ಪ್ರೊ.ಲಕ್ಷ್ಮೀದೇವಿ ವೈ ವಾರ್ಷಿಕ ವರದಿ ಮಂಡಿಸಿದರು. ಕ್ರೀಡಾ ನಿರ್ದೇಶನಾಲಯದ ಸಹಾಯಕ ನಿರ್ದೇಶಕ ಡಾ. ವಿಶ್ವನಾಥ ನಡಕಟ್ಟಿ ಕ್ರೀಡಾ ವರದಿ ವಾಚನ ಮಾಡಿದರು. ಡಾ. ಅಕ್ಷಯ ಯಾರ್ದಿ, ಡಾ.ಕಲಾವತಿ ಕಾಂಬಳೆ ಹಾಗೂ ಡಾ ತಹಮೀನಾ ಕೋಲಾರ ಅತಿಥಿಯರನ್ನು ಪರಿಚಯಿಸಿದರು. ಡಾ. ಸುರೇಖಾ ಜಿ ರಾಠೋಡ ಸಾಂಸ್ಕೃತಿಕ ಸ್ಪರ್ಧೆ ಬಹುಮಾನ ವಿತರಣಾ ಕಾರ್ಯಕ್ರವನ್ನು ನಡೆಸಿಕೊಟ್ಟರು. ಕ್ರೀಡಾ ನಿರ್ದೇಶನಾಲಯದ ನಿರ್ದೇಶಕ ಪ್ರೊ. ಹನುಮಂತಯ್ಯ ಪೂಜಾರ ನಿರೂಪಿಸಿದರು. ವಸತಿ ನಿಲಯದ ಮುಖ್ಯ ನಿಲಯಪಾಲಕಿ ಪ್ರೊ.ಜ್ಯೋತಿ ಉಪಾಧ್ಯೆ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 02,2026

ಪ್ರಕೃತಿಯನ್ನು ಉಳಿಸಿ ಬೆಳೆಸಬೇಕು

ಅ.೭ರಿಂದ ರೈತರಿಗೆ ಸಾವಯವ ಕೃಷಿ ಉಚಿತ ತರಬೇತಿ

ಹಿರಿಯರ ಜೀವನಾನುಭವ ಸದೃಢ ಸಮಾಜ ನಿರ್ಮಾಣಕ್ಕೆ ಅಗತ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 02,2026
    In ದಿನಪತ್ರಿಕೆ
  • ಪ್ರಕೃತಿಯನ್ನು ಉಳಿಸಿ ಬೆಳೆಸಬೇಕು
    In ವಿಶೇಷ ಲೇಖನ
  • ಅ.೭ರಿಂದ ರೈತರಿಗೆ ಸಾವಯವ ಕೃಷಿ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
  • ಹಿರಿಯರ ಜೀವನಾನುಭವ ಸದೃಢ ಸಮಾಜ ನಿರ್ಮಾಣಕ್ಕೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಬ್ಬಿನ ಗದ್ದೆಯ ಮರೆಯಲ್ಲಿ ಗಾಂಜಾ ಬೆಳೆ! ಆರೋಪಿ ಬಂಧನ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಭದ್ರತಾ ಪಿಂಚಣಿ ಪುನರಾರಂಭಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಸೌಹಾರ್ದ ಸಮಾಜ ನಿರ್ಮಾಣಕ್ಕೆ ಗಾಂಧಿ ಮಾರ್ಗವೇ ದಾರಿದೀಪ
    In ವಿಶೇಷ ಲೇಖನ
  • ಹ್ಯಾಂಡ್‌ಬಾಲ್‌: ಸತತ 3ನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಬೆವರಿನ ಅನ್ನದ ಮಹತ್ವ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.