ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ನಿಡಗುಂದಿ ಪಟ್ಟಣ ಪಂಚಾಯತ್ ವಾರ್ಡ ನಂ. ೦೫ರ ಉಪ ಚುನಾವಣೆಗೆ ಸಂಬಂಧಿಸಿದಂತೆ ವೇಳಾ ಪಟ್ಟಿಯನ್ನು ನಿಗದಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳೂ ಆದ ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.
ವೇಳಾಪಟ್ಟಿಯಂತೆ ನಾಮ ಪತ್ರಗಳನ್ನು ಸಲ್ಲಿಸಲು ಆಗಸ್ಟ್ ೫ ಕೊನೆಯ ದಿನವಾಗಿದ್ದು, ನಾಮಪತ್ರಗಳ ಪರಿಶೀಲನೆಯನ್ನು ಆಗಸ್ಟ್ ೦೬ ರಂದು ನಡೆಸಲಾಗುವುದು. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಆಗಸ್ಟ್ ೦೮ ಕೊನೆಯ ದಿನಾಂಕವಾಗಿದ್ದು, ಅವಶ್ಯವಿದ್ದಲ್ಲಿ ಆಗಸ್ಟ್ ೧೭ರ ಬೆಳಿಗ್ಗೆ ೦೭ ರಿಂದ ಸಂಜೆ ೦೫ ಗಂಟೆಯವರೆಗೆ ಮತದಾನ ನಡೆಯಲಿದೆ. ಆಗಸ್ಟ್ ೨೦ ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತ ದಿನವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
