ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಟ್ಟಣದ ವಿವಿಧ ಸಹಕಾರ ಸಂಘ, ಸಂಸ್ಥೆಗಳ ನಿರ್ದೇಶಕರು ಹಾಗೂ ಸಿಬ್ಬಂದಿ ಸಹಕಾರ ಭಾರತಿಯ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ವಿವಿಧ ಪದಾಧಿಕಾರಿಗಳ ಹುದ್ದೆಗೆ ನೇಮಗೊಂಡಿದ್ದಾರೆ.
ಪಟ್ಟಣದ ರಾವುತರಾಯ ಮಲ್ಲಯ್ಯ ದೇವಸ್ಥಾನ ಕಮೀಟಿ ಅಧ್ಯಕ್ಷ ವಿನೋದಗೌಡ ಪಾಟೀಲ ಸಹಕಾರ ಭಾರತಿ ದೇವರಹಿಪ್ಪರಗಿ ತಾಲ್ಲೂಕು ಘಟಕದ ಅಧ್ಯಕ್ಷರಾಗಿ, ಸಮೃದ್ಧಿ ಸಹಕಾರ ಸಂಘದ ನಿರ್ದೇಶಕ ಕೆ.ಎಸ್.ಕೋರಿ ತಾಲ್ಲೂಕು ಘಟಕದ ಸಂಘಟನಾ ಕಾರ್ಯದರ್ಶಿಯಾಗಿ, ಹಾಗೂ ಕಲ್ಮೇಶ್ವರ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ಯಲ್ಲಾಲಿಂಗ ವಡ್ಡೋಡಗಿ ಇವರು ತಾಲ್ಲೂಕು ಘಟಕದ ಪ್ರಧಾನಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ವೀರಭದ್ರೇಶ್ವರ ಸೌಹಾರ್ದ ಪತ್ತಿನ ಸಹಕಾರ ಸಂಘದ ಸಂಸ್ಥಾಪಕ ಅಧ್ಯಕ್ಷ ಸಿದ್ದು ಆನಂದಿ ಜಿಲ್ಲಾ ಘಟಕದ ಸದಸ್ಯ ಸ್ಥಾನಕ್ಕೆ ನೇಮಕಗೊಂಡಿದ್ದಾರೆ ಎಂದು ಸಹಕಾರ ಭಾರತಿ ವಿಜಯಪುರ ಜಿಲ್ಲಾ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

