Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»0.77 ಟಿಎಂಸಿ ಸಾಮರ್ಥ್ಯದ ಜಲಾಶಯ ನಿರ್ಮಾಣ
(ರಾಜ್ಯ ) ಜಿಲ್ಲೆ

0.77 ಟಿಎಂಸಿ ಸಾಮರ್ಥ್ಯದ ಜಲಾಶಯ ನಿರ್ಮಾಣ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ತಿಕೋಟಾ ತಾಲೂಕಿನ ಬಾಬಾನಗರ ಬಳಿ ನಿರ್ಮಾಣ | ಸುಮಾರು 400 ಎಕರೆ ಪ್ರದೇಶದಲ್ಲಿ ರೂ.557 ಕೋ. ವೆಚ್ಚ | ಸಚಿವ ಎಂ.ಬಿ.ಪಾಟೀಲ ಹೇಳಿಕೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ತಿಕೋಟಾ ತಾಲೂಕಿನ ಬಾಬಾನಗರ ಬಳಿ ಸುಮಾರು 400 ಎಕರೆ ಪ್ರದೇಶದಲ್ಲಿ ರೂ. 557 ಕೋ. ವೆಚ್ಚದಲ್ಲಿ 0.77 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಶಯ ನಿರ್ಮಿಸಲಾಗುವುದು ಎಂದು‌ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಶುಕ್ರವಾರ ತಿಕೋಟಾ ಪಟ್ಟಣದ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20 ಕಿ. ಮೀ ವ್ಹಾಯಾ ಉತ್ತರ ಕಾಲುವೆ ರಸ್ತೆ ಸುಧಾರಣೆ ಕಾಮಗಾರಿಗೆ ಭೂಮಿಪೂಜೆ ಹಾಗೂ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ. ಸಿ-2 ರಿಂದ ಜಂಕ್ಷನ್ ವರೆಗೆ ವ್ಹಾಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ ಅಂದಾಜು ರೂ.495 ಲಕ್ಷ ವೆಚ್ಚದಲ್ಲಿ 5 ಕಿ.ಮೀ ರಸ್ತೆ ಸುಧಾರಣೆ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಬಾಬಾನಗರ ಬಳಿ ಜಲಾಶಯ ನಿರ್ಮಾಣದಿಂದ ಭಾಗದ ರೈತರಿಗೆ ಬೇಸಿಗೆಯಲ್ಲಿ ಎದುರಾಗುವ ನೀರಿನ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಅವರು ತಿಳಿಸಿದರು.
ಅಷ್ಟೇ ಅಲ್ಲ, ಮತಕ್ಷೇತ್ರ ವ್ಯಾಪ್ತಿಯಲ್ಲಿರುವ ಕಾಲುವೆಗಳ ಮೂಲಕ 156 ಹಳ್ಳಗಳಲ್ಲಿ ಅಲ್ಲಲ್ಲಿ ಚೆಕ್ ಡ್ಯಾಂ‌‌‌ ನಿರ್ಮಿಸಲಾಗುವುದು. ಇದರಿಂದ ಈ ಭಾಗಗಳಲ್ಲಿ ಅಂತರ್ಜಲ ವೃದ್ಧಿಸಲಿದೆ. ದೇಶಕ್ಕೆ ಮಾದರಿಯಾಗುವ ಕೆಲಸಗಳನ್ನು ಬಬಲೇಶ್ವರ ಮತಕ್ಷೇತ್ರದಲ್ಲಿ ಮಾಡಲಾಗುತ್ತಿದೆ. ಈಗ ನಿರ್ಮಿಸಲಾಗುತ್ತಿರುವ ಎರಡೂ ರಸ್ತೆಗಳು ಗುಣಮಟ್ಟದಿಂದ ಕೂಡಿರಬೇಕು ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದ ಅವರು, ಈ ರಸ್ತೆಗಳ ಅಭಿವೃದ್ಧಿಯಂದ ಯಾರೊಬ್ಬರಿಗೂ ಅನ್ಯಾಯವಾಗುವುದಿಲ್ಲ ಎಂದು ತಿಳಿಸಿದರು.
ಈಗಾಗಲೇ ಮತಕ್ಷೇತ್ರದ ಎರಡೂ ತಾಲೂಕುಗಳಲ್ಲಿ ಎರಡು ಮಿನಿ ವಿಧಾನಸೌಧ, ಎರಡು ಸಬ್ ರಜಿಸ್ಟ್ರಾರ್ ಕಚೇರಿ, ಎರಡು ಇಂದಿರಾ‌ ಕ್ಯಾಂಟೀನ್ ಸೇರಿದಂತೆ ಸಾಕಷ್ಟು‌ ಕಚೇರಿಗಳು ಕಾರ್ಯಾರಂಭ ಮಾಡಿವೆ. ‌ಅಭಿವೃದ್ಧಿಯಲ್ಲಿ ಬಬಲೇಶ್ವರ ಮತಕ್ಷೇತ್ರ ಎಲ್ಲರಿಗೂ ಮಾದರಿಯಾಗುತ್ತಿದೆ ಎಂದು ಸಚಿವರು ಹೇಳಿದರು.
ಮುಖಂಡರಾದ ಸೋಮನಾಥ ಬಾಗಲಕೋಟ, ಆರ್. ಬಿ. ದೇಸಾಯಿ, ಯಾಕೂಬ್ ಜತ್ತಿ, ಬಸಯ್ಯ ವಿಭೂತಿಮಠ, ಪ್ರಭಾವತಿ ನಾಟೀಕಾರ ಮಾತನಾಡಿ, ಸಚಿವ ಎಂ. ಬಿ. ಪಾಟೀಲ ಅವರ ದೂರದೃಷ್ಠಿಯ ಫಲವಾಗಿ ಮತಕ್ಷೇತ್ರದಲ್ಲಿ ಸರ್ವಾಂಗೀಣ ಅಭಿವೃದ್ಧಿಯಾಗಿದೆ. ‌ಸಚಿವರಿಗೆ ನಾವೆಲ್ಲರೂ ಸದಾ ಬೆಂಬಲವಾಗಿ ನಿಲ್ಲೋಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ಧು ಗೌಡನವರ, ಮುಖಂಡರಾದ ಜಗದೀಶಗೌಡ ಪಾಟೀಲ, ಶೋಭಾ ಹಲ್ಯಾಳ, ವಿಜುಗೌಡ ಪಾಟೀಲ, ಡಾ. ಗಜಾನನ ಮಹಿಶ್ಯಾಳೆ, ಯಮನಪ್ಪ‌ ಮಲಕನವರ, ಈರಣ್ಣಗೌಡ ಬಿರಾದಾರ, ವಿ. ಎಂ. ಪಾಟೀಲ, ಕೆ.ಎನ್.ಎನ್.ಎಲ್ ಎಇಇ ಅಂಬಣ್ಣ ಹರಳಯ್ಯ, ಎಇ ಮಹಾದೇವ ನಡಗಡ್ಡಿ, ತಹಸೀಲ್ದಾರ ಸುರೇಶ ಚವಲರ, ತಾ. ಪಂ. ಕಾರ್ಯ ನಿರ್ವಹಣಾಧಿಕಾರಿ ಬಸವಣ್ಣೆಪ್ಪ ಬಿರಾದಾರ, ಪ. ಪಂ. ಮುಖ್ಯಾಧಿಕಾರಿ ರಾಘು‌ ನಡುವಿನಮನಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.