Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ :ಆಶಾ ಪಾಟೀಲ
(ರಾಜ್ಯ ) ಜಿಲ್ಲೆ

ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ :ಆಶಾ ಪಾಟೀಲ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಒದಗಿಸುವ ಮೂಲಕ ಡಿಜಿಟಲ್ ಟಚ್ ನೀಡಲಾಗುತ್ತಿದೆ ಎಂದು ಆಶಾ ಎಂ. ಪಾಟೀಲ ಹೇಳಿದ್ದಾರೆ.
ಗುರುವಾರ ತಿಕೋಟಾ ತಾಲೂಕಿನ ಅರಕೇರಿಯ ಸರಕಾರಿ ಪ್ರೌಢಶಾಲೆಯಲ್ಲಿ ಎಕಸ್ ಸಂಸ್ಥೆಯಿಂದ ಸಿ.ಎಸ್.ಆರ್ ಅನುದಾನದಡಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ಮತ್ತು ಧಾಸ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಅರಕೇರಿ ಎಲ್.ಟಿ-3ರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಸಲಕರಣೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮಹಾನಗರಗಳ ಖಾಸಗಿ ಶಾಲೆಗಳಲ್ಲಿ ಸಿಗುವ ಅತ್ಯಾಧುನಿಕ ಸೌಲಭ್ಯಗಳನ್ನು ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಒದಗಿಸಲು ಸಚಿವ ಎಂ. ಬಿ. ಪಾಟೀಲ ಅವರು ಸಿ.ಎಸ್.ಆರ್ ಅನುದಾನವನ್ನು ಬಳಸಿ ಸ್ಮಾರ್ಡ್ ಬೋರ್ಡ್ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಂಡಿದ್ದಾರೆ. ಈ ಅನುದಾನವನ್ನು ಬಳಸಿ ಬಬಲೇಶ್ವರ ಮತಕ್ಷೇತ್ರದ ಸರಕಾರಿ ಶಾಲೆಗಳಲ್ಲಿ ಕಳೆದ ವರ್ಷ 25 ಮತ್ತು ಈ ವರ್ಷ 25 ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸಲಾಗಿದೆ. ಇದರಿಂದಾಗಿ ಗ್ರಾಮೀಣ ಭಾಗದ ಮಕ್ಕಳು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಮತ್ತೀತರ ವಿಷಯಗಳನ್ನು ದೃಶ್ಯಮಾಧ್ಯಮ (ಆಡಿಯೋ-ವಿಶುವಲ್ಸ್) ಮೂಲಕ ಸರಳವಾಗಿ ಕಲಿಯಬಹುದಾಗಿದೆ. ಮಕ್ಕಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಶಿಕ್ಷಕರು ಕೂಡಾ ಸ್ಮಾರ್ಟ್ ಕ್ಕಾಸ್ ಬಗ್ಗೆ ಸಂಪೂರ್ಣ ಬಗ್ಗೆ ಮಾಹಿತಿ ಪಡೆದು ಮಕ್ಕಳಿಗೆ ಗುಣಮಟ್ಟದ ಭೋದನೆ ಮಾಡಬೇಕು. ಅಲ್ಲದೇ, ಮಕ್ಕಳ ಹಾಜರಾತಿ ಬಗ್ಗೆ ಗಮನ ಹರಿಸಬೇಕು. ಅದರ ಜೊತೆಗೆ ಮೊಬೈಲ್ ಗಿಳಿನಿಂದ ಹೊರಬರಲು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅರ್ಜುನ ಹೀರು ರಾಠೋಡ ಮಾತನಾಡಿ, ಸಚಿವ ಎಂ. ಬಿ. ಪಾಟೀಲ ಅವರು ಬಸವ ನಾಡಿನಲ್ಲಿ ಈಗಾಗಲೇ ಜಲಕ್ರಾಂತಿ ಮಾಡಿದ್ದಾರೆ. ಈಗ ಶಿಕ್ಷಣ ಕ್ರಾಂತಿ ಮಾಡುತ್ತಿದ್ದು, ನಮ್ಮ ಗ್ರಾಮೀಣ ಭಾಗದ ಬಡ ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸುವ ಮೂಲಕ ನಗರ ಮತ್ತು ಗ್ರಾಮೀಣ ಭಾಗದ ಮಧ್ಯ ಇರುವ ಶಿಕ್ಷಣದ ಗುಣಮಟ್ಟದ ಅಂತರವನ್ನು ನಿವಾರಿಸಿದ್ದಾರೆ. ನಮ್ಮ ಗ್ರಾಮೀಣ ಪ್ರತಿಭೆಗಳಿಗೆ ಇದು ವರದಾನವಾಗಿದ್ದು. ಮುಂಬರುವ ದಿನಗಳಲ್ಲಿ ನಮ್ಮ ವಿದ್ಯಾರ್ಥಿಗಳು ಮಹಾನಗರಗಳ ಕಾರ್ಪೋರೇಟ್ ಶಾಲೆಗಳ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಸಾಧನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ಅಖಿಲಾ ಬಸನಗೌಡ ಪಾಟೀಲ, ಗ್ರಾ. ಪಂ. ಅಧ್ಯಕ್ಷ ರಂಗಾ ಬರಕಡೆ, ಎಸ್‌ಡಿಎಂಸಿ ಅಧ್ಯಕ್ಷ ಸಿದ್ದಣ್ಣ ಶಿರಾಳಶೆಟ್ಟಿ, ಗ್ರಾ. ಪಂ ಮಾಜಿ ಅಧ್ಯಕ್ಷ ಪೀರ ಪಟೇಲ ಪಾಟೀಲ, ಮುಖಂಡರಾದ ಶ್ರೀಶೈಲ ದಳವಾಯಿ, ಪ್ರಕಾಶ ರಾಠೋಡ, ತುಕಾರಾಮ ಮೋಹಿತೆ, ಅಶೋಕ ರಾಠೋಡ, ಮದುಗೌಡ ಪಾಟೀಲ, ಗೋವಿಂದ ರಾಠೋಡ, ಸುಂದರಪಾಲ ರಾಠೋಡ, ತುಕಾರಾಮ ರಾಠೋಡ, ಶೈಲಜಾ ರಾಠೋಡ, ವಿಜಯಪುರ ಗ್ರಾಮೀಣ ಬಿ.ಇ.ಓ ಪ್ರಮೋದಿನಿ ಬಳೋಲಮಟ್ಟಿ, ಶಾಲೆಯ ಶಿಕ್ಷಕರು, ಗ್ರಾಮಸ್ಥರು ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.