ಉದಯರಶ್ಮಿ ದಿನಪತ್ರಿಕೆ
ಕಲಕೇರಿ: ಗ್ರಾಮದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡಿನಲ್ಲಿ ಮತ್ತು ಪ್ರಮುಖ ಸ್ಥಳಗಳಲ್ಲಿ ಹಾಗೂ ಮನೆ ಮನೆಗಳಿಗೆ ಕಲಕೇರಿ ಪಿಎಸ್‌ಐ ಹಾಗೂ ಪೋಲಿಸ್ ಸಿಬ್ಬಂದಿ ಸಮೇತ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಲಾಯಿತು.
ಸರ್ಕಾರದ ನಿರ್ದೇಶನದಂತೆ ಸಾರ್ವಜನಿಕರ ಸುರಕ್ಷತೆಗಾಗಿ ವಿನೂತನ ಉಪಕ್ರಮ ಮನೆ ಮನೆಗೆ ಪೊಲೀಸ್ ಎಂಬ ಕಾರ್ಯಕ್ರಮದಡಿ ವಿಜಯಪುರ ಜಿಲ್ಲಾ ಪೊಲೀಸ್ ಇಂಡಿ ಉಪ-ವಿಭಾಗ ಕಲಕೇರಿಯ ಪೋಲಿಸ್ ಠಾಣೆಯ ಆರಕ್ಷಕ ಉಪನಿರೀಕ್ಷರಾದ ಸುರೇಶ್ ಮಂಟೂರ ಹಾಗೂ ಕ್ರೈಂ ಪಿ.ಎಸ್.ಐ ಎಸ್ ಎಸ್ ತಳವಾರ ಮತ್ತು ಮಹಿಳಾ ಪೆದೆ ರೇವತಿ ಪಾಟೀಲ ಹಾಗೂ ಠಾಣೆಯ ಪೋಲಿಸ್ ಸಿಬ್ಬಂದಿಯವರು ಮನೆ ಮನೆಗೆ ತೆರಳಿ ಗ್ರಾಮಸ್ಥರ ಸಮಸ್ಯೆಗಳನ್ನು ಕೇಳುವ ಮೂಲಕ ಮನೆ ಮನೆಗೆ ಪೋಲಿಸ್ ಎಂಬ ಸಾರ್ವಜನಿಕರ ಸುರಕ್ಷತೆಗೆ ವಿನೂತನ ಕಾರ್ಯಕ್ರಮ ಹಮ್ಮಿಕೊಂಡರು.
ಈ ವೇಳೆ ಗ್ರಾಮದಲ್ಲಿ ಆಗಮಿಸಿದ ಪೋಲಿಸ್ ಸಿಬ್ಬಂದಿಗಳನ್ನು ಸಾರ್ವಜನಿಕರು ಸ್ವಾಗತಿಸಿ ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು ಮತ್ತು ಶಾಲಾ ವಿದ್ಯಾರ್ಥಿಗಳು ಮತ್ತು ಯುವಕರು ಕಾರ್ಯಕ್ರಮದಲ್ಲಿ ಭಾಗಿಯಾದರು.

