ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ಬಡವರು, ಕೂಲಿಕಾರ್ಮಿಕರು, ಆರ್ಥಿಕ ದುರ್ಬಲರ ಹಸಿವು ನೀಗಿಸುವ ಸದುದ್ದೇಶದಿಂದ ಇಂದಿರಾ ಕ್ಯಾಂಟೀನ್ ತೆರೆಯಲಾಗಿದೆ ಎಂದು ಕರ್ನಾಟಕ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಸುಮಾರು 82 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಇಂದಿರಾ ಕ್ಯಾಂಟೀನ ಶುಕ್ರವಾರ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದು ಬಹು ಜನರಿಗೆ ವರದಾನವಾಗಲಿದೆ, ನವಕರ್ನಾಟಕ ನಿರ್ಮಾಣಕ್ಕಾಗಿ ಪಂಚ ಗ್ಯಾರಂಟಿಗಳನನ್ನು ಅನುಷ್ಠಾನಕ್ಕೆ ತರುವ ಮೂಲಕ ಅಭಿವೃದ್ಧಿಗೂ ಆದ್ಯತೆ ನೀಡಲಾಗುವುದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪ್ರಮುಖರಾದ ಮಾಜಿ ಜಿಪಂ ಅಧ್ಯಕ್ಷೆ ಸಿದ್ದನಗೌಡ ಪೊಲೀಸ್ ಪಾಟೀಲ, ಬಾಬುಗೌಡ ಮಾಲಿ ಪಾಟೀಲ್, ವಾಮನರಾವ್ ದೇಶಪಾಂಡೆ, ಬಾಪುಗೌಡ ಪಾಟೀಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿಗೌಡ ಮಾಲಿ ಪಾಟೀಲ್, ಶಹಾಪುರ ಬ್ಲಾಕ್ ಅಧ್ಯಕ್ಷ ಶಿವಮಹಾಂತ ಸಾಹು ಚಂದಲಾಪುರ, ಕೆಂಭಾವಿ ಬ್ಲಾಕ್ ಅಧ್ಯಕ್ಷ ಬಸನಗೌಡ ಹೊಸ್ಮನಿ ಯಾಳಗಿ ಪುರಸಭೆ ಅಧ್ಯಕ್ಷ ರಹಿಮಾನ್ ಪಟೇಲ್ ಯಲ್ಗೋಡ್, ಉಪಾಧ್ಯಕ್ಷ ಲಕ್ಷ್ಮೀಬಾಯಿ ಕಂಬಾರ, ಆಶ್ರಯ ಕಮಿಟಿ ಅಧ್ಯಕ್ಷ ಶರಣಬಸವ ಡಿಗ್ಗಾವಿ ಮುಖ್ಯಾಧಿಕಾರಿ ಮಹ್ಮದ್ ಯುಸುಫ್ ಸೇರಿದಂತೆ ಪುರಸಭೆ ಸದಸ್ಯರು, ನಾಮನಿರ್ದೇಶಿತ ಸದಸ್ಯರು, ಆಶ್ರಯ ಕಮಿಟಿ ಸದಸ್ಯರು, ಪಕ್ಷದ ಮುಖಂಡರು ಕಾರ್ಯಕರ್ತರು ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

