ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ.ಸಿಪಿ ವಿಜ್ಞಾನ ಮಹಾವಿದ್ಯಾಲಯ ಆವರಣದಲ್ಲಿ ಬಿ.ಎಲ್ ಡಿ ಈ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಡಾ.ಫ.ಗು ಹಳಕಟ್ಟಿ,ಬಂಥನಾಳ ಶಿವಯೋಗಿಗಳು,ಶ್ರೀ ಬಿ.ಎಂ.ಪಾಟೀಲ, ಹಾಗೂ ಬಂಗಾರಮ್ಮ ಸಜ್ಜನ ಸ್ಮರಣೆ ನಿಮಿತ್ತವಾಗಿ ಮಹಾವಿದ್ಯಾಲಯದಲ್ಲಿ ಹಸಿರುಸಿರಿ, ವೃಕ್ಷ ಅಭಿಯಾನ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ಒಟ್ಟು ೫೦ ಕ್ಕಿಂತ ಅಧಿಕ ಗಿಡಗಳು ನೆಟ್ಟು ಪೋಷಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಪ್ರೊ.ವಿ.ಎಸ್. ಬಗಲಿ ಮಾತನಾಡಿ ಕೇವಲ ಸಸಿಗಳನ್ನು ನೆಡುವುದಷ್ಟೇ ಮುಖ್ಯವಲ್ಲ ಅದರೊಂದಿಗೆ, ಸಂರಕ್ಷಸಿ, ಪೋಷಿಸಿ ಬೆಳೆಸುವುದು ನಮ್ಮ ಮೂಲ ಕರ್ತವ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ, ಉಪಪ್ರಾಚಾರ್ಯ ಡಾ.ಅನೀಲ ಭೀ.ನಾಯಕ, ಪಿಯುಸಿ ಪ್ರಾಚಾರ್ಯ ಪ್ರೊ.ಸಿ.ಬಿ ಪಾಟೀಲ, ಎಎಸ್‌ಪಿ ಕಾಲೇಜಿನ ಉಪ ಪ್ರಾಚಾರ್ಯ ಪ್ರೊ.ದಿಲೀಪ್ ಪಾಟೀಲ, ವೃಕ್ಷ ಅಭಿಯಾನ ಪ್ರತಿಷ್ಠಾನ ಸಂಯೋಜಕ ಪ್ರೊ.ಮುರುಗೇಶ ಪಟ್ಟಣಶೆಟ್ಟಿ, ಜಿಲ್ಲಾ ಅರಣ್ಯ ಅಧಿಕಾರಿಗಳು, ಹಸಿರುಸಿರಿ ಸಂಯೋಜಕ ಡಾ.ಕೃಷ್ಣಾ ಮಂಡ್ಲಾ, ನ್ಯಾಕ್ ಸಂಯೋಜಕ ಡಾ.ಮಹೇಶಕುಮಾರ ಕೆ ಡಾ.ಶ್ರೀನಿವಾಸ ದೊಡ್ಡಮನಿ, ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

