ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಕರ್ನಾಟಕ ಕಾರ್ಯನಿರತ ಪರ್ತಕರ್ತರ ಸಂಘ
ವಿಜಯಪುರ ಜಿಲ್ಲಾ ಘಟಕ ವತಿಯಿಂದ 2025ನೇ ಸಾಲಿನಲ್ಲಿ ಕೊಡಮಾಡುವ ಜಿಲ್ಲಾ ವಾರ್ಷಿಕ ಪ್ರಶಸ್ತಿಗೆ ಕೊಲ್ಹಾರ ತಾಲೂಕು ಕನ್ನಡಪ್ರಭ ಪತ್ರಿಕೆಯ ವರದಿಗಾರ ಮಲ್ಲಿಕಾರ್ಜುನ ಕುಬಕಡ್ಡಿ ಆಯ್ಕೆಯಾಗಿದ್ದಾರೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಕೊಲ್ಹಾರ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಅರುಣ ಬ ಔರಸಂಗ ತಿಳಿಸಿದ್ದಾರೆ.
ಜು.19 ಶನಿವಾರ ಬೆಳಿಗ್ಗೆ 10 ಗಂಟೆಗೆ ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಜವಳಿ, ಸಕ್ಕರೆ, ಕಬ್ಬು ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಸಂಸದ ರಮೇಶ ಜಿಗಜಿಣಗಿ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವ್ಹಿ. ಪ್ರಭಾಕರ್, ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕಾನಿಪ ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ತಿಳಿಸಿದ್ದಾರೆ ಎಂದು ಅರುಣ ಔರಸಂಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.