ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಜಿಲ್ಲೆಯ ಕುಮಟಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ , ನಿ ಹಾಗೂ ಕಗ್ಗೋಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘನಿ, ಸಹಕಾರ ಸಂಘಗಳು ಸುಮಾರು ವರ್ಷಗಳಿಂದ ಕಾರ್ಯನಿರ್ವಹಿಸದೇ ಇರುವುದರಿಂದ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ ೧೯೫೯ರ ಅಡಿಯಲ್ಲಿ ಸಮಾಪನೆಗೊಳಿಸಲು ಕ್ರಮವಹಿಸಲು ಅವಕಾಶವಿದೆ.
ಸಂಘದ ಸದಸ್ಯರು, ಆಡಳಿತ ಮಂಡಳಿಯವರು ಕಾರ್ಯನಿರ್ವಹಿಸದೇ ಸ್ಥಗಿತಗೊಂಡ ಸಹಕಾರ ಸಂಘಗಳಿಗೆ ಸಂಬಂಧಿಸಿದಂತೆ ತಮ್ಮ ಆಕ್ಷೇಪಣೆಗಳು ಇದ್ದಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರು ವಿಜಯಪುರ ಇಲ್ಲಿಗೆ ಅಗತ್ಯ ದಾಖಲಾತಿಗಳೊಂದಿಗೆ ಈ ಪ್ರಕಟಣೆ ಹೊರಡಿಸಿದ ೧೫ ದಿನಗಳ ಒಳಗಾಗಿ ಸಲ್ಲಿಸಬೇಕು. ತಪ್ಪಿದಲ್ಲಿ ನೋಂದಣಿ ರದ್ಧತಿಗಾಗಿ ಕ್ರಮ ತೆಗೆದುಕೊಳ್ಳಲಾಗುವುದೆಂದು ವಿಜಯಪುರದ ಸಹಕಾರ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

