Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾರ ಹೊತ್ತು ಬೆಟ್ಟ ಹತ್ತಿದ 61ರ ವೃದ್ಧ ನಿಂಗಪ್ಪ ಸವಣೂರ
(ರಾಜ್ಯ ) ಜಿಲ್ಲೆ

ಭಾರ ಹೊತ್ತು ಬೆಟ್ಟ ಹತ್ತಿದ 61ರ ವೃದ್ಧ ನಿಂಗಪ್ಪ ಸವಣೂರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

102 ಕೆಜಿ ಭಾರದ ಮೂಟೆ ಹೊತ್ತು 575 ಮೆಟ್ಟಿಲುಗಳ ಅಂಜನಾದ್ರಿ ಬೆಟ್ಟ ಹತ್ತಿದ ಹುನ್ನೂರು ಗ್ರಾಮದ ರೈತ!

ಉದಯರಶ್ಮಿ ದಿನಪತ್ರಿಕೆ

ವರದಿ: ಎಸ್ˌ ಎಮ್ˌ ಇಟ್ಟಿ
ಜಮಖಂಡಿ: ಆ ಮೂಟೆ ಬರೋಬ್ಬರಿ ಒಂದು ಕ್ವಿಂಟಾಲ ಅಂದರೆ ಬರೋಬ್ಬರಿ 102 ಕೆಜಿ ಭಾರದ್ದು. ಆ ಬೆಟ್ಟ 575 ಮೆಟ್ಟಿಲುಗಳ ಕಡಿದಾದ, ಸಂಕೀರ್ಣಗಳಿಂದ ಕೂಡಿದ ಮಾರ್ಗ. ಆದರೂ ಛಲ ಬಿಡದ ತ್ರಿವಿಕ್ರಮನಂತೆ ಆ ರೈತ 102 ಕೆಜಿ ಭಾರದ ಮೂಟೆ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿ ಹರಕೆ ತೀರಿಸುವ ಮೂಲಕ ಗಮನ ಸೆಳೆದರು.
ವಯಸ್ಸು 61 ಆದ್ರೂ ದಣಿವರಿಯದ ವೃದ್ಧ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುನ್ನೂರು ಗ್ರಾಮದ 61 ವರ್ಷ ವಯಸ್ಸಿನ ನಿಂಗಪ್ಪ ಸವಣೂರು ಎಂಬ ರೈತ ಮಂಗಳವಾರ ಅಂಜನಾದ್ರಿ ಬೆಟ್ಟವನ್ನು 102 ಕೆಜಿ ಭಾರದ ಮೂಟೆ ಹೊತ್ತು ಏರುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದರು.
102 ಕೆಜಿಯ ಭಾರವಿದ್ದ ಮೂಟೆಯನ್ನು ಹೊತ್ತು 575 ಮೆಟ್ಟಿಲುಗಳ ಕಡಿದಾದ ಹಾದಿಯಲ್ಲಿ ಸಾಗುವ ಮೂಲಕ ಅಂಜನಾದ್ರಿ ಬೆಟ್ಟವೇರಿದ ರೈತನೋರ್ವ ಎಲ್ಲರ ಗಮನ ಸೆಳೆದಿದ್ದಾರೆ.
ನೆಲಮಟ್ಟದಿಂದ 550 ಅಡಿ ಎತ್ತರದ ಬೆಟ್ಟ
ಅತ್ಯಂತ ಸಂಕೀರ್ಣ ಮತ್ತು ಕಡಿದಾದ ದಾರಿ ಹೊಂದಿರುವ ಅಂಜನಾದ್ರಿ ಬೆಟ್ಟವು ನೆಲಮಟ್ಟದಿಂದ 550ಕ್ಕೂ ಹೆಚ್ಚು ಅಡಿ ಎತ್ತರದಲ್ಲಿದೆ. ಈ ಬೆಟ್ಟಕ್ಕೆ ಹತ್ತಲು 575 ಮೆಟ್ಟಿಲುಗಳಿದ್ದು, ಸಾಮಾನ್ಯ ಜನರೇ ಈ ಬೆಟ್ಟ ಹತ್ತಲು ಪ್ರಯಾಸ ಪಡುತ್ತಾರೆ.
ಅಂದುಕೊಂಡಂತೆ ಹರಕೆ ತೀರಿಸಿದ ನಿಂಗಪ್ಪ
ಆದರೆ 61 ವರ್ಷ ಪ್ರಾಯದ ಈ ರೈತ ತಾನು ಹೊತ್ತಿದ್ದ`ಅಂಜನಾದ್ರಿ ಬೆಟ್ಟ ಹತ್ತುವ ಹರಕೆ’ ತೀರಿಸಲು 102 ಕೆಜಿ ಭಾರದ ಜೋಳದ ಮೂಟೆ ಹೊತ್ತು 62 ನಿಮಿಷದಲ್ಲಿ ಬೆಟ್ಟ ಏರಿ ಜನರನ್ನು ನಿಬ್ಬೆರಗಾಗಿಸಿದ್ದಾರೆ ರೈತ ನಿಂಗಪ್ಪ.
ಮೊಳಗಿತು ಜೈ ಶ್ರೀರಾಮ್, ಜೈ ಹನುಮಾನ್ ಘೋಷಣೆ
ನಿಂಗಪ್ಪ ಬೆಟ್ಟ ಹತ್ತುವಾಗ ಕೇವಲ ಎರಡು ಕಡೆ ಅದೂ 15 ರಿಂದ 45 ಸೆಕೆಂಡುಗಳಷ್ಟು ಕಾಲ ನಿಂತು ಧಣಿವಾರಿಸಿಕೊಂಡು, ಒಂದು ಗುಟುಕು ನೀರು ಕುಡಿದು ಮತ್ತೆ ಪ್ರಯಾಣ ಮುಂದುವರೆಸಿದರು. ಆತನೊಂದಿಗೆ ಬಂದಿದ್ದ ಸಹಚರರು ಜೈಶ್ರೀರಾಮ್, ಜೈ ಹನುಮಾನ್ ಎಂಬ ಘೋಷಣೆ ಹಾಕುತ್ತಲೇ ಬೆಟ್ಟ ಹತ್ತಿದರು.

“ಈ ಹಿಂದೆ ಶ್ರೀಶೈಲಕ್ಕೆ ಹೋಗಿ ಬರುವಾಗ ಅಂಜನಾದ್ರಿಗೆ ಬಂದಿದ್ದೆ. ಆಗ ಮೂಟೆ ಹೊತ್ತು ಇಲ್ಲಿಗೆ ಬರುವುದಾಗಿ ಸಂಕಲ್ಪ ಮಾಡಿದ್ದೆ. ಅದನ್ನು ತೋರಿಸಿದ್ದೇನೆ. ಈ ಮೂಲಕ ಶರೀರದ ಬಗ್ಗೆ ಜನ ಕಾಳಜಿ ವಹಿಸಬೇಕು. ದೈಹಿಕ ಕಸರತ್ತು ಮಾಡಬೇಕು.”

– ರೈತ ನಿಂಗಪ್ಪ
ಮೂಟೆಯೊಂದಿಗೆ ಬೆಟ್ಟ ಹತ್ತಿದ ಸಾಹಸಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.