Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಲೆಯಲ್ಲಿ ಉತ್ತಮ ವಾತಾವರಣಕ್ಕೆ ಎಲ್ಲರ ಸಹಕಾರ ಅಗತ್ಯ
(ರಾಜ್ಯ ) ಜಿಲ್ಲೆ

ಶಾಲೆಯಲ್ಲಿ ಉತ್ತಮ ವಾತಾವರಣಕ್ಕೆ ಎಲ್ಲರ ಸಹಕಾರ ಅಗತ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಶಾಲೆಯಲ್ಲಿ ಉತ್ತಮ ವಾತಾವರಣ ನಿರ್ಮಾಣ ಹಾಗೂ ಅತ್ಯುತ್ತಮ ಫಲಿತಾಂಶಕ್ಕಾಗಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಮುಖ್ಯಶಿಕ್ಷಕ ಆಯ್.ಎಸ್.ನರೂಣಿ ಹೇಳಿದರು.
ತಾಲ್ಲೂಕಿನ ಮುಳಸಾವಳಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಜರುಗಿದ ಸಾಮಾಜಿಕ ಪರಿಶೋಧನೆಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಎಲ್ಲ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು
ಅಧ್ಯಕ್ಷತೆ ವಹಿಸಿದ ತಾಲ್ಲೂಕು ತೋಟಗಾರಿಕೆ ಇಲಾಖೆಯ ಲಕ್ಷ್ಮಣ ಸಂಗೋಗಿ ಮಾತನಾಡಿ, ಎಸ್.ಎಸ್. ಎಲ್.ಸಿ ಪರೀಕ್ಷೆಯಲ್ಲಿ ಶಾಲೆಯ ಫಲಿತಾಂಶ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಒಳ್ಳೆಯ ವಾತಾವರಣ ಇದೆ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿಯ ಕಾರ್ಯಕ್ರಮ ವ್ಯವಸ್ಥಾಪಕ ಬಸವರಾಜ ಮದನಶೆಟ್ಟಿ ಮಾತನಾಡಿ, ಶಾಲೆಯಲ್ಲಿ ವಾಚನಾಲಯ, ಪ್ರೊಜೆಕ್ಟರ್ ಹಾಗೂ ಸ್ಮಾರ್ಟ್ ಕ್ಲಾಸ್ ಮೂಲಕ ಪಾಠ ಬೋಧನೆ, ಮಕ್ಕಳಿಗೆ ಸುರಕ್ಷತೆಯ ಭಾವನೆ, ದಾನಿಗಳ ಸಹಕಾರ, ವೃತ್ತಿಪರ ಮಾರ್ಗದರ್ಶನ, ವಿಶೇಷ ತರಗತಿ, ಸರಕಾರದ ಸೌಲಭ್ಯಗಳ ವಿತರಣೆ ಹೀಗೆ ಹತ್ತು ಹಲವಾರು ವಿಷಯಗಳ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.
ಸಭೆಯಲ್ಲಿ ದಿ:೨೨ ರಿಂದ ೨೫ ಜುಲೈ ರವರೆಗೆ ಶಾಲಾ ಹಂತದ ಸಾಮಾಜಿಕ ಪರಿಶೋಧನೆ ನಡೆಸಲಾಯಿತು. ಇದರಲ್ಲಿ ಮುಖ್ಯವಾಗಿ ಕುಡಿಯುವ ನೀರು ಯೋಗ್ಯವಿಲ್ಲ, ಗಂಡು ಮಕ್ಕಳಿಗೆ ಶೌಚಾಲಯ, ಭೋಜನಾಲಯ ಕೊರತೆ. ಪ್ರಯೋಗಾಲಯ, ಕಂಪ್ಯೂಟರ್ ಕೊಠಡಿಗಳ ವ್ಯವಸ್ಥೆ, ಶಾಲಾ ಕಂಪೌಂಡ್ ದುರಸ್ತಿ, ಗೇಟ್ ಮತ್ತು ಸಿಸಿಟಿವಿ, ಹಾಗೂ ವಾಚನಾಲಯಕ್ಕೆ ಕೊಠಡಿ ವ್ಯವಸ್ಥೆ ಬಗೆಗೆ ಕೊರತೆಗಳ ವಿಚಾರದಲ್ಲಿ ಗಂಭೀರ ಚರ್ಚೆ ಜರುಗಿತು.
ಸಭೆಯಲ್ಲಿ ಇದ್ದ ಪಂಚಾಯಿತಿ ಲೆಕ್ಕ ಸಹಾಯಕರು ಮಾತನಾಡಿ, ಅಭಿವೃದ್ಧಿ ಅಧಿüಕಾರಿ ಹಾಗೂ ಅಧ್ಯಕ್ಷರ ಗಮನಕ್ಕೆ ತಂದು ಎಲ್ಲ ವ್ಯವಸ್ಥೆ ಮಾಡಿಕೊಡುವ ಭರವಸೆ ನೀಡಿದರು.
ಎಸ್‌ಡಿಎಮ್‌ಸಿ ಅಧ್ಯಕ್ಷ ಮನೋಹರ ಪೂಜಾರಿ, ಉಪಾಧ್ಯಕ್ಷ ಸಾಹೇಬಗೌಡ ನಾಗರಳ್ಳಿ, ಸದಸ್ಯರಾದ ಅರ್ಜುನ ಹಿಪ್ಪರಗಿ, ಶ್ರೀಶೈಲ ಹೊಸಮನಿ , ಕೆಜಿಎಚ್‌ಪಿಎಸ್ ಶಾಲೆಯ ಮುಖ್ಯಶಿಕ್ಷಕ ಶಿವಾನಂದ ಬಿರಾದಾರ ಸಿಆರ್‌ಪಿ ಶ್ರೀಶೈಲ ರೋಡಗಿ, ದಾನಿ ಬಸಗೊಂಡಪ್ಪ ರೋಡಗಿ, ಪಾಲಕರಾದ ಭೀಮಶಾ ಬಸರಕೋಡ್, ಅರವಿಂದ ನಾಯ್ಕೋಡಿ, ಅರ್ಜುನ್ ವಾಲಿಕಾರ, ಪ್ರೇಮಸಿಂಗ ಜಾಧವ, ಎ.ಎ. ಗಚ್ಚಿನಮಾಲ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.