ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ, ವಿಜಯಪುರ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಬೆಂಗಳೂರಿನ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ವಿಜಯಪುರ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಜುಲೈ ೩೦ರ ಬೆಳಿಗ್ಗೆ ೯ಗಂಟೆಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರ ಹಮ್ಮಿಕೊಳ್ಳಲಾಗಿದೆ.
ಹೊಸದಾಗಿ ಸ್ಥಾಪಿಸಬಹುದಾದ ಉದ್ಯಮದ ಮಾಹಿತಿ, ಕೈಗಾರಿಕೆ ಇಲಾಖೆ ಮತ್ತು ಬ್ಯಾಂಕಿನಿಂದ ಸಿಗಬಹುದಾದ ಸಹಾಯ ಸೌಲಭ್ಯಗಳ ಮಾಹಿತಿ ಹಾಗೂ ಯಶಸ್ವಿ ಉದ್ಯಮಿದಾರರು ಈ ಶಿಬಿರದಲ್ಲಿ ತಮ್ಮ ಅನುಭವವನ್ನು ಹಂಚಿಕೆಕೊಳ್ಳಲಿದ್ದು, ೨೦ ರಿಂದ ೪೫ ವರ್ಷದೊಳಗಿನ ಆಸಕ್ತರು ತಮ್ಮ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ.೮೮೮೪೧೮೪೪೩೯ ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
