Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೨೫ ರಿಂದ ಬಸವ ಸಂಸ್ಕ್ರತಿ ಪ್ರವಚನ ಆರಂಭ
(ರಾಜ್ಯ ) ಜಿಲ್ಲೆ

ಜು.೨೫ ರಿಂದ ಬಸವ ಸಂಸ್ಕ್ರತಿ ಪ್ರವಚನ ಆರಂಭ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಸಿಬಿಎಸ್ಇ ಶಾಲಾ ಆವರಣದಲ್ಲಿರುವ ನಂದೀಶ್ವರ ರಂಗಮಂದಿರದಲ್ಲಿ ಶ್ರಾವಣ ಮಾಸದಂಗವಾಗಿ ಹಾಗೂ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ಜಾತ್ರಾಮಹೋತ್ಸವದಂಗವಾಗಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ, ಬಸವೇಶ್ವರ ಜಾತ್ರಾ ಉತ್ಸವ ಸಮಿತಿ ಹಾಗೂ ಬಸವೇಶ್ವರ ಸೇವಾ ಸಮಿತಿಯ ಸಹಯೋಗದಲ್ಲಿ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿಯವರಿಂದ ಒಂದು ತಿಂಗಳ ಕಾಲ ಹಮ್ಮಿಕೊಂಡಿರುವ ಬಸವ ಸಂಸ್ಕ್ರತಿ ಪ್ರವಚನದ ಉದ್ಘಾಟನೆ ಕಾರ್ಯಕ್ರಮ ಜು. ೨೫ ರಂದು ಸಂಜೆ ೬ ಗಂಟೆಗೆ ನಡೆಯಲಿದೆ ಎಂದು ಬಸವೇಶ್ವರ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ರವಿ ರಾಠೋಡ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮವನ್ನು ಸಚಿವ ಶಿವಾನಂದ ಪಾಟೀಲ ಉದ್ಘಾಟಿಸುವರು. ಕಾರ್ಯಕ್ರಮದ ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಪ್ರವಚನಕಾರ ಪ್ರಭು ಚನ್ನಬಸವ ಸ್ವಾಮೀಜಿ ವಹಿಸುವರು. ನೇತೃತ್ವವನ್ನು ಶಿವಾನಂದ ಈರಕಾರ ಮುತ್ಯಾ ವಹಿಸುವರು. ಅಧ್ಯಕ್ಷತೆಯನ್ನು ಬಸವೇಶ್ವರ ಸೇವಾ ಸಮಿತಿಯ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ ವಹಿಸುವರು. ಮುಖ್ಯ ಅತಿಥಿಗಳಾಗಿ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಗುರುನಾಥ ದಡ್ಡಿ, ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಬಸವೇಶ್ವರ ಅರ್ಬನ್ ಬ್ಯಾಂಕಿನ ಅಧ್ಯಕ್ಷ ಲೋಕನಾಥ ಅಗರವಾಲ, ನ್ಯಾಯವಾದಿ ಬಿ.ಕೆ.ಕಲ್ಲೂರ, ವಿಮಾ ಸಹಕಾರ ಮಹಾ ಮಂಡಳ ಅಧ್ಯಕ್ಷ ಶಿವನಗೌಡ ಬಿರಾದಾರ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಸುರೇಶ ಹಾರಿವಾಳ, ಬಸವೇಶ್ವರ ಅರ್ಬನ ಬ್ಯಾಂಕಿನ ನಿರ್ದೇಶಕ ಜಗದೀಶ ಕೊಟ್ರಶೆಟ್ಟಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಜನಪದ ಗಾಯಕ ಬಸವರಾಜ ಹಾರಿವಾಳ, ಬಸವೇಶ್ವರ ಅರ್ಬನ ಬ್ಯಾಂಕಿನ ಉಪಾಧ್ಯಕ್ಷ ಬಸವರಾಜ ಗೊಳಸಂಗಿ, ಬಸವೇಶ್ವರ ಸೇವಾ ಸಮಿತಿ ನಿರ್ದೇಶಕ ಸಂಗಣ್ಣ ಕಲ್ಲೂರ, ಟಿಎಪಿಸಿಎಂಎಸ್ ಅಧ್ಯಕ್ಷ ಶೇಖರಗೌಡ ಪಾಟೀಲ ಆಗಮಿಸುವರು. ಪ್ರವಚನದಲ್ಲಿ ಗದಗ ವೀರೇಶ್ವರ ಪುಣ್ಯಾಶ್ರಮದ ಸಂಗಮೇಶ ಪಾಟೀಲ ಸಂಗೀತ ಸೇವೆ, ತೋಟೇಂದ್ರ ಗದಗ ಅವರು ತಬಲಾ ಸೇವೆ ನೀಡುವರು. ಪ್ರವಚನವು ಪ್ರತಿನಿತ್ಯ ಸಂಜೆ ೬.೩೦ ರಿಂದ ೮ ಗಂಟೆಯವರೆಗೆ ನಡೆಯಲಿದೆ. ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಸದ್ಭಕ್ತರು ಪ್ರವಚನದ ಸದುಪಯೋಗ ಪಡೆದುಕೊಂಡು ಪುನೀತರಾಗಬೇಕೆಂದರು.
ಬಸವೇಶ್ವರ ಸೇವಾ ಸಮಿತಿಯ ಎಂ.ಜಿ.ಆದಿಗೊಂಡ, ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಮಾತನಾಡಿ, ನಾಡಿನ ಖ್ಯಾತ ಪ್ರವಚನಕಾರರಾಗಿರುವ ಮೋಟಗಿ ಮಠದ ಪ್ರಭು ಚನ್ನಬಸವ ಸ್ವಾಮೀಜಿಯವರು ಒಂದು ತಿಂಗಳ ಕಾಲ ಬಸವ ಸಂಸ್ಕ್ರತಿ ಕುರಿತು ಪ್ರವಚನ ನೀಡಲಿದ್ದಾರೆ. ಶ್ರಾವಣ ಮಾಸದಲ್ಲಿ ಪ್ರತಿನಿತ್ಯ ಸಂಜೆ ನಡೆಯುವ ಈ ಪ್ರವಚನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದ್ಭಕರು ಆಗಮಿಸಿ ಪ್ರವಚನವನ್ನು ಆಲಿಸಬೇಕು. ಅ.೧೧ ರಿಂದ ಐದು ದಿನಗಳ ಕಾಲ ನಡೆಯಲಿರುವ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ಜಾತ್ರಾಮಹೋತ್ಸವದ ಸಿದ್ಧತೆ ನಡೆದಿದೆ. ಜಾತ್ರಾಮಹೋತ್ಸವದಂಗವಾಗಿ ಬರುವ ವಿವಿಧ ಮನರಂಜನಾ ಸಾಮಾನುಗಳನ್ನು ಹಾಕಲು ಮುದ್ದೇಬಿಹಾಳ ರಸ್ತೆಯಲ್ಲಿರುವ ಕಾಳಹಸ್ತೇಶ್ವರಮಠದ ಜಮೀನನಲ್ಲಿ ವ್ಯವಸ್ಥೆ ಮಾಡಲಾಗುತ್ತಿದೆ. ಜಾತ್ರಾಮಹೋತ್ಸವದಂಗವಾಗಿ ಧಾರ್ಮಿಕ ಕಾರ್ಯಕ್ರಮ, ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಶೇಖರ ಗೊಳಸಂಗಿ, ಡಾ.ಬಸವರಾಜ ಕೋಟಿ, ಉಮೇಶ ಹಾರಿವಾಳ, ಸಂಕನಗೌಡ ಪಾಟೀಲ, ಎಸ್.ಆರ್.ಕಲ್ಲೂರ,ಬಸವರಾಜ ಗೊಳಸಂಗಿ, ಜಾತ್ರಾ ಉತ್ಸವ ಸಮಿತಿಯ ಪದಾಧಿಕಾರಿಗಳಾದ ನಂದೀಶ ಪಾಟೀಲ, ಮಂಜು ಜಾಲಗೇರಿ, ಲಾಳೇಸಾ ಕೊರಬು, ಮಹೇಶ ಹಿರೇಕುರಬರ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.