Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»೩೭೧ಜೆ ಮೀಸಲಾತಿಗೆ ವಿಜಯಪುರ ಜಿಲ್ಲೆ ಸೇರಿಸಲು ಆಗ್ರಹ
(ರಾಜ್ಯ ) ಜಿಲ್ಲೆ

೩೭೧ಜೆ ಮೀಸಲಾತಿಗೆ ವಿಜಯಪುರ ಜಿಲ್ಲೆ ಸೇರಿಸಲು ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯನ್ನು ೩೭೧ಜೆ ಮೀಸಲಾತಿಗೆ ಸೇರಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಪದಾಧಿಕಾರಿಗಳು ವಿಜಯಪುರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೆನೆಯ ಜಿಲ್ಲಾಧ್ಯಕ್ಷ ಕೃಷ್ಣಾ ಭೋಸಲೆ ಮಾತನಾಡಿ, ವಿಜಯಪುರ ಜಿಲ್ಲೆಗೆ ಆದ ಐತಿಹಾಸಿಕ ಅನ್ಯಾಯ ಸರಿಪಡಿಸಲು ೩೭೧ಜೆ ಮೀಸಲಾತಿ ಒದಗಿಸುವುದಾಗಿ ಪಕ್ಷದವರು ಹಾಗೂ ಪಕ್ಷೇತರ ಅಭ್ಯರ್ಥಿಗಳು ಪ್ರಣಾಳಿಕೆಯಲ್ಲಿ ಘೋಷಿಸಿದ್ದರು. ವಿಜಯಪುರ ಜಿಲ್ಲೆಯನ್ನು ೩೭೧ಜೆ ಮೀಸಲಾತಿಗೆ ಸೇರಿಸಬೇಕು. ವಿಜಯಪುರ ಜಿಲ್ಲೆಯು ಅತಿ ಹಿಂದುಳಿದ ಪ್ರದೇಶವಾಗಿದೆ. ಮೀಸಲಾತಿ ವಿರೋಧಿಸಿದ ಪಕ್ಷ ಮತ್ತು ಮುಖಂಡರು ಯುವ ಜನರ ಮತ ಪಡೆಯುವಗೋಸ್ಕರ ೩೭೧ ಜೆ ಕಲ್ಯಾಣ ಕರ್ನಾಟಕ ಮೀಸಲಾತಿಯನ್ನು ಒದಗಿಸುವುದಾಗಿ ಭರವಸೆ ನೀಡಿದ್ದರು. ಚುನಾವಣೆ ಮುಗಿದ ನಂತರ ಯಾವೊಬ್ಬ ಜನಪ್ರತಿನಿಧಿಗಳು ವಿಜಯಪುರ ಜಿಲ್ಲೆಗೆ ನ್ಯಾಯಯುತವಾಗಿ ಸಿಗಬೇಕಾಗಿರುವ ಶೈಕ್ಷಣಿಕ ಹಾಗೂ ಉದ್ಯೋಗದ ಮೀಸಲಾತಿ ಒದಗಿಸುವ ಪಯತ್ನ ಮಾಡದೇ ಇರವುದು ದುರಂತದ ಸಂಗತಿ. ಪದೇ ಪದೇ ಸುಳ್ಳು ಭರವಸೆಗಳನ್ನು ರಾಜಕಾರಣಿಗಳು ನೀಡಿ ಜನರಿಗೆ ದಿಕ್ಕು ತಪ್ಪಿಸುತ್ತಿದ್ದಾರೆ. ಇಂದಿಗೆ ಮೀಸಲಾತಿ ಜಾರಿಯಾಗಿ ೧೦ ವರ್ಷ ಗತಿಸಿವೆ. ಜಿಲ್ಲೆಯು ಅಭಿವೃದ್ಧಿಯಿಂದ ಹತ್ತು ವರ್ಷ ವಂಚಿತವಾಯಿತು.
ಈ ಸಂದರ್ಭದಲ್ಲಿ ಜಯ ಕರ್ನಾಟಕ ರಕ್ಷಣಾ ಸೇನೆಯ ರಾಜ್ಯ ಉಪಾಧ್ಯಕ್ಷರಾದ ಮಂಜುಳಾ ವಾಲಿ ಮಾತನಾಡಿ, ವಿಜಯಪುರ ಜಿಲ್ಲೆಯು ೩೭೧ ಜೆ ವಿಶೇಷ ಸ್ಥಾನ ಮಾನ ಪಡೆಯಲು ಎಲ್ಲ ಅರ್ಹತೆ ಹೊಂದಿದೆ. ಜೊತೆಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಹಾಗೂ ಕಲಬುರಗಿ ಉಚ್ಛ ನ್ಯಾಯಾಲಯ ಪೀಠದ ಆಧೀನದಲ್ಲಿ ಜಿಲ್ಲೆಯು ಒಳಪಟ್ಟಿದೆ. ಕೂಡಲೇ ವಿಜಯಪುರ ಜಿಲ್ಲೆಯನ್ನು ಬಿಟ್ಟು ಹೋದ ಪ್ರದೇಶವೆಂದು ಪರಿಗಣಿಸಿ ೩೭೧ಜೆ ಮೀಸಲಾತಿ ಅಡಿ ಸೇರಿಸಿ ಈ ಭಾಗದ ಪ್ರತಿಯೊಬ್ಬ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಗಳವೆ, ಜಿಲ್ಲಾಧ್ಯಕ್ಷರಾದ ವಾಣೀಶ್ರೀ ಪಟ್ಟಣಶೆಟ್ಟಿ, ಬಸವನ ಬಾಗೇವಾಡಿ ತಾಲೂಕಾಧ್ಯಕ್ಷರಾದ ಸಿದ್ದಮ್ಮ ಹೇರೂರ, ಜಿಲ್ಲಾ ಉಪಾಧ್ಯಕ್ಷರಾದ ಸಮಿತ್ರಾ ಪಟ್ಟಣಶೆಟ್ಟಿ, ಎಸ್ಸಿ ಎಸ್ಟಿ ಘಟಕ ಜಿಲ್ಲಾಧ್ಯಕ್ಷ ಯಮನಪ್ಪ ಬೂದಿಹಾಳ, ಜಿಲ್ಲಾ ಕಾನೂನು ಸಲಹೆಗಾರರಾದ ಉತ್ತಮ ಹೊಸಮನಿ, ವಿಜಯಪುರ ತಾಲೂಕಾಧ್ಯಕ್ಷರಾದ ವಿಠ್ಠಲ ತಳವಾರ, ಜಿಲ್ಲಾ ಮುಖಂಡರಾದ ಸಕಾರಾಮ ಪವಾರ, ಜಿಲ್ಲಾ ಮುಖಂಡರಾದ ರಾಜು ಕೋಟ್ಯಾಳ, ಕೇಧಾರನಾಥ ರಜಪೂತ,ಶಂಕರಗೌಡ ಬಿರಾದಾರ, ಮಹಾದೇವ ಢಗೆ, ರಾಜು ಬಿಸೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.