Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಾಸ್ಟೆಲ್‌ಗಳ ಮೂಲ ಸೌಲಭ್ಯ ಸರಿಪಡಿಸಲು ಎಬಿವಿಪಿ ಆಗ್ರಹ
(ರಾಜ್ಯ ) ಜಿಲ್ಲೆ

ಹಾಸ್ಟೆಲ್‌ಗಳ ಮೂಲ ಸೌಲಭ್ಯ ಸರಿಪಡಿಸಲು ಎಬಿವಿಪಿ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್‌ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಹೋರಾಟಕ್ಕೆ ಕರೆಯ ಮೇರೆಗೆ ರಾಜ್ಯದ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಅಖಿಲ ಭಾರತೀಯ ವಿದ್ಯಾರ್ಥಿ ಪತಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು.
ಒಂದು ದೇಶ ಹಾಗೂ ರಾಜ್ಯ ಅಭಿವೃದ್ಧಿಯಾಗಬೇಕೆಂದರೆ ಅಲ್ಲಿನ ಶಿಕ್ಷಣ ವ್ಯವಸ್ಥೆಗೆ ಬೇಕಾಗಿರುವ ಮೂಲಭೂತ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಒದಗಿಸುವುದು ಸರ್ಕಾರಗಳ ಆದ್ಯ ಕರ್ತವ್ಯ, ಗ್ರಾಮೀಣ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಆದರೆ ಅವುಗಳ ಸಮರ್ಪಕ ಅನುಷ್ಠಾನವಾಗದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸರಿಯಾದ ಹಾಸ್ಟೆಲ್ ವ್ಯವಸ್ಥೆ ಹಾಗೂ ವಿದ್ಯಾರ್ಥಿ ವೇತನವನ್ನು ನೀಡದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ.
ಹಾಸ್ಟೆಲ್‌ಗಳ ಸಮಸ್ಯೆಗಳನ್ನು ಸರಿಪಡಿಸಿ: ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯಲ್ಲಿ ೧,೨೫೮ ಹಾಸ್ಟೆಲ್ ಗಳಿದ್ದು ೧,೬೮,೮೩೩ ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ವಾಸವಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ೧೯೭೨ ವಸತಿ ನಿಲಯಗಳಿದ್ದು ೧.೮೭,೨೦೦ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಉಳಿಯಲು ಅವಕಾಶ ನೀಡಬಹುದಾಗಿದೆ. ಆದರೆ ಕರ್ನಾಟಕ ರಾಜ್ಯದಲ್ಲಿ ಹಿಂದಿನ ೩ ವರ್ಷಗಳ ಸರಕಾರದ ವರದಿ ಪ್ರಕಾರ ಅರ್ಜಿ ಸಲ್ಲಿಸಿದ ೧೦೦ ವಿದ್ಯಾರ್ಥಿಗಳಲ್ಲಿ ೪೦ ರಿಂದ ೫೦ ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳಲ್ಲಿ ಅವಕಾಶ ಸಿಗುತ್ತಿದೆ. ಇನ್ನುಳಿದ ವಿದ್ಯಾರ್ಥಿಗಳು ವಸತಿ ನಿಲಯಗಳಿಂದ ವಂಚಿತರಾಗುತ್ತಿದ್ದಾರೆ ಸರ್ಕಾರ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಿಗೆ ಹೊಸ ವಸತಿ ನಿಲಯಗಳನ್ನು ಘೋಷಣೆ ಮಾಡಬೇಕು. ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳುಗಳಿAದ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ನೀಡುತ್ತಿದ್ದ ಕಿಟ್ ಗಳು ತಲುಪುತ್ತಿಲ್ಲ. ೪೦-೫೦ ವಿದ್ಯಾರ್ಥಿಗಳಿಗೆ ಸೇರಿ ೨-೩ ಶೌಚಾಲಯಗಳು ಇವೆ. ೧೦೦ ವಿದ್ಯಾರ್ಥಿಗಳು ಇರಬೇಕಾದ ವಸತಿ ನಿಲಯಗಳಲ್ಲಿ ೧೪೦ – ೧೫೦ ವಿದ್ಯಾರ್ಥಿಗಳನ್ನ ಇರಿಸುವಂತಾಗಿದೆ. ಪ್ರತಿ ತಿಂಗಳು ಊಟದ ವೆಚ್ಚಕ್ಕೆ ಪ್ರತಿ ವಿದ್ಯಾರ್ಥಿಗೆ ೧. ೮೫೦ ರೂ ಮಾತ್ರ ನೀಡಲಾಗುತ್ತಿದೆ ಈ ಹಣದಲ್ಲಿ ಡಯಟ್ ಚಾರ್ಟ್ ನಲ್ಲಿ ಇರುವಂತೆ ಸರಿಯಾಗಿ ಆಹಾರವನ್ನು ಕೊಡುವುದಕ್ಕೆ ಆಗುವುದಿಲ್ಲ ಕಾರಣ ಸರಕಾರ ಈ ಹಣವನ್ನು ಹೆಚ್ಚಳ ಮಾಡಬೇಕು. ಈ ರೀತಿ ಹಲವಾರು ಸಮಸ್ಯೆಗಳು ರಾಜ್ಯದ ವಸತಿ ನಿಲಯಗಳಲ್ಲಿದ್ದು ರಾಜ್ಯ ಸರ್ಕಾರ ತಕ್ಷಣವೇ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯಕ್ಕೆ ವಿಶೇಷ ಅನುದಾನವನ್ನ ನೀಡಿ ಸುವ್ಯವಸ್ಥಿತ ಹಾಸ್ಟೆಲಗಳನ್ನು ನಿರ್ಮಾಣ ಮಾಡಬೇಕು.
ವಿದ್ಯಾರ್ಥಿ ವೇತನ ಬಿಡುಗಡೆ ಮಾಡಿ : ಲಕ್ಷಾಂತರ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ನಂಬಿ ಶಿಕ್ಷಣವನ್ನ ಪಡೆಯುತ್ತಿದ್ದಾರೆ. ತಮ್ಮ ಶಿಕ್ಷಣಕ್ಕೆ ಸರ್ಕಾರಗಳು ನೀಡುವ ವಿದ್ಯಾರ್ಥಿವೇತನ ಸಹಕಾರಿಯಾಗಲಿದೆ ಎಂಬ ಭಾವನೆಯೊಂದಿಗೆ ಅರ್ಜಿ ಸಲ್ಲಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ವಿದ್ಯಾರ್ಥಿವೇತನ ಜಮೆಯಾಗದೆ ಬಹಳಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸಿರುವುದು, ವಿದ್ಯಾಸಿರಿ ವಿದ್ಯಾರ್ಥಿ ವೇತನ ಸರಿಯಾಗಿ ಜಮೆಯಾಗದೇ ಇರುವುದು. ರೈತ ವಿದ್ಯಾನಿಧಿಯನ್ನು ರದ್ದುಗೊಳಿಸಿರುವುದು, ಹಾಗೂ ಇನ್ನುಳಿದ ವಿದ್ಯಾರ್ಥಿ ವೇತನವು ಸರಿಯಾಗಿ ವಿದ್ಯಾರ್ಥಿಗಳಿಗೆ ಜಮೆ ಮಾಡದೆ ವಿದ್ಯಾರ್ಥಿ ವಿರೋಧಿ ನೀತಿಯನ್ನ ಅನುಸರಿಸುತ್ತಿರುವ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರು ತಕ್ಷಣವೇ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡುವ ನಿಟ್ಟಿನಲ್ಲಿ ಕ್ರಮಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಮಯದಲ್ಲಿ ಸುಜ್ಞಾತ ಕುಲಕರ್ಣಿ, ಐಶ್ವರ್ಯ ಆಸಂಗಿ, ಚೇತನ್ ಕೊರವರ್, ಸ್ನೇಹಾ ಹಿರೇಮಠ ದಾನಮ್ಮ ಹೊಸಮನಿ, ಅಶ್ವಿನಿ ಜಾಧವ್, ಸುನಿಲ್ ರಾಠೋಡ್, ಅಶೋಕ್ ಬೂದಿಹಾಳ, ಚೇತನ್ ಕೊರವ , ಪ್ರವೀಣ್ ಕುಮಾರ್ ಶೆಟ್ಟಿ, ದುಂಡುಪ್ಪ ನೇಲೋಗಿ ಸುಮಾರು ೧೦೦ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇದ್ದರು.

ಪ್ರಮುಖ ಬೇಡಿಕೆಗಳು

ಹಾಸ್ಟೆಲಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಿ ಹಾಸ್ಟೆಲಗಳಿಗೆ ಪ್ರವೇಶಾತಿ ನೀಡಬೇಕು. ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಕಿಟ್ ಗಳನ್ನ ತಕ್ಷಣವೇ ಎಲ್ಲ ವಿದ್ಯಾರ್ಥಿಗಳಿಗೆ ನೀಡಬೇಕು. ರಾಜ್ಯದಲ್ಲಿ ಸಮಾಜ ಕಲ್ಯಾಣ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಹಾಸ್ಟೆಲ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು ಪ್ರತಿ ವಿದ್ಯಾರ್ಥಿಗೆ ಊಟಕ್ಕೆ ನೀಡುವ ೧೮೫೦ ರೂ ಹಣವನ್ನು ಹೆಚ್ಚಳ ಮಾಡಬೇಕು. ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನವನ್ನು ತಕ್ಷಣವೇ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಬೇಕೆಂದು ಆಗ್ರಹಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.