ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘ ಜಿಲ್ಲಾ ಘಟಕ ವಿಜಯಪುರ ವತಿಯಿಂದ ೨೦೨೫ನೆಯ ಸಾಲಿನಲ್ಲಿ ಕೊಡಮಾಡುವ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಸಿಂದಗಿ ತಾಲೂಕು ವರದಿಗಾರ ಮಲ್ಲಿಕಾರ್ಜುನ ಅಲ್ಲಾಪೂರ ಆಯ್ಕೆಯಾಗಿದ್ದಾರೆ ಎಂದು ಕಾನಿಪ ತಾಲೂಕಾಧ್ಯಕ್ಷ ಆನಂದ ಶಾಬಾದಿ ಹೇಳಿದ್ದಾರೆ.
ಜು.೧೯ರಂದು ವಿಜಯಪುರದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.