Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ

ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು

ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಬಿಎಲ್ಡಿಇ ಸಂಸ್ಥೆ ಮುಂಚೂಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೧೯ರಂದು ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ & ಸನ್ಮಾನ :ಬೆಣ್ಣೂರ
(ರಾಜ್ಯ ) ಜಿಲ್ಲೆ

ಜು.೧೯ರಂದು ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ & ಸನ್ಮಾನ :ಬೆಣ್ಣೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಹಿರಿಯ ಪತ್ರಕರ್ತ ರಿಗೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪತ್ರಿಕಾ ದಿನಾಚರಣೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭವನ್ನು ಜುಲೈ ೧೯ ರಂದು ಶನಿವಾರ ಬೆಳಿಗ್ಗೆ ೧೦ ಕೈ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಕಾಶ ಬೆಣ್ಣೂರ ಹೇಳಿದರು,
ಜಿಲ್ಲೆಯ ಎಲ್ಲಾ ಪತ್ರಕರ್ತರು ಹಾಗೂ ಸಂಘದ ಎಲ್ಲ ಸರ್ವ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು,
ಜಿಲ್ಲಾಪಂಚಾಯತ್ ರಸ್ತೆಯ ಪತ್ರಿಕಾ ಭವನದಲ್ಲಿ ತುರ್ತು ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮಾತನಾಡಿದವರು ೨೦೨೪/೨೫ ನೇ ಸಾಲಿನಲ್ಲಿ ಎಸ್‍.ಎಲ್‍.ಸಿ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯ ಪತ್ರಕರ್ತರರ ಮಕ್ಕಳು ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿ /ವಿಧ್ಯಾರ್ಥಿನಿ ಪ್ರತಿಭಾ ಪುರಸ್ಕಾರ ಹಾಗೂ ಪತ್ರಿಕಾ ದಿನಾಚರಣೆ ಮತ್ತು ಜಿಲ್ಲೆಯ ಹಿರಿಯ ಪತ್ರಕರ್ತರ ರಿಗೆ ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ,ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭವನ್ನು ಜುಲೈ ೧೯ ರಂದು ಶನಿವಾರ ಬೆಳಿಗ್ಗೆ ೧೦ ಕೈ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು
ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ್. ಹಾವೇರಿ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲವರ ಸಂಸದ ರಮೇಶ್ ಜಿಗಜಿಣಗಿ, ವಿಜಾಪುರದ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ್) ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆ.ವ್ಹಿ. ಪ್ರಭಾಕರ, ಕೆ ಯು ಡಬ್ಲ್ಯೂ ಜೆ
ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ ಲೋಕೇಶ, ಉಪಾಧ್ಯಕ್ಷರಾದ ಪುಂಡಲೀಕ ಬಾಳೋಜಿ, ಭವಾನಿಸಿಂಗ ಠಾಕೂರ, ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ,
ವಿಶೇಷ ಉಪನ್ಯಾಸಕರಾಗಿ ಹಿರಿಯ ಪತ್ರಕರ್ತ ಗೋಪಾಲ ನಾಯಕವರು ಉಪನ್ಯಾಸ ನೀಡಲಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹನೀಯರಾದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಡಿವೈಎಸ್ಪಿ ಬಸವರಾಜ ಎಲಿಗಾರವರಿಗೆ ವಿಶೇಷ ಸನ್ಮಾನ ಮಾಡಲಾಗುವುದು
ಗ್ರಾಮೀಣ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುವ ಗ್ರಾಮೀಣ ಪತ್ರಕರ್ತರಿಗೆ ಜಿಲ್ಲೆಯಲ್ಲಿ ಉಚಿತ ಬಸ್ ಪಾಸ್ ವಿತರಣೆಗೆ ಸಹಕರಿಸಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್, ಕೆ ಯು ಡಬ್ಲ್ಯೂ ಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿದಂತೆ ಅನೇಕರಿಗೆ ವಿಶೇಷ ಸನ್ಮಾನ ಹಮ್ಮಿಕೊಳ್ಳಲಾಗುವುದು
ಕೆ ಯು ಡಬ್ಲ್ಯೂ ಜೆ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣೂರ, ರಾಷ್ಟ್ರೀಯ ಮಂಡಳಿಯ ಸದಸ್ಯ ಮಹೇಶ್ ಶೆಟಗಾರ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಿ.ಬಿ.ವಡವಡಗಿ, ನಾಮನಿರ್ದೇಶನ ಸದಸ್ಯರಾದ ಕೌಶಲ್ಯ ಪನಾಳಕರ, ಕೆ.ಕೆ. ಕುಲಕರ್ಣಿ, ಖಜಾಂಜಿ ರಾಹುಲ್ ಆಪ್ಟೆ, ಅಶೋಕ್ ಯಡಹಳ್ಳಿ, ಗುರು ಗದ್ದನಕೇರಿ, ಬಸವರಾಜ ಉಳ್ಳಾಗಡ್ಡಿ, ಇರ್ಫಾನ್ ಶೇಖ, ಶಶಿಕಾಂತ್ ಮೇಂಡೆಗಾರ, ಶರಣು ಮಸಳಿ, ಗುರು ಲೋಕುರಿ, ಮಲ್ಲು ಕೆಂಭಾವಿ , ನಾಗೇಶ್ ನಾಗೂರ್, ಮಹ್ಮದ ಸಮೀರ ಇನಾಮದಾರ ಹಾಗೂ ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿ ಪುರಸ್ಕೃತರು

ವಿಜಯಪುರ ಘಟಕದಿಂದ ಮಹಿಳಾ ವಿಭಾಗದಿಂದ ಶ್ರೀಮತಿ ಸರೋಜಿನಿ ಕುಲಕರ್ಣಿ ( ಕನ್ನಡ ಕೋಗಿಲೆ ), ಪರಶುರಾಮ್ ಶಿವಶರಣ ( ಹೊಸದಿಗಂತ), ನವೀನ್ ಅಂಜುಮ್ ಮಮದಾಪುರ,(ಸಂಯುಕ್ತಕರ್ನಾಟಕ), ವಿನೋದ್ ಸಾರವಾಡ,(ರಣರಂಗ), ಶರಣಬಸಪ್ಪ ಮಸಳಿ ( ಕರುನಾಡು ಪ್ರಭ), ಅಪ್ಪು ಚಿನಗುಂಡಿ (ಸುವರ್ಣ ಟಿವಿ ವಾಹಿನಿಯ ಕ್ಯಾಮೆರಾ ಮ್ಯಾನ್), ಗುರಪ್ಪ ಲೋಕುರಿ (ವಿಜಯವಾಣಿ),
ಸಿಂದಗಿಯ ಮಲ್ಲಿಕಾರ್ಜುನ ಅಲ್ಲಾಪುರ (ವಿಶ್ವವಾಣಿ), ಬಸವನಬಾಗೇವಾಡಿಯ ಮಂಜು ಕಲಾಲ (ವಿಶ್ವವಾಣಿ), ಕೊಲ್ಹಾರದ ಮಲ್ಲಿಕಾರ್ಜುನ ಕುಬಕಡ್ಡಿ (ಕನ್ನಡ ಪ್ರಭ), ನಿಡಗುಂದಿಯ ಬಸಲಿಂಗಯ್ಯ ಮಠಪತಿ (ಹೊಸದಿಗಂತ), ಇಂಡಿಯ ಬೀರಪ್ಪ ಹೊಸೂರ ( ರವಿವಾಣಿ), ಆಲಮೇಲದ ಗುರು ಹಿರೇಮಠ (ವಿಜಯ ಕರ್ನಾಟಕ), ತಿಕೋಟಾದ ಶ್ರೀಮತಿ ಲಕ್ಷ್ಮಿ ಹಿರೇಮಠ (ಸಂಯುಕ್ತ ಕರ್ನಾಟಕ), ದೇವರಹಿಪ್ಪರಗಿಯ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ (ಕನ್ನಡಪ್ರಭ), ಚಡಚಣದ ಶಿವಯ್ಯ ಮಠಪತಿ (ಉದಯವಾಣಿ), ಮುದ್ದೇಬಿಹಾಳದ ನೂರ್ ನಬಿ ನದಾಫ (ಗುಮ್ಮಟನಗರಿ), ತಾಳಿಕೋಟೆಯ ಶಿವಾನಂದ್ ಸಜ್ಜನ ( ವಿಜಯಕರ್ನಾಟಕ), ಸೇರಿದಂತೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯ ೧೭ ವಿದ್ಯಾರ್ಥಿನಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ

ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು

ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಬಿಎಲ್ಡಿಇ ಸಂಸ್ಥೆ ಮುಂಚೂಣಿ

ವಿದ್ಯುತ್ ಸಮಸ್ಯೆ ಕುರಿತು ಸಾರ್ವಜನಿಕರೊಂದಿಗೆ ಸಂವಾದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ರಾಷ್ಟ್ರೀಯ ಮೌಲ್ಯ ಬೆಳೆಸಲು ಶಾಲಾ ಸಂಸತ್ ಸಹಕಾರಿ
    In (ರಾಜ್ಯ ) ಜಿಲ್ಲೆ
  • ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು
    In (ರಾಜ್ಯ ) ಜಿಲ್ಲೆ
  • ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಬಿಎಲ್ಡಿಇ ಸಂಸ್ಥೆ ಮುಂಚೂಣಿ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ಸಮಸ್ಯೆ ಕುರಿತು ಸಾರ್ವಜನಿಕರೊಂದಿಗೆ ಸಂವಾದ
    In (ರಾಜ್ಯ ) ಜಿಲ್ಲೆ
  • ಕಾನಿಪ ಜಿಲ್ಲಾ ಪ್ರಶಸ್ತಿಗೆ ಕುಬಕಡ್ಡಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಕಾರ್ಮಿಕರಿಗೆ ಅರಿವು ಮೂಡಿಸುವ ‘ನಮಸ್ತೆ ದಿನ’ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಶಿಕ್ಷಕಿ ಪಾರ್ವತಿ ಸೊನ್ನದ ಪ್ರಶಸ್ತಿಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗೃಹ ಆರೋಗ್ಯ ಸೇವೆ ಯೋಜನೆ ಸದುಪಯೋಗಪಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮತದಾರ ಕರಡು ಪಟ್ಟಿ ಪ್ರಕಟ :ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ವಸತಿ ಬಸ್ ಬದಲಾವಣೆಗೆ ವಿದ್ಯಾರ್ಥಿಗಳು, ಪಾಲಕರ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.