ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಗ್ರಾಮದಲ್ಲಿ ತೇರದಾಳ ಶಾಸಕ ಸಿದ್ದು ಸವದಿಯವರ ೬೬ ನೇ ಜನ್ಮದಿನಾಚರಣೆಯ ನಿಮಿತ್ತ ಸ್ಥಳಿಯ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯ, ಸರಕಾರಿ ಪ್ರೌಢಶಾಲೆ ಹಾಗೂ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಬಡ ವಿದ್ಯಾರ್ಥಿಗಳಿಗೆ ನೋಟ್‌ಬುಕ್‌ಗಳನ್ನು ವಿತರಿಸಲಾಯಿತು.
ಜನ್ಮದಿನಾಚರಣೆಯ ನಿಮಿತ್ತ ಮಂಗಳವಾರ ಮುಂಜಾನೆ ಸ್ಥಳಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಆಗಮಿಸಿದ ಶಾಸಕ ಸವದಿಯವರಿಗೆ ಗ್ರಾಮದ ಪ್ರಮುಖರಾದ ಶಾಸಕರ ಸೂಚನೆಯಂತೆ ಶಾಲು, ಹೂವಿನಹಾರ ತರದೆ ಬಡ ವಿದ್ಯಾರ್ಥಿಗಳಿಗೆ ಅಗತ್ಯವಾಗುವ ನೋಟ್‌ಬುಕ್ ನೀಡುವ ಮೂಲಕ ಶುಭಾಶಯ ಕೋರಿದರು. ಸ್ಥಳದಲ್ಲಿಯೇ ಬಡ ವಿದ್ಯಾರ್ಥಿಗಳನ್ನು ಕರೆಸಿ ಶಾಸಕರ ಕೈಯಿಂದಲೇ ಅವುಗಳನ್ನು ವಿತರಿಸುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದರು. ತಾ.ಪಂ.ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ಗ್ರಾ.ಪಂ. ಮಾಜಿ ಅಧ್ಯಕ್ಷ ಆನಂದ ಕವಟಿ, ಬಸವರಾಜ ಕುಂಚನೂರ ಸೇರಿದಂತೆ ಹಲವಾರು ಜನ ಪ್ರಮುಖರು ಈಸಂಧರ್ಬದಲ್ಲಿ ಉಪಸ್ಥಿತರಿದ್ದರು.

