ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಪ್ರಯುಕ್ತ ವ್ಯಸನಮುಕ್ತ ದಿನಾಚರಣೆಯನ್ನು ಆಗಸ್ಟ್ ೦೧ ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಮಾದಕ ವಸ್ತು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಯುವಜನರಿಗೆ ಹಾಗೂ ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿ, ಯಶಸ್ವಿಗೊಳಿಸಬೇಕು ಎಂದು ಎಡಿಸಿ ಗೆಣ್ಣೂರ ಸೂಚಿಸಿದರು.

