Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ

ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಬೆಳೆ ಹಾನಿ ಜಂಟಿ ಸಮೀಕ್ಷೆಯ ರೈತರ ಯಾದಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಪವಿತ್ರ ಶ್ರಾವಣ ಮಾಸದ ಮುನ್ನುಡಿ ನಾಗರಪಂಚಮಿ
ವಿಶೇಷ ಲೇಖನ

ಪವಿತ್ರ ಶ್ರಾವಣ ಮಾಸದ ಮುನ್ನುಡಿ ನಾಗರಪಂಚಮಿ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ
– ಡಾ.ಮಲ್ಲಿಕಾರ್ಜುನ ಎಸ್ ಆಲಮೇಲ
ಯಡ್ರಾಮಿ
ಕಲಬುರಗಿ ಜಿಲ್ಲೆ

ಉದಯರಶ್ಮಿ ದಿನಪತ್ರಿಕೆ

ಶ್ರಾವಣ ಮಾಸವು, ಅನಾದಿ ಕಾಲದಿಂದಲೂ ಹಿಂದುಗಳಿಗೆ ಪರಮ ಪವಿತ್ರವಾದ ಮಾಸ, ಒಂದೂ ಪೂಜೆ ಸಹ ನಡೆಯದ ದೇವಾಲಯಗಳಲ್ಲಿ ಭಕ್ತಿಯ ಜೇಂಕಾರ ಮೊಳಗುವದು, ಭಜನೆಗಳ ಗಾನಲಹರಿ ಹರಿಯುವದು, ಹಿಂದೂ ಪಂಚಾಂಗದ ಪ್ರಕಾರ ಎಲ್ಲಾ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ಹಬ್ಬ ಅದು ನಾಗರ ಪಂಚಮಿ ಅಂದರೆ ತಪ್ಪಾಗಲಾರದು.
ಶ್ರಾವಣ ಶುದ್ಧ ಪಂಚಮಿಯಿಂದ ಆಚರಿಸಲ್ಪುಡುವ ಈ ಹಬ್ಬ ಮುಂದೆ ಬರಲಿರುವ, ವರಮಹಾಲಕ್ಷ್ಮಿ ಶ್ರೀ ಕೃಷ್ಣಾಷ್ಟಮಿ, ತಾಯಿಗೌರಿ ಸಮೇತ ಬರುವ ವಿಘ್ನನಿವಾರಕ ಶ್ರೀ ಗಣೇಶ ಚತುರ್ಥಿ,ಗ್ರಾಮೀಣ ಭಾಗದಿ ಆಚರಿಸಲ್ಪಡುವ ಜೊಖ್ಯಾನ (ಜೋಕುಮಾರ) ಅನಂತನ ಹುಣ್ಣಿಮೆ, ತದನಂತರದಿ ಬರುವ ಆದಿಪರಾಶಕ್ತಿಯ ಆರಾಧಿಸಲ್ಪಡುವ ನವರಾತ್ರಿ ಉತ್ಸವ, ಬೆನ್ನಹಿಂದೆಯೇ ಧರೆಯೆಲ್ಲ ಜ್ಯೋತಿರ್ಮಯವಾಗಿಸಲು ಬರುವಳು ಶ್ರೀ ಮಹಾಲಕ್ಷ್ಮಿದೀಪಾವಳಿಗೆ ಹೀಗೆ ಊರಿನ ಜಾತ್ರೆಗಳಿಗೂ ಎಲ್ಲ ಶುಭ ಆಚರಣೆಗಳಿಗೂ ಮೊದಲ ಮೆಟ್ಟಿಲು ನಾಗರ ಪಂಚಮಿ.
ನಾಗರ ಪಂಚಮಿ
ಈ ಹಬ್ಬಕ್ಕೆ ಸಂಬಂಧಿಸಿದಂತೆ ಜನಪದ ಮತ್ತು ಪುರಾಣದಲ್ಲಿ ಹಲವು ಕಥೆಗಳಿವೆ. ಜನಪದ ಕಥೆಯ ಪ್ರಕಾರ ನಾಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮಧ್ಯೆ. ಈ ಕಾಲದ ಕೃಷಿ ಚಟುವಟಿಕೆಗಳು ಒಂದು ಹಂತ ತಲುಪಿರುತ್ತವೆ. ಈ ಕಾಲದಲ್ಲಿ ಕೀಟ, ಮಿಡತೆಗಳ ಹಾವಳಿ ಅಧಿಕ. ಅಷ್ಟೇ ಅಲ್ಲದೆ ಫಸಲು ತಿನ್ನಲು ಬರುವ ಇಲಿಗಳಿಗೂ ಕೊರತೆಯಿಲ್ಲ. ಇವೆಲ್ಲದರಿಂದ ರೈತನ ಫಸಲನ್ನು ಕಾಪಾಡುವುದು ಹಾವುಗಳು. ಇಲಿ, ಕಪ್ಪೆಗಳ ಅತಿಯಾದ ಹಾವಳಿಯನ್ನು ನಿಯಂತ್ರಿಸುವ ನಾಗರನಿಗೆ ಪುಟ್ಟದೊಂದು ಧನ್ಯವಾದ ಹೇಳಲು ನಡೆಸುವ ಪೂಜೆಯೇ ನಾಗರ ಪಂಚಮಿ


ಸ್ಕಂದ ಪುರಾಣದಲ್ಲಿ ನಾಗರ ಪಂಚಮಿಯ ಬಗ್ಗೆ ಕೆಲ ಮಾಹಿತಿಗಳು ಸಿಗುತ್ತದೆ. ಶ್ರೀಕೃಷ್ಣನ ಮಗನಾದ ಸಾಂಬನು ಶಿವಸುತ ಸುಬ್ರಹ್ಮಣ್ಯನಲ್ಲಿ ನಾಗರ ಪಂಚಮಿಯನ್ನು ಯಾಕೆ ಆಚರಿಸಲಾಗುತ್ತದೆ ಎಂದು ಪ್ರಶ್ನೆ ಕೇಳಿದಾಗ ಆತನ ಒಂದು ಕಥೆಯನ್ನು ಹೇಳುತ್ತಾನೆ.
ಹಿಂದೆ ದೇವಶರ್ಮ ಎಂಬ ಬ್ರಾಹ್ಮಣನೊಬ್ಬನಿದ್ದನು. ಆತನಿಗೆ 8 ಗಂಡು ಮಕ್ಕಳು ಹಾಗೂ ಒಬ್ಬಾಕೆ ಹೆಣ್ಣು ಮಗಳಿದ್ದಳು. ಒಂದು ದಿನ ಗರುಡನಿಂದ ಹೆದರಿಸಲ್ಪಟ್ಟ ನಾಗರವೊಂದು ಈ ಕನ್ನಿಕೆಯ ಬಳಿ ಬಂದು ಆಶ್ರಯವನ್ನು ಕೇಳುತ್ತದೆ. ಭಕ್ತಿಯಿಂದ ಕನ್ನಿಕೆ ಆ ನಾಗನಿಗೆ ಹಾಲು, ಫಲಗಳನ್ನು ಇಟ್ಟು ಭಕ್ತಿಯಿಂದ ಸಾಕುತ್ತಾಳೆ. ಇದಕ್ಕೆ ಪ್ರತಿಯಾಗಿ ಆ ನಾಗವು ದಿನಂಪ್ರತಿ ಆಕೆಗೆ ಒಂದು ತೊಲೆ ಚಿನ್ನವನ್ನು ನೀಡುತ್ತಿರುತ್ತದೆ. ಹೀಗಿರಲು ಒಂದು ದಿನ ಎಂಟು ಗಂಡು ಮಕ್ಕಳಲ್ಲಿ ಒಬ್ಬನು ತುಂಬಾ ಬಂಗಾರ ಬೇಕೆಂದು ನಾಗನನ್ನು ಪೀಡಿಸಿ, ಕಾಲಿನಿಂದ ಒದೆಯುತ್ತಾನೆ. ಕೋಪಗೊಂಡ ನಾಗರ ಹಾವು ಅವನ್ನು ಸೇರಿದಂತೆ ಇತರ ಏಳು ಜನರನ್ನು ಕೊಂದು ಹೊರಟು ಹೋಗುತ್ತದೆ. ತನ್ನ ಅಣ್ಣಂದಿರ ಸಾವಿಗೆ ತಾನೇ ಕಾರಣನಾದೇ ಎಂದು ಆ ಕನ್ನಿಕೆ, ದೇವರ ಇದಿರಿನಲ್ಲಿ ಶಿರಚ್ಛೇದನಕ್ಕೆ ಮುಂದಾದಾಗ, ನಾರಾಯಣನು ವಾಸುಕಿಗೆ ಆ ಸತ್ತ ಹುಡುಗರನ್ನು ಬದುಕಿಸಲು ಹೇಳುತ್ತಾನೆ. ಈ ರೀತಿ ಪುನಃ ಅಣ್ಣಂದಿರ ಜೀವವನ್ನು ಮರಳಿ ಪಡೆದುಕೊಳ್ಳುವಲ್ಲಿ ಆ ಕನ್ನಿಕೆ ಯಶಸ್ವಿಯಾದ ದಿನವೇ ನಾಗರ ಪಂಚಮಿಯು
ಹೆಣ್ಣುಮಕ್ಕಳ ಹಬ್ಬ


ನಾಗರಪಂಚಮಿ ಹೆಚ್ಚಾಗಿ ಹೆಣ್ಣು ಮಕ್ಕಳ ಹಬ್ಬ. ನಾಗರಪಂಚಮಿಯ ಹಿಂದಿನ ದಿನ ಸಹೋದರಿ ನಾಗದೇವತೆಗೆ ಬೇಡಿಕೊಂಡರೆ ಸಹೋದರನಿಗೆ ಲಾಭ ಹಾಗೂ ರಕ್ಷಣೆ ಸಿಗುತ್ತದೆ. ನಾಗರಪಂಚಮಿ ಮಾಂಗಲ್ಯಪ್ರದ ಹಾಗೂ ಸಂತಾನಪ್ರದ ಎಂಬ ನಂಬಿಕೆ. ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ವಿಶೇಷತೆಗಳಿಂದ ಕೂಡಿರುತ್ತದೆ. `ನಾಗರ ಪಂಚಮಿ ಬಂತು, ಅಣ್ಣ ಬರುತ್ತಾನೆ ಕರೆಯಾಕ, ಹಸಿರ ಸೀರೆ ಉಡಿಸಾಕ‘ ಎನ್ನುವ ಜಾನಪದ ಹಾಡು ಹಬ್ಬದ ವಿಶೇಷತೆ ಸಾರುತ್ತದೆ. ತವರಿಗೆ ಹೆಣ್ಣುಮಕ್ಕಳನ್ನು ಆಹ್ವಾನಿಸಿ, ಉಡುಗೊರೆ ನೀಡಿ ಗೌರವಿಸಲಾಗುತ್ತದೆ.
ಸಿಂಧೂ ಜನರಲ್ಲೂ ನಂಬಿಕೆಯಿತ್ತು
ನಮ್ಮ ಪೂರ್ವಜರ ಕಾಲದಿಂದಲೂ ನಾಗಪೂಜೆ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ಸಿಂಧೂ ಸಂಸ್ಕೃತಿಯ ಉತ್ಕನನ ತಾಣಗಳಲ್ಲಿ ಸಿಕ್ಕಿರುವ ಅನೇಕ ಅವಶೇಷಗಳು ಅಲ್ಲಿನ ಜನರು ನಾಗ (ಸರ್ಪ) ಪೂಜೆ ಮಾಡುತ್ತಿದ್ದರು ಎನ್ನುವುದು ತಿಳಿದುಬರುತ್ತದೆ. ಅವರ ನಂತರ ಬಂದಿರುವ ಅನೇಕ ರಾಜಮನೆತನಗಳು ಸರ್ಪವನ್ನು ವಿಶೇಷವಾಗಿ ಪೂಜಿಸುತ್ತಿದ್ದರು. ಈ ಬಗ್ಗೆ ಇತಿಹಾಸದ ಪುಟಗಳಲ್ಲಿ ಉಲ್ಲೇಖವಿದೆ. ಮಾನವ ಜನಾಂಗದವರು ಆದಿಕಾಲದಿಂದಲೂ ಈ ನಾಗಾರಾಧನೆ ನಡೆಸಿಕೊಂಡು ಬಂದಿದ್ದರು ತಿಳಿದುಬರುತ್ತದೆ.
ಭಾರತದ ಇತಿಹಾಸದ ಪುಟಗಳಲ್ಲಿ ನಾಗವಂಶಗಳ ಕುರಿತಾಗಿ ಉಲ್ಲೇಖವಿದೆ. ಈಗಲೂ ಭಾರತದ ಕೇರಳ, ಅಸ್ಸಾಂ, ನಾಗಾಲ್ಯಾಂಡ್‍ಗಳಲ್ಲಿ ನಾಗಾ ಜನಾಂಗದ (ನಾಗವಂಶೀಯರು) ಇದ್ದಾರೆಂದು ಹೇಳಲಾಗುತ್ತದೆ ಭಾರತಕ್ಕಷ್ಟೇ ನಾಗ ಪೂಜೆ ಸೀಮಿತವಾಗಿಲ್ಲ. ಗ್ರೀಸ್, ಜಪಾನ್, ಚೀನಾ, ಈಜಿಪ್ಟ್ ಸೇರಿದಂತೆ ಮುಂತಾದ ಪುರಾತನ ಸಂಸ್ಕøತಿಯುಳ್ಳ ಜನತೆ ನಾಗ ಪೂಜೆ ಮಾಡುತ್ತಿದ್ದರು. ನಮ್ಮ ನೆರೆಯ ರಾಜ್ಯ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಬತ್ತೀಸ ಶಿರಾಳ್ ಗ್ರಾಮದಲ್ಲಿ ನಾಗರಪಂಚಮಿ ದಿನ ಜೀವಂತ ನಾಗರಹಾವುಗಳನ್ನು ಪೂಜಿಸಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದುಬರುತ್ತದೆ.
ಕ್ಷೀರಾಭಿಷೇಕ ಮಾಡೋದು ಯಾಕೆ?
“ಅನಂತಂ ವಾಸುಕಿಂ ಶೇಷಂ ಪದ್ಮನಾಭಂ ಚ ಕಂಬಲಮ್| ಶಂಖಪಾಲಂ ಧೃತರಾಷ್ಟ್ರಂ ತಕ್ಷಕಂ, ಕಾಲಿಯಂ ತಥಾ” ಎಂಬ ಶ್ಲೋಕವು ನಾಗ ದೇವನ ವಿವಿಧ ಹೆಸರುಗಳನ್ನು ಹೇಳುತ್ತದೆ. ಅನಂತ, ವಾಸುಕೀ, ಶೇಷ, ಪದ್ಮನಾಭ, ಕಂಬಲ, ಶಂಖಪಾಲ, ಧೃತರಾಷ್ಟ್ರ, ತಕ್ಷಕ ಮತ್ತು ಕಾಲಿಯಾ ಹೀಗೆ ಒಂಭತ್ತು ಜಾತಿಯ ನಾಗಗಳ ಆರಾಧನೆ ಮಾಡಲಾಗುತ್ತದೆ. ಸರ್ಪಭಯ ಮತ್ತು ವಿಷದಿಂದ ತೊಂದರೆಯಾಗದೇ ಇರಲು ಹಲವು ಕಡೆ ನಾಗನ ಕಲ್ಲುಗಳಿಗೆ ಕ್ಷೀರಾಭಿಷೇಕ ಮಾಡುವ ಪದ್ಧತಿಯಿದೆ.
ನಾಗರಪಂಚಮಿಯ ದಿನದಲ್ಲಿ ವಾತಾವರಣವು ಸ್ಥಿರವಾಗಿರುತ್ತದೆ. ಸಾತ್ವಿಕತೆಯನ್ನು ಗ್ರಹಿಸಲು ಈ ಕಾಲವು ಅತ್ಯಂತ ಯೋಗ್ಯ ಮತ್ತು ಬಹಳ ಉಪಯುಕ್ತವಾಗಿದೆ. ಶ್ರಾವಣ ಶುದ್ಧ ಪಂಚಮಿಯ ದಿನ, ಗೋಮಯ (ಸಗಣಿ)ಯಿಂದ ಬಾಗಿಲು ಸಾರಿಸಿ, ರಂಗೋಲಿ, ಇಲ್ಲವೇ ಅರಿಶಿಣ, ಕುಂಕುಮದಿಂದ ನಾಗರ ಚಿತ್ರಗಳನ್ನು ಬರೆದು ನೇಮನಿಷ್ಠೆಯಿಂದ ಪೂಜೆ ಮಾಡುತ್ತಾರೆ.
ಸರ್ಪಯಜ್ಞವನ್ನು ನಿಲ್ಲಿಸಿದ ದಿನ
ಜನಮೇಜಯ ರಾಜ ತನ್ನ ತಂದೆ ಪರೀಕ್ಷಿತ ರಾಜನ ಸಾವಿಗೆ ಸರ್ಪವೊಂದು ಕಾರಣವೆಂದು ತಿಳಿದು, ಭೂಲೋಕದಲ್ಲಿ ಸರ್ಪಸಂಕುಲವನ್ನು ನಿರ್ನಾಮ ಮಾಡಲು ‘ಸರ್ಪಯಜ್ಞ’ವನ್ನು ಆರಂಭಿಸುತ್ತಾನೆ. ಋತ್ವಿಜರು ಹೋಮಮಾಡಲು ಆರಂಭಿಸಿದಾಗ ಸರ್ಪಗಳು ಒಂದರ ಹಿಂದೆ ಒಂದರಂತೆ ಬಂದು ಅಗ್ನಿಕುಂಡಕ್ಕೆ ಬಿದ್ದು ಬುದಿಯಾಗತೊಡಗಿತು. ಇದನ್ನು ಕಂಡ ಉಳಿದ ಸರ್ಪಗಳು ಸರ್ಪರಾಜ ವಾಸುಕಿಯ ತಂಗಿಯಾದ ಜರತ್ಕಾರು ಬಳಿ ಹೋಗಿ ದಯವಿಟ್ಟು ನಮ್ಮನ್ನು ಆ ರಾಜನ ಹೋಮದಿಂದ ರಕ್ಷಿಸು ಎಂದು ಬೇಡಿಕೊಳ್ಳುತ್ತವೆ. ಸರ್ಪಗಳ ಮನವಿಗೆ ಜರತ್ಕಾರು ಒಪ್ಪಿ ತನ್ನ ಮಗನಾದ ಆಸ್ತೀಕನಿಗೆ ಯಜ್ಞವನ್ನು ನಿಲ್ಲಿಸಿ ಬರುವಂತೆ ಸೂಚನೆ ನೀಡುತ್ತಾಳೆ. ಆಸ್ತೀಕ ಋಷಿಯು ಸರ್ಪಯಜ್ಞ ಮಾಡುವ ಜನಮೇಜಯ ರಾಜನ ಯಜ್ಞಶಾಲೆಯನ್ನು ಪ್ರವೇಶಿಸಿ ತನ್ನ ವಿದ್ಯಾಬಲದಿಂದ ಪ್ರಾಣಿ ಹಿಂಸೆ ಮಹಾಪಾಪ, ನೀನು ಈಗಾಗಲೇ ಮಾಡುತ್ತಿರುವ ಸರ್ಪಯಜ್ಞವನ್ನು ನಿಲ್ಲಿಸಬೇಕು ಎಂದು ಬೋಧಿಸಿದ. ಜನಮೇಜಯನು ಆಸ್ತಿಕನ ಮಾತಿಗೆ ಬೆಲೆಕೊಟ್ಟು ಸರ್ಪಯಜ್ಞವನ್ನು ನಿಲ್ಲಿಸಿದ ದಿನ ಪಂಚಮಿಯಾಗಿದೆಯಂತೆ.
ನಾಗರಾಜನು ಪರಶಿವನ ಆಭರಣ, ಮಹಾವಿಷ್ಣುವಿನ ಹಾಸಿಗೆ, ಗಣಪತಿಯ ಹೊಟ್ಟೆಯ ಪಟ್ಟಿ, ಸಮುದ್ರಮಂಥನ ಕಾಲದಲ್ಲಿ ಮಂದರ ಪರ್ವರತವೆಂಬ ಕಡಗೋಲಿಗೆ ಹಗ್ಗವಾಗಿ ದೇವತೆಗಳಿಗೆ ಮತ್ತು ಮನುಕುಲಕ್ಕೆ ಒಳಿತನ್ನು ಮಾಡಿದ ನಾಗದೇವರ ಪೂಜೆಯನ್ನು ನಾವೆಲ್ಲರೂ
ಭಕ್ತಿಪೂರ್ವಕವಾಗಿ ಮಾಡೋಣ ಅಧರ್ಮದೆಡೆಗೆ ಸಾಗುತ್ತಿರುವ ಜಗವನ್ನು ಸದ್ಧರ್ಮದೆಡೆಗೆ ಸಾಗುವಂತೆ ಮಾಡೆಂದು ಪ್ರಾರ್ಥಿಸೋಣ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ

ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ

ಬೆಳೆ ಹಾನಿ ಜಂಟಿ ಸಮೀಕ್ಷೆಯ ರೈತರ ಯಾದಿ

ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲು ನಿರ್ಧಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅನ್ಯಾಯವಾದವರಿಗೆ ನ್ಯಾಯ ಸಿಗುವಂತಾಗಬೇಕು :ಸುಣಗಾರ
    In (ರಾಜ್ಯ ) ಜಿಲ್ಲೆ
  • ಬತಗುಣಕಿ: ಬಯಲಾಟ ಅಕಾಡೆಮಿಯಿಂದ ಕಲಾವಿದರ ಸಮೀಕ್ಷೆ
    In (ರಾಜ್ಯ ) ಜಿಲ್ಲೆ
  • ಬೆಳೆ ಹಾನಿ ಜಂಟಿ ಸಮೀಕ್ಷೆಯ ರೈತರ ಯಾದಿ
    In (ರಾಜ್ಯ ) ಜಿಲ್ಲೆ
  • ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲು ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಪಕ್ಷದ ಬಲವರ್ಧನೆಗೆ ಮಹಿಳಾ ಕಾರ್ಯಕರ್ತೆಯರು ಶ್ರಮಿಸಬೇಕು
    In (ರಾಜ್ಯ ) ಜಿಲ್ಲೆ
  • ಆದೇಶ ಹಿಂಪಡೆಯದಿದ್ದರೆ ಬಬಲೇಶ್ವರದಿಂದಲೇ ಹೋರಾಟ
    In (ರಾಜ್ಯ ) ಜಿಲ್ಲೆ
  • ಬರಡೋಲ: ೧೨ ಜನರಿಗೆ ಪಿಂಚಣಿ ಪ್ರಮಾಣ ಪತ್ರ ವಿತರಣೆ
    In (ರಾಜ್ಯ ) ಜಿಲ್ಲೆ
  • ಪೊಲೀಸರ ಗುಂಡಿಗೆ ರೌಡಿ ಶೀಟರ್ ಬಲಿ
    In (ರಾಜ್ಯ ) ಜಿಲ್ಲೆ
  • ಮಹಿಳೆಯರು ಅಗತ್ಯ ಕೌಶಲ್ಯಗಳನ್ನು ಪಡೆಯುವುದು ಅತ್ಯವಶ್ಯ :ಪ್ರೊ.ಸೋನಾರ
    In (ರಾಜ್ಯ ) ಜಿಲ್ಲೆ
  • ಬಾಲಕಿ ನೇಣಿಗೆ ಶರಣು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.