Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೆಜೆಎಮ್ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಓ
(ರಾಜ್ಯ ) ಜಿಲ್ಲೆ

ಜೆಜೆಎಮ್ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಓ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಿಲ್ಲಾ ಪಂಚಾಯತ್ ಸಿಇಓ ರಿಷಿ ಆನಂದ ಅವರಿಂದ ಸಿಂದಗಿ, ಆಲಮೇಲ ಮತ್ತು ಇಂಡಿ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಸಿಂದಗಿ, ಆಲಮೇಲ ಮತ್ತು ಇಂಡಿ ತಾಲೂಕುಗಳಿಗೆ ಭೇಟಿ ನೀಡಿ ಜಲ ಜೀವನ ಮಿಷನ್ ಯೋಜನೆಯಡಿ ಅನುಷ್ಠಾನಗೊಂಡ ಪ್ರತಿ ಮನೆ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಸಿಂದಗಿ ತಾಲೂಕಿನ ರಾಂಪುರ ಪಿ.ಎ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಂಪುರ ಪಿ.ಎ ಮತ್ತು ಗಣಿಹಾರ ಗ್ರಾಮ ಹಾಗೂ ಆಲಮೇಲ ತಾಲೂಕಿನ ಕೋರಹಳ್ಳಿ, ಹೂವಿನಹಳ್ಳಿ ಹಾಗೂ ವಿಬೂತಿಹಳ್ಳಿ ಗ್ರಾಮ ಮತ್ತು ಇಂಡಿ ತಾಲೂಕಿನ ಮರಸನಹಳ್ಳಿ, ಸಾಲೋಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂದಿರಾ ನಗರ, ಬಬಲಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಬಲಾದ ಮತ್ತು ಹಲಗುಣಕಿ ಮತ್ತು ಹೊರ್ತಿ ಗ್ರಾಮಗಳಲ್ಲಿ ಸಂಚರಿಸಿ, ಪ್ರತಿ ಮನೆ ಮನೆಗೆ ಗಂಗೆ ಕಾರ್ಯಕ್ರಮದಡಿ ಅನುಷ್ಠಾನಗೊಂಡ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ನಳದ ಮೂಲಕ ನೀರು ಪ್ರತಿದಿನ ಪೂರೈಕೆ ಆಗುತ್ತಿರುವ ಕುರಿತು ವಿಚಾರಿಸಿ, ಖುದ್ದಾಗಿ ಪರಿಶೀಲಿಸಿದರು.
ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನೀರನ್ನು ಪೂರೈಕೆ ಮಾಡುವ ಪೂರ್ವದಲ್ಲಿ ನಿಯಮಿತವಾಗಿ ನೀರು ಪರೀಕ್ಷಿಸಲು ಹಾಗೂ ಒಎಚ್‌ಟಿ ಟ್ಯಾಂಕ ಅನ್ನು ನಿಯಮಿತವಾಗಿ ಸ್ವಚ್ಛಗೊಳಿಸಲು ಹಾಗೂ ಕ್ಲೋರಿನೇಷನ್ ಮಾಡಲು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗ್ರಾಮ ಪಂಚಾಯಿತಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಗಮನಿಸಿದರು ಅದಕ್ಕೆ ಕಾರ್ಯನಿರ್ವಾಹಕ ಅಭಿಯಂತರರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇವರು ಈಗಾಗಲೇ ೨೨೦ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಗ್ರಾಮ ಪಂಚಾಯಿತಿಗಳಿಗೆ ಹಸ್ತಾಂತರಿಸಲಾಗಿದ್ದು, ದುರಸ್ತಿಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಅಂದಾಜು ಪತ್ರಿಕೆ ತಯಾರಿಸಲಾಗಿದ್ದು ಮುಂಬರುವ ದಿನಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಗುವುದೆಂದು ತಿಳಿಸಿದರು.
ಎಲ್ಲ ಗ್ರಾಮಗಳ ಭೇಟಿಯ ಸಂದರ್ಭದಲ್ಲಿ ಓವರ್ ಹೆಡ್ ಟ್ಯಾಂಕ್‌ಗಳನ್ನು ಪ್ರತಿ ಹದಿನೈದು ದಿನಕ್ಕೊಮ್ಮೆ ಸ್ವಚ್ಛತೆ ಮಾಡುವಂತೆ ಪಿಡಿಓ ಹಾಗೂ ನೀರುಗಂಟಿ ಸಿಬ್ಬಂದಿಗಳಿಗೆ ಸೂಚಿಸಿದರು. ಪ್ರಸ್ತುತ ಮಳೆಗಾಲ ಸಂದರ್ಭವಾಗಿರುವುದರಿಂದ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವ ಮೂಲಕ ಗ್ರಾಮೀಣ ಜನರ ಆರೋಗ್ಯ ಕಾಪಾಡಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗದಂತೆ ನಿರ್ವಹಣೆ ಮಾಡುವಂತೆ ಸಂಬಂಧಿಸಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಇಂಡಿ ಅರ್ಜುಣಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಅಳವಡಿಸಿರುವ ಎಎಒ ಕಾಮಗಾರಿ ವೀಕ್ಷಿಸಿ ಕಾರ್ಯಾತ್ಮಕ ನಳ ಸಂಪರ್ಕ ಪರಿಶೀಲನೆ ಮಾಡಿದರು.
ಸಾಲೋಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಿದ ಸಿ.ಸಿ ರಸ್ತೆ ಕಾಮಗಾರಿ, ಗ್ರಾಮಗಳಲ್ಲಿನ ಕುಡಿಯುವ ನೀರಿನ ಮೂಲಗಳ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕೆಂದು ತಿಳಿಸಿ, ನೀರಿನ ಟ್ಯಾಂಕಗಳ ಸ್ವಚ್ಛತೆ ಬಗ್ಗೆ ಹೆಚ್ಚು ಗಮನ ವಹಿಸಿ ಹಾಗೂ ಜಲ ಜೀವನ ಮಿಷನ್ ಯೋಜನೆಯಡಿ ಬಾಕಿ ಉಳಿದ ಗ್ರಾಮಗಳ ಕಾಮಗಾರಿಗಳನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಿ ಜನರಿಗೆ ನಳ ಸಂಪರ್ಕ ಒದಗಿಸಿ ನೀರು ಪೂರೈಕೆಗೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ನಿರ್ದೇಶನ ನೀಡಿದರು.
ಇದೇ ವೇಳೆ ಹೊರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ಗಳಿಗೆ ಭೇಟಿ ನೀಡಿ ಮನೆಮನೆಗೆ ಅಳವಡಿಸಿರುವ ಜಲ ಜೀವನ ಮಿಷನ್ ಯೋಜನೆಯಡಿಲ್ಲಿನ ನಳ ಸಂಪರ್ಕದ ವ್ಯವಸ್ಥೆ ಕುರಿತು ಮಾಹಿತಿ ನೀಡಿದರು. ಗ್ರಾಮಸ್ಥರ ಕುಂದು ಕೊರತೆಗಳನ್ನು ಆಲಿಸಿದರು.
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಬಸವರಾಜ ಕುಂಬಾರ, ಇಂಡಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಭೀಮಾಶಂಕರ ಕನ್ನೂರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ತಾರನಾಥ್ ರಾಠೋಡ, ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕರಾದ ಸಿದ್ದರಾಮ ಅಂಕಲಗಿ, ನಿತ್ಯಾನಂದ ಯಲಗೋಡ, ಆರ್. ಎಸ್ ಬಂಡಿ, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಶಿಧರ್ ಮೆಡೆದಾರ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಕಲ್ಮೇಶ ಜಾನಮಟ್ಟಿ, ಅಮಸಿದ್ದ ಹರಿಜನ ಮತ್ತು ಪ್ರಭಾವತಿ ಕುಂಬಾರ, ಗ್ರಾಮ ಪಂಚಾಯತ ಅಧ್ಯಕ್ಷರು, ಸದಸ್ಯರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮುತ್ತಪ್ಪ ಜಾಡರ, ಶ್ರೀಶೈಲ ಬಿರಾದಾರ, ಸಿದರಾಯ ಬಿರಾದಾರ ಸೇರಿದಂತೆ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.