ರಾಜ್ಯ ಸರ್ಕಾರದ ವಿರುದ್ಧ ಜಮಖಂಡಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ | ವಿದ್ಯಾರ್ಥಿಗಳಲ್ಲಿ ಭುಗಿಲೆದ್ದ ಆಕ್ರೋಶ
ಉದಯರಶ್ಮಿ ದಿನಪತ್ರಿಕೆ
ಜಮಖಂಡಿ: ವಿದ್ಯಾರ್ಥಿ ವೇತನ ಹಾಗೂ ಹಾಸ್ಟೆಲ್ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕ ವಿದ್ಯಾರ್ಥಿಗಳು ನಗರದ ದೇಸಾಯಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ತಾಲೂಕು ಸಂಚಾಲಕ ಪುಂಡಿಲಕ ಪೂಜಾರಿ ಮಾತ ನಾಡಿ, ದೇಶದ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣ ವ್ಯ ವಸ್ಥೆ ಚನ್ನಾಗಿರಬೇಕು. ಶಿಕ್ಷಣಕ್ಕೆ ಬೇಕಾದ ಮೂಲಸೌಲ ಭ್ಯಗಳನ್ನು ಸರ್ಕಾರಗಳು ಕಲ್ಪಿಸಿಕೊಡಬೇಕು. ಇದು ಸರ್ಕಾರಗಳ ಆದ್ಯ ಕರ್ತವ್ಯವಾಗಿದೆ. ಗ್ರಾಮೀಣ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಆದರೆ ಅವುಗಳ ಸಮರ್ಪಕ ಅನುಷ್ಠಾನವಾಗದೆ ವಿದ್ಯಾರ್ಥಿಗಳು ತೊಂದರೆ ಅನುಭವಿ ಸುವಂತಾಗಿದೆ. ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸರಿ ಯಾದ ಹಾಸ್ಟೆಲ್ ವ್ಯವಸ್ಥೆ ಹಾಗೂ ವಿದ್ಯಾರ್ಥಿ ವೇತನ ವನ್ನು ನೀಡದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ಪ್ರಮುಖ ಬೇಡಿಕೆಗಳು: ಹಾಸ್ಟೆಲ್‌ಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಿ ಪ್ರವೇಶಾತಿ ನೀಡಬೇಕು. ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಕಿಟ್‌ಗಳನ್ನ ತಕ್ಷಣವೇ ನೀಡಬೇಕು. ಪ್ರತಿ ವಿದ್ಯಾರ್ಥಿಗೆ ಊಟಕ್ಕೆ ನೀಡುವ ₹1850 ಹಣ ಹೆಚ್ಚಳ ಮಾಡಬೇಕು. ರಾಜ್ಯದಲ್ಲಿ ಸಮಾಜ ಕಲ್ಯಾಣ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ಹಾಸ್ಟೆಲ್‌ಗಳ ಸಂಖ್ಯೆ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.
ಎಬಿವಿಪಿ ನಗರ ಕಾರ್ಯದರ್ಶಿ ಪರಶುರಾಮ್ ಜಿಟ್ಟಿ, ಸಾಮಾಜಿಕ ಜಾಲತಾಣದ ಸದಸ್ಯ ರಾಕೇಶ್ ಗುರವ, ಸಾಗರ್‌ಉಪಾಧ್ಯ, ಶೀತಲ ಆಲಗೂರ, ಈರಣ್ಣ ಬುದ್ಧಿ, ದರೆಯಪ್ಪ ಬಾಳುಚ್ಚಿ, ಸಿಕೃ ನ್ಯಾಮಗೌಡ, ಶಿವಶಂಕರ ಗೋಗನ್ನವರ್, ರೋಹನ್ ಶಿಂದೆ, ಪ್ರಜ್ವಲ್ ಎಮ್ಮಿ, ಸಂಗಮೇಶ್ ಪೂಜಾರಿ, ಪ್ರಜ್ವಲ್ ತಾವರೆ, ರವಿ ನಾಯಕ, ವೀರೇಶ್ ಮಠಪತಿ ಮುಂತಾದವರಿದ್ದರು.

