Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಸಿಟಿ ರೌಂಡ್ಸ್ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ.
(ರಾಜ್ಯ ) ಜಿಲ್ಲೆ

ವಿಜಯಪುರ ಸಿಟಿ ರೌಂಡ್ಸ್ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ.

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಗುರುವಾರ ವಿಜಯಪುರ ನಗರದ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲೊಂದಾದ ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯ ಪರಿಶೀಲನೆ ನಡೆಸಿದರು.
ಆಧುನಿಕ ಅಭಿಲೇಖಾಲಯ ಕೊಠಡಿಗೆ ಭೇಟಿ ನೀಡಿ ಗಣಕೀಕರಣ ಕಾರ್ಯ ಪರಿಶೀಲಿಸಿದ ಅವರು, ಕಂದಾಯ ಇಲಾಖೆಯ ಎಲ್ಲ ದಾಖಲೆಗಳನ್ನು ಗಣಕೀಕೃತಗೊಳಿಸುವುದರಿಂದ ರೈತರಿಗೆ-ಸಾರ್ವಜನಿಕರಿಗೆ ಆನ್‌ಲೈನ್ ಮೂಲಕ ದಾಖಲೆಗಳು ಸುಲಭವಾಗಿ ದೊರೆಯಲಿರುವುದರಿಂದ ಸಮಯ ಹಾಗೂ ಹಣದ ಉಳಿತಾಯವಾಗಿ, ಸಾರ್ವಜನಿಕರ ಕಚೇರಿ ಅಲೆದಾಟವು ತಪ್ಪಿದಂತಾಗುತ್ತದೆ. ಇದರಿಂದ ಅತ್ಯಂತ ಅನುಕೂಲವಾಗಲಿದ್ದು, ಈ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ ಅವರು, ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಚುನಾವಣಾ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿರುವ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.
ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ನಿಲ್ದಾಣದಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಿದ ಅವರು, ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ನಿಲ್ದಾಣದಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಶುಚಿತ್ವ, ಸ್ವಚ್ಛತೆ ಕಾಪಾಡಿಕೊಂಡು ಗುಣಮಟ್ಟದ ಆಹಾರ ಒದಗಿಸಬೇಕು. ಆವರಣದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು. ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಿರ್ವಹಣೆ ಮಾಡುವ ಜೊತೆಗೆ ಕಾಲಕಾಲಕ್ಕೆ ಸಂಬಂಧಿಸಿದ ಅಧಿಕಾರಿಗಳು ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಗುಣಮಟ್ಟದ ಆಹಾರ ಪೂರೈಕೆಗೆ ಕುರಿತು ಪರಿಶೀಲನೆ ನಡೆಸುವಂತೆ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ, ೨೫೦ ಹಾಸಿಗೆವುಳ್ಳ ಸುಸಜ್ಜಿತ ಆಸ್ಪತ್ರೆ, ಟ್ರಾಮಾ ಸೆಂಟರ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯ ತಾಯಿ ಮಕ್ಕಳ ವಾರ್ಡ, ನವಜಾತ ಶಿಶು ವಿಭಾಗ, ಸಿಟಿ ಎಂಆರ್‌ಐ ಸ್ಕಾö್ಯನ್ ಸೆಂಟರ್, ನೇತ್ರ ವಿಭಾಗ, ಎನ್‌ಆರ್‌ಸಿ ಕೇಂದ್ರ, ಕ್ಷಕಿರಣ ವಿಭಾಗ, ತುರ್ತು ಘಟಕ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.
ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಆಸ್ಪತ್ತೆ ಬರುವ ರೋಗಿಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು. ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಿ ಉತ್ತಮ ಚಿಕಿತ್ಸೆ ಒದಗಿಸಲು ಮುಂದಾಗಬೇಕು ಎಂದು ಅವರು ಹೇಳಿದರು. ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.