Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

❣️ಪ್ರೀತಿಯ ಹೆಸರಿನ ಸಾವಿನ ನೆರಳು 💔

2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ

ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಸೂಚನೆ
(ರಾಜ್ಯ ) ಜಿಲ್ಲೆ

ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಸೂಚನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಪೂರ್ವಭಾವಿ ಸಭೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಆಗಸ್ಟ್ ೧೫ ರಂದು ಜರಗುವ ಸ್ವಾತಂತ್ರ‍್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ್.ಕೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸ್ವಾತಂತ್ರ‍್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮವನ್ನು ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಅಂದು ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಶಿಸ್ತಿನ ಪಥಸಂಚಲನ, ಗೌರವ ವಂದನೆ, ಜಿಲ್ಲೆಯ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪೂರ್ವ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು.
ಆಂಬುಲೆನ್ಸ್ ಸಹಿತ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ವೇದಿಕೆ ನಿರ್ಮಾಣ ಮತ್ತು ನಿರ್ವಹಣೆ, ವೇದಿಕೆ ಅಲಂಕಾರ,ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆಗಳ ಮುದ್ರಣ ಹಾಗೂ ವಿತರಣೆ, ಭದ್ರತೆ, ಕ್ರೀಡಾಂಗಣದ ಸ್ವಚ್ಛತೆ ಸೇರಿದಂತೆ ಸಿದ್ಧತಾ ಕಾರ್ಯಗಳನ್ನು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಕಾರ್ಯ ಹಂಚಿಕೆ ಮಾಡಿ, ವಹಿಸಿದ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಹಾಗೂ ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ಲಾಸ್ಟಿಕ್ ಧ್ವಜ ಬಳಸದಂತೆ ತಿಳಿಸಿದ ಅವರು, ಜಿಲ್ಲೆಯ ಎಲ್ಲ ಕಚೇರಿಗಳಲ್ಲಿ ಅಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸುವಂತೆಯೂ ಧ್ವಜ ಸಂಹಿತೆ ಅನುಸಾರವಾಗಿ ಧ್ವಜಾರೋಹಣ ನಿರ್ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ವಾತಂತ್ರ್ಯದ ಮುನ್ನಾದಿನ ನಗರದ ವಿವಿಧ ವೃತ್ತಗಳಲ್ಲಿ ದೀಪಾಲಂಕಾರ ಮಾಡಿ ಹಬ್ಬದ ವಾತಾವರಣ ನಿರ್ಮಿಸುವಂತಾಗಬೇಕು. ಎಲ್ಲಾ ಕಚೇರಿಗಳಲ್ಲಿ ಶ್ರಮದಾನ ಮಾಡುವ ಮೂಲಕ ಕಚೇರಿ ಆವರಣವನ್ನು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಅಂದು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಸಂಜೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಮಾತನಾಡಿ, ಸ್ವಾತಂತ್ರö್ಯ ದಿನಾಚರಣೆಯನ್ನು ಅತ್ಯಂತ ಅಚ್ಚುಕಟ್ಟಾಗಿ ಆಚರಿಸುವಂತೆಯೂ, ಧ್ವಜ ಸಂಹಿತೆ ಅನ್ವಯ ಧ್ವಜಾರೋಹಣ ವ್ಯವಸ್ಥೆ ಮಾಡಿಕೊಳ್ಳಬೇಕು. ಸರ್ಕಾರಿ ಕಚೇರಿಯಲ್ಲಿ ಎಲ್ಲ ಸಿಬ್ಬಂದಿ, ಅಧಿಕಾರಿಗಳು ಹಾಜರಿರಿಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮಣ್ಣಗೌಡ ಹಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

❣️ಪ್ರೀತಿಯ ಹೆಸರಿನ ಸಾವಿನ ನೆರಳು 💔

2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ

ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ❣️ಪ್ರೀತಿಯ ಹೆಸರಿನ ಸಾವಿನ ನೆರಳು 💔
    In ಭಾವರಶ್ಮಿ
  • 2028 ಕ್ಕೆ ಬಿಜೆಪಿ ಅಭ್ಯರ್ಥಿ ಶಾಸಕರಾಗುವುದು ಪಕ್ಕಾ
    In (ರಾಜ್ಯ ) ಜಿಲ್ಲೆ
  • ಸಮಸ್ಯೆಯ ಸುಳಿಯಲ್ಲಿ ತಾಳಿಕೋಟೆ ಇಂದಿರಾ ಕ್ಯಾಂಟಿನ್
    In (ರಾಜ್ಯ ) ಜಿಲ್ಲೆ
  • ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ
    In (ರಾಜ್ಯ ) ಜಿಲ್ಲೆ
  • ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಶರಣು ಮಸಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.