ಜಿಲ್ಲಾ ಉಸ್ತುವಾರಿ ಸಚಿವರಿಂದ ಗೃಹ ಆರೋಗ್ಯ ಯೋಜನೆ ಕೈಪಿಡಿ ಬಿಡುಗಡೆ ಮಾಡಿದ ಸಚಿವ ಎಂ.ಬಿ.ಪಾಟೀಲ ಸಲಹೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಆರೋಗ್ಯ ಯೋಜನೆಯ ಕೈಪಿಡಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಖಾತೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಶುಕ್ರವಾರ ಸಚಿವರ ಗೃಹ ಕಚೇರಿಯಲ್ಲಿ ಬಿಡುಗಡೆ ಮಾಡಿದರು.
ಜಿಲ್ಲೆಯಾದ್ಯಂತ ಅಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಯನ್ನು ಬಲಪಡಿಸುವ ಗುರಿಯನ್ನು ಈ ಯೋಜನೆ ಹೊಂದಿದೆ. ಈ ಕಾರ್ಯಕ್ರಮದಡಿಯಲ್ಲಿ ೩೦ ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ೧೪ ಅಸಾಂಕ್ರಾಮಿಕ ರೋಗಗಳಾದ ಅಧಿಕ ರಕ್ತದೊತ್ತಡ, ಮಧುಮೇಹ, ಬಾಯಿ ಕ್ಯಾನ್ಸರ್, ಡಯಾಬೆಟಿಕ್ ಫೂಟ್ ಮತ್ತು ಡಯಾಬೆಟಿಕ್ ರೆಟಿನೋಪತಿ, ಮಾನಸಿಕ ಆರೋಗ್ಯ ಮತ್ತು ನರ ವೈಜ್ಞಾನಿಕ ಕಾಯಿಲೆಗಳು, ನಿದ್ರೆಯಲ್ಲಿ ಉಸಿರುಗಟ್ಟುವಿಕೆ, ದೀರ್ಘ ಕಾಲಿನ ಮೂತ್ರಪಿಂಡ ಕಾಯಿಲೆ, ದೀರ್ಘ ಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ, ಪಿತ್ತ ಜನಕಾಂಗದ ಕಾಯಿಲೆ ಮತ್ತು ರಕ್ತಹೀನತೆಯ ಕಾಯಿಲೆಗಳ ಕುರಿತು ತಿಳುವಳಿಕೆ ನೀಡಿ ಆರೋಗ್ಯ ತಪಾಸಣೆಯನ್ನು ಉಚಿತವಾಗಿ ನಡೆಸಲಾಗುವುದು.
ಅಸಾಂಕ್ರಾಮಿಕ ರೋಗಗಳನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆಹಚ್ಚಿ, ಸಕಾಲದಲ್ಲಿ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು, ವಿಕೇಂದ್ರಿಕೃತ ಆರೋಗ್ಯ ಸೇವೆಗಳ ಮೂಲಕ ನಿರಂತರ ಆರೈಕೆಯನ್ನು ಖಚಿತ ಪಡೆಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸಂಪತ್ ಗುಣಾರಿ, ಜಿಲ್ಲಾ ಶಸ್ತçಚಿಕಿತ್ಸಕರಾದ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಅಪ್ಪಾಸಾಹೇಬ ಇನಾಮದಾರ, ಪರಶುರಾಮ ಹಿಟ್ನಳ್ಳಿ, ಜಾನ್ ಕಟವಟಿ, ಅರ್ಚನಾ ಕುಲಕರ್ಣಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರೆಂದು ಪ್ರಕಟಣೆ ತಿಳಿಸಿದೆ.