ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ಕುಲಸಚಿವರನ್ನಾಗಿ ಶಿಕ್ಷಣ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎಲ್.ಲಕ್ಕಣ್ಣನವರ ಅವರನ್ನು ತಕ್ಷಣ ಜಾರಿಗೆ ಬರುವಂತೆ ನೇಮಕ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಮಹಿಳಾ ವಿಶ್ವವಿದ್ಯಾನಿಲಯದ ಪ್ರಸ್ತುತ ಮೌಲ್ಯಮಾಪನ ಕುಲಸಚಿವರಾಗಿದ್ದ ಪ್ರೊ.ಎಚ್.ಎಂ.ಚಂದ್ರಶೇಖರ್ ಅವರ ಸೇವೆಯನ್ನು ಅವರ ಮಾತೃ ಸಂಸ್ಥೆಯಾಗಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ತಕ್ಷಣ ಜಾರಿಗೆ ಬರುವಂತೆ ಹಿಂತಿರುಗಿಸಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.

