Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು
(ರಾಜ್ಯ ) ಜಿಲ್ಲೆ

ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ. ಈ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸಲು ಸಣ್ಣ ಕೈಗಾರಿಕೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಶುಕ್ರವಾರ ನಗರದ ಆಲಕುಂಟೆ ನಗರರದ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಜಿಲ್ಲಾ ಮಂಟಪ, ಲಾಯಿಟ್, ಮಾಯಿಕ್, ಫ್ಲಾವರ್ ಡೆಕೋರೇಶನ್ ಕೆಟರರ್ಸ್ ಮತ್ತು ಸಪ್ಲಾಯರ್ಸ್ ಮಾಲಿಕರ ಸಂಘ ಆಯೋಜಿಸಿದ್ದ ವಿಜಯಪುರ ಉತ್ಸವ- 2025 ಮತ್ತು 4ನೇ ಮಹಾ ಅಧಿವೇಶನ ಉದ್ಘಾಟಿಸಿ ಅವರು ಮಾತನಾಡಿದರು.
ಶಾಮಿಯಾನ ಸಂಘದವರನ್ನು ಬೆಳೆಸಲು ಮತ್ತು ಅವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸರಕಾರದ ಯೋಜನೆಗಳನ್ನು ಅವರಿಗೆ ತಲುಪಿಸಲಾಗುವುದು. ‌ವಿಜಯಪುರ ಜಿಲ್ಲೆಯಲ್ಲಿ ಪೆಂಡಾಲ್ ಮಾಲಿಕರು, ಕಾರ್ಮಿಕರ ಜೊತೆ ಆತ್ಮೀಯ ಸಂಬಂಧವಿದೆ. ನಮ್ಮ ತಂದೆಯವರ ಕಾಲದಿಂದಲೂ ವಿಜಯಪುರ ಶಾಮಿಯಾನ ಮಾಲಿಕರು ಮತ್ತು ಸಂಘದವರು ವ್ಯಾಪಾರಕ್ಕಿಂತ ಹೆಚ್ಚಾಗಿ ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿರುವುದು ಶ್ಲಾಘನೀಯವಾಗಿದೆ. ಶಾಮಿಯಾನ ಮಾಲಿಕರು ಮತ್ತು ಕಾರ್ಮಿಕರು ಹಗಲು ಮತ್ತು ರಾತ್ರಿ ಒತ್ತಡಗಳ ಮಧ್ಯೆ ಕೆಲಸ ಮಾಡುತ್ತಾರೆ. ಅವರು ಶ್ರಮಜೀವಿಗಳಾಗಿದ್ದು, ಶಿಸ್ತು, ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ. ಇಂದಿನ ಆಧುನಿಕತೆ ತಕ್ಕಂತೆ ಮಾಲಿಕರು ಮತ್ತು ಕಾರ್ಮಿಕರು ವೃತ್ತಿಕೌಶಲ್ಯವನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಇದೇ ವೇಳೆ ಜಿ.ಎಸ್.ಟಿ ಸಮಸ್ಯೆ ಬಗೆಹರಿಸುವಂತೆ ಶಾಮಿಯಾನ ಸಂಘದವರು ಮಾಡಿದ ಮನವಿಗೆ ಪ್ರತಿಕ್ರಿಯೆ ನೀಡಿದ ಸಚಿವ ಎಂ. ಬಿ. ಪಾಟೀಲ ಅವರು, ಈ ಕುರಿತು ಮನವಿ ಕೊಡಿ. ಸಿಎಂ ಗಮನಕ್ಕೆ ತಂದು ಕೇಂದ್ರ ಸರಕಾರದ ಗಮನ ಸೆಳೆಯಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ, ಗೊಳಸಾರದ ಅಭಿನವ ಪುಂಡಲಿಂಗ ಮಹಾಶಿವಯೋಗಿಗಳು, ಶ್ರದ್ಧಾನಂದ ಸ್ವಾಮೀಜಿ, ಶಾಮಿಯಾನ ಮಾಲಿಕರ ಸಂಘದ ಅಮರೇಶ ಟಿ. ಹಿರೇಮಠ, ಶಿವಾನಂದ ಆರ್. ಮಾನಕರ, ಜಿ. ಪೂರ್ಣಚಂದ್ರ ಬಾಬಯರಾವ, ಟಿ. ನರಸಿಂಗಮೂರ್ತಿ, ಪರ್ತಾರಸಿಂಗ್ ಕೋಚರ, ಇಂದ್ರಚಂದ್ರ, ಮುಖಂಡರಾದ ಮಳುಗೌಡ ಪಾಟೀಲ, ಗೂಳಪ್ಪ ಶಟಗಾರ, ಮಹಾದೇವ ರಾಠೋಡ, ವಿ. ಸಿ. ನಾಗಠಾಣ, ಸಂಗು ಸಜ್ಜನ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.