ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಶುಚಿಗೊಳಿಸುವ ಕಾರ್ಮಿಕರಿಗೆ ಮತ್ತು ನಾಗರಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸ್ಥಳೀಯ ಪಟ್ಟಣ ಪಂಚಾಯಿತಿ ವತಿಯಿಂದ ‘ನಮಸ್ತೆ ದಿನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಿರೇಶ ಹಟ್ಟಿ ಮಾತನಾಡಿ, ದೇಶ ವ್ಯಾಪ್ತಿಯಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದೊಂದಿಗೆ ಜಂಟಿಯಾಗಿ ನಮಸ್ತೆ ಯೋಜನೆಯನ್ನು ಪ್ರಾರಂಭಿಸಿದ್ದು, ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರ (SSWs) ಸುರಕ್ಷತೆ ಮತ್ತು ಘನತೆಯನ್ನು ಕಾಪಾಡುವುದು ಮತ್ತು ನೈರ್ಮಲ್ಯ ಶುಚಿಗೊಳಿಸುವ ಕೆಲಸದಲ್ಲಿ ಸಾವುಗಳಾಗುವುದನ್ನು ತಡೆಗಟ್ಟುವುದು ಈ ಯೋಜನೆಯ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಡಿಪ್ಲೋಮಾ ಕಾಲೇಜಿನ ಪ್ರಾಚಾರ್ಯ ಎಂ.ಬಿ ಗರಸಂಗಿ ಪೌರಕಾರ್ಮಿಕರಿಗೆ ಒಳಚರಂಡಿ, ಚರಂಡಿ, ರಸ್ತೆಗಳು ಇತರಕಡೆ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಅನುಸರಿಸಬೇಕಾದ ಭದ್ರತಾ ಕ್ರಮಗಳ ಬಗ್ಗೆ ಮತ್ತು ಕಾರ್ಮಿಕರು ಧರಿಸಬೇಕಾದ ಉಡುಪುಗಳ ಕುರಿತು ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಪ.ಪಂ ಸದಸ್ಯರು, ಸಿಬ್ಬಂದಿಗಳು ಹಾಗೂ ಪೌರಾಕಾರ್ಮಿಕರು ಇದ್ದರು.