ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನ ಕಾರ್ಯಕ್ರಮದಲ್ಲಿ ಸಾಧನೆಗೈದ ವಿಜಯ ಕರ್ನಾಟಕ ವರದಿಗಾರರಾದ ಶಿವಾನಂದ ಸಜ್ಜನ, ಕನ್ನಡಪ್ರಭ ವರದಿಗಾರರಾದ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಮಲ್ಲಿಕಾರ್ಜುನ ಕುಬಕಡ್ಡಿ, ಸುವರ್ಣ ನ್ಯೂಸ್ ಕ್ಯಾಮರಾಮೆನ್ ಅಪ್ಪು ಚಿನಗುಂಡಿ ಸೇರಿದಂತೆ ಜಿಲ್ಲೆಯ ಒಟ್ಟು ೧೮ ಪತ್ರಕರ್ತರಿಗೆ ೨೦೨೫ನೇ ಸಾಲಿನ ಜಿಲ್ಲಾ ವಾರ್ಷಿಕ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಚಿವದ್ವಯರಾದ ಎಂ.ಬಿ.ಪಾಟೀಲ ಮತ್ತು ಶಿವಾನಂದ ಪಾಟೀಲ ಅವರು ಸೇರಿದಂತೆ ಕಾನಿಪದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರ, ಪ್ರಧಾನ ಕಾರ್ಯದರ್ಶಿ ಜಿ.ಲೋಕೇಶ, ಭವಾನಿಸಿಂಗ್ ರಾಠೋಡ, ಎಸ್ಪಿ ಲಕ್ಷö್ಮಣ ನಿಂಬರಗಿ, ಡಿವೈಎಸ್ಪಿ ಬಸವರಾಜ ಯಲಿಗಾರ ಮತ್ತು ಕಾನಿಪ ಜಿಲ್ಲಾಧ್ಯಕ್ಷರಾದ ಪ್ರಕಾಶ ಬೆಣ್ಣೂರ, ಕಾನಿಪ ಜಿಲ್ಲಾ ಉಪಾಧ್ಯಕ್ಷರಾದ ಇಂದುಶೇಖರ ಮಣೂರ ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಕಾನಿಪ ಪದಾಧಿಕಾರಿಗಳು ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ನೀಡಿ ಗೌರವಿಸಿದರು ಮತ್ತು ಇದೇ ವೇಳೆ ಪತ್ರಕರ್ತರ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಗೌರವಿಸಿ ಪ್ರೋತ್ಸಾಹಿಸಲಾಯಿತು.

