ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಭೂತನಾಳ ಕೆರೆ ಹತ್ತಿರದ ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದಲ್ಲಿ ಜುಲೈ೨೫ರಂದು ಕಟ್ಲಾ ಮತ್ತು ರೋಹು ಮೀನು ಮರಿಗಳನ್ನು ತಲಾ ೧ ರೂ. ನಂತೆ ಮಾರಾಟ ಮಾಡಲಾಗುತ್ತಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. ೯೯೪೫೯೫೯೭೦೪, ೯೯೦೦೭೭೬೨೦೫, ೦೮೩೫೨-೨೬೪೫೧೬ ಹಾಗೂ ೯೪೮೦೫೧೮೬೭೯ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಸಂಶೋಧನಾ ಮತ್ತು ಮಾಹಿತಿ ಕೇಂದ್ರದ ಜಿಲ್ಲಾ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
