ವಿಜಯಪುರ: ಇತ್ತೀಚಿಗೆ ವಾಟ್ಸಪ್, ಪೇಸ್ ಬುಕ್ ಹಾಗೂ ಇತರೆ ಸಾಮಾಜಿಕ ಜಾಲತಾಣದಲ್ಲಿ ಶ್ರೀಮಠ ಗುರುಗಳು, ಧರ್ಮದರ್ಶಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಗೊಂದಲದ ಹೇಳಿಕೆ ನೀಡುತ್ತಿದ್ದು, ಇದರ ಕುರಿತು ಸ್ಪಷ್ಟಿಕರಣ ನೀಡುವ ಕುರಿತು ಅ.೦೧ ಭಾನುವಾರ ಬೆಳಗ್ಗೆ ೧೦.೩೦ ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ ಯಲ್ಲಿ ರಾಜ್ಯ ಮಟ್ಟದ ಮಹತ್ವದ ಸಭೆ ಆಯೋಜಿಸಲಾಗಿದೆ.
ಈ ಸಭೆಯಲ್ಲಿ ಶ್ರೀಮಠದ ಧರ್ಮದರ್ಶಿಗಳು ಹಾಗೂ ಮಾಜಿ ಜನಪ್ರತಿನಿಧಿಗಳು , ರಾಜ್ಯ ಸಂಘಟನೆಯ ಎಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು , ಜಿಲ್ಲಾಧ್ಯಕ್ಷರು ತಾಲೂಕು ಅಧ್ಯಕ್ಷರು, ಬಿ.ಎಸ್.ಎಸ್ ಪದಾಧಿಕಾರಿಗಳು, ಕ್ರಿಯಾ ಸಮಿತಿ ಸಂಚಾಲಕರು, ನೌಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮಹಿಳಾ ಸಂಘಟನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ಸಂಘಟನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಿವೃತ್ತ ನೌಕರರು, ಯುವ ಸಂಘಟನೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಶ್ರೀಮಠದಲ್ಲಿ ನಡೆಯುವ ರಾಜ್ಯ ಮಟ್ಟದ ಸಭೆಯಲ್ಲಿ ಭಾಗವಹಿಸಿ ಮುಕ್ತವಾಗಿ ವಿಷಯ ಪ್ರಸ್ತಾಪಿಸಿ ಈ ಬಗ್ಗೆ ಸ್ಪಷ್ಟಿಕರಣ ಪಡೆಯಲು ಭಾಗವಹಿಸಲು ಧರ್ಮದರ್ಶಿ ಎಂ.ಪಿ. ಕವಲಗಿ, ಜಿಲ್ಲಾಧ್ಯಕ್ಷ ರವಿ ಬಿಸನಾಳ
ಪ್ರಕಟಣೆಯಲ್ಲಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment