ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ-೦೫ರ ಉಪ ಚುನಾವಣೆಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಜುಲೈ ೨೫ ರಂದು ಪ್ರಕಟಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕರಡು ಮತದಾರರ ಪಟ್ಟಿಗೆ ಜುಲೈ ೨೪ರವರೆಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ಜುಲೈ ೨೫ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
