ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಸಿಂದಗಿ ತಾಲೂಕಿನ ಗಾಣಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಮತ್ತು ವನಶ್ರೀ ಪತ್ತಿನ ಸಹಕಾರಿ ಸಂಘದ ಸಭೆಯನ್ನು ಜುಲೈ 27 ರಂದು ಬೆಳಗ್ಗೆ 11=00 ಘಂಟೆಗೆ ಕರೆಯಲಾಗಿದೆ.
ಸಿಂದಗಿಯ ಲಕ್ಷ್ಮಿ ದೇವಾಲಯದ ಸಭಾಭವನದಲ್ಲಿ ಸಭೆ ನಡೆಯಲಿದ್ದು ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ, ಹಾಗೂ ಸಂಘದ ಚಟುವಟಿಕೆಗಳ ಕುರಿತು ಚರ್ಚೆ ನಡೆಯುವುದು
ಆದ್ದರಿಂದ ಗಾಣಿಗ ಸಮಾಜದ ಬಾಂಧವರು, ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಿಬೇಕಾಗಿ ಗಾಣಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ನಿಕಟಪೂರ್ವ ಅಧ್ಯಕ್ಷ ಎಸ್.ಎಲ್.ಬಿರಾದಾರ, ವನಶ್ರೀ ಪತ್ತಿನ ಸಹಕಾರ ಸಂಘದ ನಿಕಟಪೂರ್ವ ಅಧ್ಯಕ್ಷ ರಮೇಶ ಗಂಗನಳ್ಳಿ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
