ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗಕ್ಕೆ ಸಂಬಂಧಿಸಿದ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರೈತರು ಹಾಗೂ ವಿದ್ಯುತ್ ಗ್ರಾಹಕರರೊಂದಿಗೆ ಜುಲೈ ೧೯ರ ಮಧ್ಯಾಹ್ನ ೩:೩೦ಕ್ಕೆ ಸಂವಾದ ಸಭೆಯನ್ನು ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗ ಕಚೇರಿಯಲ್ಲಿ ನಡೆಸಲಾಗುವುದು.
ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಂವಾದ ಸಭೆಯಲ್ಲಿ ಭಾಗವಹಿಸಿ,ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹೆಸ್ಕಾಂ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.