ವಿಜಯಪುರ: ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸುವದನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ (ರಿ), ಜಿಲ್ಲಾ ಘಟಕ ವಿಜಯಪುರ ವತಿಯಿಂದ ರಾಜ್ಯದ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮುಖಾಂತರ ಶುಕ್ರವಾರ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಪ್ರತಿ ನಿತ್ಯ ೫ ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡುತ್ತಿದ್ದು, ಕೂಡಲೇ ನೀರು ಹರಿಸುವದನ್ನು ಸ್ಥಗಿತಗೊಳಿಸಬೇಕು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದವರು ಕಾವೇರಿ ಜಲಾಶಯದ ಈ ಸದ್ಯ ಇರುವ ನೀರಿನ ಮಟ್ಟವನ್ನು ಪಲಶೀಲನೆ ಮಾಡದೆ ತಮಿಳುನಾಡಿಗೆ ೫ ಸಾವಿರ ಕ್ಯೂಸೆಕ್ ನೀರು ಹರಿಬೇಕೆಂದು ಆದೇಶ ನೀಡಿರುವದು ಸಂಪೂರ್ಣ ಅವೈಜ್ಞಾನಿಕವಾಗಿದೆ.
ಕೆ.ಆರ್.ಎಸ್ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ ಕೇವಲ ೪೯.೪೫ ಟಿ.ಎಮ್.ಸಿ ನೀರಿನ ಸಂಗ್ರಹ ಸಾಮರ್ಥ್ಯ ಇದೆ. ಈ ಸದ್ಯ ಕೇವಲ ೨೦.೫೬ ಟಿ.ಎಮ್.ಸಿ ಮಾತ್ರ ನೀರು ಸಂಗ್ರಹವಿದೆ. ಇಂತಹ ಸಂದರ್ಭದಲ್ಲಿ ಪ್ರತಿ ನಿತ್ಯ ತಮಿಳುನಾಡಿಗೆ ೫ ಸಾವಿರ ಕ್ಯೂಸೆಕ್ ನೀರು ಹರಿಸಿದರೆ ಜಲಾಶಯದಲ್ಲಿ ನೀರು ಖಾಲಿಯಾಗುತ್ತದೆ.ಆದರೆ ಪ್ರಸ್ತುತ ರಾಜ್ಯ ಸರಕಾರ ನ್ಯಾಯಾಂಗ ನಿಂದನೆಗೆ ಹೆದರಿ ಕದ್ದು ಮುಚ್ಚಿ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದಾರೆ. ಇದರಿಂದ ರೈತರಿಗೆ ದ್ರೋಹ ಮಾಡಿದಂತಾಗುತ್ತದೆ. ಆದ್ದರಿಂದ ಕೂಡಲೆ ನೀರು ಹರಿಸುವದನ್ನು ಸ್ಥಗಿತಗೊಳಿಸಿ ಕಾವೇರಿ ಜಲಾಶಯದ ನೀರಿನ ಮಟ್ಟವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡಬೇಕು. ಕರ್ನಾಟಕ ರೈತ ಸಂಘ ಕೂಡಾ ಕಾವೇರಿ ನದಿ ನೀರಿನ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಿ ಹೋರಾಟ ನಡೆಸಬೇಕಾಗುತ್ತದೆ ಎಂದು ಅಖಂಡ ಕರ್ನಾಟಕ ರೈತ ಸಂಘ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತದೆ ಎಂದರು.
ಈ ಸಂದರ್ಭದಲ್ಲಿ ಬಸವನ ಬಾಗೇವಾಡಿ ತಾಲೂಕ ಅಧ್ಯಕ್ಷ ಹೊನಕೇರಪ್ಪ ತೆಲಗಿ, ಬಸವನ ಬಾಗೇವಾಡಿ ತಾಲೂಕ ಪ್ರಧಾನ ಕಾರ್ಯದರ್ಶಿ ಪ್ರಲ್ಹಾದ ನಾಗರಾಳ, ಸೋಮನಾಥ ಪಾಟೀಲ, ಸುಭಾಸಗೌಡ ಬಿಸಿರೊಟ್ಟಿ, ಬಾಲಚಂದ್ರ ಲಿಂಗದಳ್ಳಿ, ಚನಬಸಪ್ಪ ಸಿಂಧೂರ, ಸಂಗನಗೌಡ ಬಿರಾದಾರ, ಬಸವರಾಜ ಜಂಗಮಶೆಟ್ಟಿ, ಜಯಶ್ರೀ ಜಂಗಮಶೆಟ್ಟಿ, ಬಾಳಪ್ಪ ಬೂದಿಹಾಳ ಇನ್ನಿತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment