ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೇಂದ್ರ ಸರ್ಕಾರದಿಂದ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ರಾಷ್ಟ್ರಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ : ೩೧-೦೭-೨೦೨೫ ಕೊನೆಯ ದಿನವಾಗಿದ್ದು, ೨ ಪಾಸ್ ಪೋರ್ಟ ಅಳತೆಯ ಭಾವಚಿತ್ರ (ವ್ಯಕ್ತಿ ವಿಭಾಗ), ಒಂದು ಪುಟಕ್ಕೆ ಮೀರದಷ್ಟು ಅರ್ಜಿದಾರರ ವ್ಯಕ್ತಿ, ಸಂಸ್ಥೆಗಳಿಂದ ಸ್ವ-ವಿವರ ಹಾಗೂ ಸಾಧನೆಗಳ ಸಾರಾಂಶ ಪೂರಕ ದಾಖಲೆ ಹಾಗೂ ಇತರೆ ದಾಖಲೆಗಳೊಂದಿಗೆ ಅರ್ಜಿಯನ್ನು www.awards.gov.in & www.depwd.gov.inವೆಬ್‌ಸೈಟ್‌ನಲ್ಲಿ ಸಲ್ಲಿಸಬೇಕು. ಆನ್‌ಲೈನಲ್ಲಿ ತಮ್ಮ ಎಲ್ಲಾ ದಾಖಲಾತಿಗಳನ್ನು ಭರ್ತಿ ಮಾಡಿ ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳ ಪ್ರತಿಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಆವರಣ ವಿಜಯಪುರ ಕಚೇರಿಗೆ ಸಲ್ಲಿಸಬೇಕು.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ದೂ: ೦೮೩೫೨-೭೯೬೦೬೦ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಕಟಣೆ ತಿಳಿಸಿದೆ.
