ಉದಯರಶ್ಮಿ ದಿನಪತ್ರಿಕೆ
ಚಡಚಣ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಚಡಚಣ ತಾಲೂಕು ಘಟಕ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಇದೇ ರವಿವಾರ ಜು.27 ರಂದು ಬೆಳಿಗ್ಗೆ 10:30 ಕ್ಕೆ ಶ್ರೀ ಸಂಗಮೇಶ್ವರ ಮಂಗಲ ಕಾರ್ಯಲಯದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಸಾನಿಧ್ಯವನ್ನು ಸ್ಥಳೀಯ ವಿರಕ್ತ ಮಠದ ಷಡಕ್ಷರ ಸ್ವಾಮೀಜಿ ವಹಿಸಲಿದ್ದಾರೆ.
ಉದ್ಘಾಟಕರಾಗಿ ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ್ ಬಿದರಿ ಆಗಮಿಸಲಿದ್ದಾರೆ. ಮಹಾಸಭೆಯ ರಾಷ್ಟ್ರೀಯ ಮಹಿಳಾ ಅಧ್ಯಕ್ಷೆ ವೀಣಾ ಕಾಶಪ್ಪನವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಮಹಾಸಭೆ ಜಿಲ್ಲಾಧ್ಯಕ್ಷ ವಿ.ಸಿ ನಾಗಠಾಣ್ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ರಾಜಶೇಖರ್ ಸಿರಿ ಹಾಗೂ ಉಪಸ್ಥಿತರಾಗಿ ಎಸ್ ಆರ್ ಅವಜಿ, ಬಿ.ಎಮ್. ಕೋರೆ ಮತ್ತು ಶ್ರೀ ಬಿ.ಎ ಪಾಟೀಲ್ ಇರಲಿದ್ದಾರೆ.
ತಾಲೂಕು ಘಟಕದೊಂದಿಗೆ ಮಹಿಳಾ ಘಟಕ ಹಾಗೂ ಯುವ ಘಟಕ ಕೂಡ ಅಸ್ತಿತ್ವಕ್ಕೆ ಬರಲಿವೆ. ಸಮಸ್ತ ವೀರಶೈವ ಲಿಂಗಾಯತ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅಧ್ಯಕ್ಷ ಎಸ್.ಆರ್ ಅವಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
