Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರಿಗೆ ಆಧಾರ

ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಲ್ಲಿಸಿ :ಬಿರಾದಾರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಚಿವ ಶಿವಾನಂದ ರ ಸ್ಪಂದನೆಗೆ ಸಂತ್ರಸ್ತರು ಖುಷ್
(ರಾಜ್ಯ ) ಜಿಲ್ಲೆ

ಸಚಿವ ಶಿವಾನಂದ ರ ಸ್ಪಂದನೆಗೆ ಸಂತ್ರಸ್ತರು ಖುಷ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಕೇಂದ್ರದನಿ ವಾಸಿಗಳ ಸಮಸ್ಯೆ ಆಲಿಸಿದ ಸಚಿವ ಶಿವಾನಂದ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನಾ ಬಾಧಿತರಾದ ನಮ್ಮ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಹಾಗೂ ಸಂತೃಪ್ತ ಪರಿಹಾರ ಕಂಡುಕೊಟ್ಟಿದ್ದೀರಿ. ಯೋಜನಾ ನಿರಾಶ್ರಿತರ ಬಗ್ಗೆ ನಿಮಗಿರುವ ಕಾಳಜಿಗೆ ನಾವು ಕೃತಜ್ಞರಾಗಿದ್ದೇವೆ ಎಂದು ಸಚಿವ ಶಿವಾನಂದ ಪಾಟೀಲ ಅವರ ಸ್ಪಂದನೆಗೆ ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ಕೇಂದ್ರದ ನಿರಾಶ್ರಿತರು ಕೃತಜ್ಞತಾ ಭಾವ ವ್ಯಕ್ತಪಡಿಸಿದ ಘಟನೆ ಜರುಗಿತು.
ನಿಡಗುಂದಿ ತಾಲೂಕ ಕೇಂದ್ರಕ್ಕೆ ಹೊಂದಿಕೊಂಡಿರುವ ಕಮದಾಳ ಪುನರ್ವಸತಿ ಕೇಂದ್ರದ ಶಾಲಾ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮಕ್ಕೆ ತೆರಳಿದ್ದ ಸಚಿವರು, ಅನಿರೀಕ್ಷಿತವಾಗಿ ಸಂತ್ರಸ್ತರ ಅಹವಾಲು ಆಲಿಸಲು ಮುಂದಾದರು.
ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಆಲಮಟ್ಟಿಯ ಲಾಲ ಬಹಾದ್ದೂರ ಶಾಸ್ತ್ರೀ ಜಲಾಶಯದ ಹಿನ್ನೀರಿಗೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹೊಲ-ಮನೆ, ಕೃಷಿ ಅವಲಂಬಿತ ಎಲ್ಲ ಬದುಕನ್ನು ಕಳೆದುಕೊಂಡ ನಮ್ಮನ್ನು ನಿಮ್ಮ ಮಡಿಲಿಗೆ ತಂದು ಹಾಕಿದ್ದಾರೆ. ನಿಡಗುಂದಿ ಭಾಗಕ್ಕೆ ಬಂದ ಮೇಲದ ಈ ಪುನರ್ವಸತಿ ಕೇಂದ್ರಕ್ಕೆ ಬಂದ ಮೇಲೆ ಕಷ್ಟದ ದಿನಗಳನ್ನು ಕಳೆಯುತ್ತಿದ್ದೆವು. ನೀವು ಆಯ್ಕೆಯಾಗಿ ಬಂದ ಮೇಲೆ ನಮ್ಮ ಸಮಸ್ಯೆಗಳಿಗೆ ಶಾಸ್ವತ ಪರಿಹಾರ ಕಂಡುಕೊಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೀರಿ ಎಂದು ಸಂತ್ರಸ್ತರು ಸಂತೃಪ್ತಿ ವ್ಯಕ್ತಪಡಿಸಿದರು.
ಇದ್ದಲ್ಲದೇ ಬೀಳಗಿ ಭಾಗದಲ್ಲಿ ಯೋಜನೆ ನಿರಾಶ್ರಿತರಾದ ನಮಗೆ ಕೃಷ್ಣಾ ಭಾಗ್ಯ ಜಲ ನಿಗದಮದ ಪುನರ್ವಸತಿ-ಪುನರ್ ನಿರ್ಮಾಣ ವಿಭಾಗದಿಂದ ಇನ್ನೂ ಹಲವರಿಗೆ ಕೆಲವು ಸೌಲಭ್ಯ ಸಿಗಬೇಕಿದೆ. ಕೂಡಲೇ ಈ ಸಮಸ್ಯೆಗೆ ಪರಿಹಾರ ಕಂಡುಕೊಡುವಂತೆ ಮನವಿ ಮಾಡಿದರು.
ಇದಲ್ಲದೇ ಎರಡು ದಶಕಗಳ ಬೇಡಿಕೆಯಾಗಿದ್ದ ಕುಡಿಯುವ ನೀರಿನ ಸಮಸ್ಯೆಗೆ ಬಗೆ ಹರಿದಿದ್ದರೂ, ವಾರಕ್ಕೊಮ್ಮೆ ನೀರು ಬರುತ್ತಿದ್ದು, ದಿನ ಬಿಟ್ದಟು ದಿನ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ರಸ್ತೆಗೆ ಹರಿಯುವ ಕೊಳಚೆ ನೀರಿನ ಸಮಸ್ಯೆ ನೀಗಲು ಚರಂಡಿ ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದರು.
ನಿಡಗುಂದಿ ಪಕ್ಕದಲ್ಲೇ ನಿರ್ಮಾಣಗೊಂಡಿರುವ ಕಮದಾಳ, ಮನಗೂರು, ಚಿನಿವಾಲ, ನಿಂಗಾಪುರ, ಗುಂಡನಪಲ್ಯ ಸೇರಿದಂತೆ ಇತರೆ ಪುನರ್ವಸತಿ ಕೇಂದ್ರಗಳಲ್ಲಿನ ಯೋಜನಾ ನಿರಾಸ್ರಿತರು ತಮ್ಮ ಸಮಸ್ಯೆ ನಿವೇದಿಸಿಕೊಂಡರು.
ಕೂಡಲೇ ಕೃಷ್ಣಾ ಭಾಗ್ಯ ಜಲ ನಿಮಗದ ಪುವರ್ನಸತಿ-ಪುನರ್ ನಿರ್ಮಾಣದ ಆಯುಕ್ತರಾದ ಸುನಿಲಕುಮಾರ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ, ಬೀಳಗಿ ತಾಲೂಕಿಗೆ ಪ್ರಭಾರಿ ಅಧಿಕಾರಿಗೆ ಬದಲಾಗಿ ಶಾಸ್ವತವಾಗಿ ಪುನರ್ ನಿರ್ಮಾಣ ಅಧಿಕಾರಿಯನ್ನೇ ನೇಮಿಸಿ, ನಿರಾಶ್ರಿತರ ಸಮಸ್ಯೆ ಆಲಿಸಿ, ಪರಿಹಾರ ಕಂಡುಕೊಳ್ಳಲು ಅಧಿಕಾರಿಯನ್ನೇ ಸ್ಥಳಕ್ಕೆ ಕಳಿಸಿಕೊಡುವಂತೆ ಸಚಿವರು ಸೂಚಿಸಿದರು.
ಇದಲ್ಲದೇ ಪುನರ್ವಸತಿ ಕೇಂದ್ರಗಳಲ್ಲಿ ಚರಂಡಿ ನಿರ್ಮಾಣಕ್ಕೆ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಬೇಕು. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಗಮನ ಹರಿಸಬೇಕು ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಪ್ರತಾಪ ಕೊಡಗೆ ಅವರಿಗೆ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮನಗೂರು ಪುನರ್ವಸತಿ ಕೇಂದ್ರದ ವಿನಾಯಕ ವಂದಾಲ, ಹನುಮಂತಗೌಡ ಪಾಟೀಲ, ಕಮದಾಳ ಪುನರ್ವಸತಿ ಕೇಂದ್ರದ ಬಸವರಾಜ ಮೇಟಿ, ಅಶೋಕ ಖಾನಾಪುರ ಸೇರಿದಂತೆ ವಿವಿಧ ಪುನರ್ವಸತಿ ಕೇಂದ್ರಗಳ ಯೋಜನಾ ನಿರಾಶ್ರಿತರು, ಪಂಚಾಯತ್ ರಾಜ್ ಇಂಜಿಯರಿಂಗ್‍ನ ಎಇಇ ವಿಲಾಸ ರಾಠೋಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರಿಗೆ ಆಧಾರ

ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಲ್ಲಿಸಿ :ಬಿರಾದಾರ

ಗ್ರಾಮೀಣ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಹಕರಿಗೆ ಕಣ್ಣೀರು ತರಿಸಿದ ಈರುಳ್ಳಿ ಬೆಲೆ ಏರಿಕೆ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಡವರಿಗೆ ಆಧಾರ
    In (ರಾಜ್ಯ ) ಜಿಲ್ಲೆ
  • ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಲ್ಲಿಸಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಪದಾಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಜನಪ್ರತಿನಿಧಿಗಳು 371(ಜೆ) ಮೀಸಲಾತಿ ಒದಗಿಸಲು ಮುಂದಾಗಲಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 26, 2026
    In ದಿನಪತ್ರಿಕೆ
  • ಪಿಎಚ್ಡಿ ವಿದ್ಯಾರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸೆ.೧೦ ರಿಂದ ೨೨ ರವರೆಗೆ ಬೃಹತ್ ಅಗ್ನಿವೀರ ನೇಮಕಾತಿ ರ‍್ಯಾಲಿ
    In (ರಾಜ್ಯ ) ಜಿಲ್ಲೆ
  • ತಾಯಿಯ ಎದೆಹಾಲಿನಿಂದ ಮಗುವಿನ ರೋಗ ನಿರೋಧಕ ಶಕ್ತಿ ಹೆಚ್ಚಳ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.