ಕೊಲ್ಹಾರ: ತಾಲೂಕಿನ ಮಸೂತಿ ಗ್ರಾಮದ ಶ್ರೀ ವೀರೇಶ್ವರ ವಿದ್ಯಾವರ್ಧಕ ಸಂಘದ ಅನುದಾನಿತ ಶ್ರೀ ಗುರು ಸಂಗನಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಜಗದೀಶ್ವರ ಸಾಲಳ್ಳಿಯವರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.
ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಬೆಂಗಳೂರು ಹಾಗೂ ಜಿಲ್ಲಾ ಘಟಕ ವಿಜಯಪುರ ಇವರು ಕೊಡಮಾಡುವ ಪ್ರಸಕ್ತ ಸಾಲಿನ ಕಾರ್ಯಕ್ರಮ ಸಿಂದಗಿ ಪಟ್ಟಣದ ಭಾವಿಕಟ್ಟಿ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸಿಂದಗಿ ಸಾರಂಗಮಠದ ಡಾ|| ಪ್ರಭು ಸಾರಂಗದೇವ ಶಿವಾಚಾರ್ಯರು, ಶಾಸಕರಾದ ಅಶೋಕ ಮನಗೂಳಿ, ಕ.ರಾ.ಅ.ಪ್ರಾ.ಶಾ.ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಎನ್ ರಾಜಗೋಪಾಲ್, ಜಿಲ್ಲಾಧ್ಯಕ್ಷ ಶಿವಾನಂದ ಹಿರೇಕುರುಬರ ಸೇರಿದಂತೆ ರಾಜ್ಯ ಹಾಗೂ ಜಿಲ್ಲೆಯ ವಿವಿಧ ಪದಾಧಿಕಾರಿಗಳು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Related Posts
Add A Comment