Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೆಸರು ಗದ್ದೆಯಂತಾಗಿರುವ ಶಿರಾಡೋಣ-ಉಮರಜ ರಸ್ತೆ
(ರಾಜ್ಯ ) ಜಿಲ್ಲೆ

ಕೆಸರು ಗದ್ದೆಯಂತಾಗಿರುವ ಶಿರಾಡೋಣ-ಉಮರಜ ರಸ್ತೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಸಂಚಾರಕ್ಕೆ ಸಂಚಕಾರ ತಂದಿರುವ ರಸ್ತೆಗಳು

ಉದಯರಶ್ಮಿ ದಿನಪತ್ರಿಕೆ

ವರದಿ: ಸಿದ್ರಾಮ ಮಾಳಿ
ಚಡಚಣ: ಶಿರಾಡೋಣದಿಂದ ರೇವತಗಾಂವ ಮಾರ್ಗವಾಗಿ ಉಮರಜ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹದೆಗೆಟ್ಟು ೧೦ ವರ್ಷಗಳೇ ಕಳೆದಿದ್ದರೂ ಅಧಿಕಾರಿಗಳ ಹಾಗೂ ರಾಜಕಾರಣಿಗಳು ದುರಸ್ಥಿಗೆ ಮುಂದಾಗದ ಕಾರಣ ರಸ್ತೆ ಮಧ್ಯ ಹೊಂಡ ಹಾಗೂ ಗುಂಡಿಗಳು ಸೃಷ್ಟಿಯಾಗಿವೆ. ಇದರಿಂದಾಗಿ ಮಳೆಯಾದಾಗಲೆಲ್ಲ ರಸ್ತೆ ಗದ್ದೆಯಂತಾಗಿ ಸಾರ್ವಜನಿಕರಿಗೆ, ವಾಹನ ಸವಾರರಿಗೆ ಅನಾನುಕೂಲವನ್ನುಂಟು ಮಾಡುತ್ತಿದೆ.
ರಸ್ತೆ ಸಂಪೂರ್ಣವಾಗಿ ಹದೆಗೆಟ್ಟಿರುವ ಕಾರಣ ವಾಹನ ಸವಾರರು, ನಾಗರಿಕರು, ವಿದ್ಯಾರ್ಥಿಗಳು, ಮಹಿಳೆಯರು ಮತ್ತು ಆಸ್ಪತ್ರೆಗೆಂದು ತೆರಳುವ ರೋಗಿಗಳು ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.
ರಸ್ತೆಯ ಮಧ್ಯ ಭಾಗದಲ್ಲಿ ಸುಮಾರು ಮೊಣಕಾಲುದ್ದ ಗುಂಡಿಗಳು ನಿರ್ಮಾಣವಾಗಿವೆ. ಮಳೆ ನೀರು ಗುಂಡಿಗಳಲ್ಲಿ ನಿಂತು ರಸ್ತೆ ಯಾವುದು, ಗುಂಡಿ ಯಾವುದು ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಪಕ್ಕದ ಮಹಾರಾಷ್ಟ್ರ ಹಾಗೂ ಚಡಚಣ ಪಟ್ಟಣ ಸೇರಿದಂತೆ ಕಾರ್ಮಿಕರು, ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಇದೇ ಮಾರ್ಗದ ಮೂಲಕ ಪ್ರಯಾಣಿಸುತ್ತಾರೆ.
ಆದರೆ ರಸ್ತೆಯಲ್ಲಿ ಗುಂಡಿಗಳು ಬಿದ್ದಿರುವುದರಿಂದ ಅನೇಕ ದ್ವಿಚಕ್ರ ವಾಹನ ಸವಾರರು ಬಿದ್ದು ಕೈಕಾಲುಗಳನ್ನು ಮುರಿದುಕೊಂಡಿರುವ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ರಾಜ್ಯ ಸಾರಿಗೆ ಸಂಸ್ಥೆ ಬಸ ಕೂಡಾ ಹಲವು ಬಾರಿ ಕೇಟ್ಟು ನಿಂತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮಾರ್ಗ ಮಧ್ಯದಲ್ಲಿಯೇ ಹರಸಾಹಸ ಪಟ್ಟಿದ್ದಾರೆ. ಅಲ್ಲದೇ ಚಡಚಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸಾರ್ಕಾರಿ ಮತ್ತು ಖಾಸಗಿ ಶಾಲೆಗಳು ಹೆಚ್ಚಿದ್ದು, ವಿದ್ಯಾರ್ಥಿಗಳು ಸಹ ಇದೇ ಮಾರ್ಗದಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

” ಮಳೆ ಬಂತೆಂದರೆ ಈ ರಸ್ತೆ ಮಾರ್ಗದಲ್ಲಿ ಸಂಚರಿಸಲು ಹರಸಾಹಸಪಡಬೇಕು. ರಸ್ತೆ ಸರಿಪಡಿಸುವಂತೆ ಈಗಾಗಲೇ ಶಾಸಕರಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ರಸ್ತೆ ದುರಸ್ಥಿ ಮಾಡಿ, ಸಮಸ್ಯೆ ಬಗೆಹರಿಸಿ.”

– ಎಲ್.ಕೆ.ಮೇತ್ರೆ
ಗ್ರಾಮಸ್ಥರು

” ನಮ್ಮ ಗ್ರಾಮದಲ್ಲಿ ಸರ್ಕಾರಿ ಕಾಲೇಜು ಇಲ್ಲ. ೧೮ ಕಿ.ಮಿ ದೂರದಲ್ಲಿರುವ ಚಡಚಣ ಪಟ್ಟಣದ ಖಾಸಗಿ ಕಾಲೇಜುಗಳಿಗೆ ತೆರಳಬೇಕಾದರೆ ರಸ್ತೆ ಕೆಟ್ಟ ಸ್ಥಿತಿಯಲ್ಲಿದ್ದು, ದಾರಿಯುದ್ಧಕ್ಕೂ ಕೆಸರು ಮತ್ತು ಹೊಂಡದ ರಸ್ತೆಯಾಗಿದೆ. ಮಳೆಗಾಲದಲ್ಲಿ ರಸ್ತೆ ಸರಿ ಇಲ್ಲದ ಕಾರಣ ಬಸ್ ಸಂಚಾರಕ್ಕೆ ಹಿಂದೇಟು ಹಾಕುತ್ತಾರೆ. ಇಲ್ಲವಾದರೆ ಕೆಟ್ಟು ನಿಂತು ಬಿಡುತ್ತವೆ. ಇದರಿಂದ ಕಾಲೇಜುಗಳಿಗೆ ತೆರಳಲು ಹರಸಾಹಸವಾಗಿದೆ.”

– ಜ್ಯೋತಿ ಮಾಳಿ
ಕಾಲೇಜು ವಿದ್ಯಾರ್ಥಿನಿ

” ಈ ರಸ್ತೆ ಕಾಮಗಾರಿಯ ಕುರಿತು ಕೆಲವರು ಸಾರ್ವಜನಿಕರು ನನ್ನ ಗಮನಕ್ಕೂ ತಂದಿದ್ದು. ಶಾಸಕರಿಗೆ ಈ ಕುರಿತು ಮನವಿ ಸಲ್ಲಿಸಿದ್ದೇನೆ. ಗ್ರಾಮೀಣ ಪ್ರದೇಶದ ರಸ್ತೆಗಳು ಬಹಳಷ್ಟು ಹದೆಗೆಟ್ಟಿದ್ದು, ಮುಂದಿನ ಯೋಜನೆಗಳಲ್ಲಿ ರಸ್ತೆಗಳ ಅಭಿವೃದ್ಧಿಗೆ ಗಮನ ಹರಿಸೋಣ.”

– ಎಸ್.ಎಂ.ಪಾಟೀಲ
ಪಿಡಬ್ಲೂಡಿ ಅಧಿಕಾರಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.