Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ

ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರು ಡಿಸಿಸಿ ಬ್ಯಾಂಕ್‌ಗಳಿಗೆ ಸಾಲ ನೀಡುವಷ್ಟು ಶ್ರೀಮಂತರಾಗಲಿ
(ರಾಜ್ಯ ) ಜಿಲ್ಲೆ

ರೈತರು ಡಿಸಿಸಿ ಬ್ಯಾಂಕ್‌ಗಳಿಗೆ ಸಾಲ ನೀಡುವಷ್ಟು ಶ್ರೀಮಂತರಾಗಲಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉಧ್ಘಾಟಿಸಿದ ಸಚಿವ ಶಿವಾನಂದ ಪಾಟೀಲ ಅಭಿಮತ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಸಹಕಾರ ಸಂಘ, ಸಂಸ್ಥೆ ಹಾಗೂ ಕ್ಷೇತ್ರದಲ್ಲಿ ಯಾವುದೇ ರಾಜಕಾರಣ ಹಾಗೂ ರಾಜಕೀಯ ಬೆರೆಸುವುದು ಬೇಡ ಎಂದು ಸಕ್ಕರೆ, ಜವಳಿ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ ಹೇಳಿದರು.
ತಾಲ್ಲೂಕಿನ ಪಡಗಾನೂರ ಗ್ರಾಮದಲ್ಲಿ ಬುಧವಾರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಜಿಲ್ಲೆಯ ಸಹಕಾರಿ ಸಂಘಗಳು ದಿನೇ ದಿನೇ ಸಾಕಷ್ಟು ಸಾಧನೆ ಮಾಡುತ್ತಿವೆ. ಇನ್ನೂ ಕೆಲವು ಹಿಂದುಳಿದಿವೆ. ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ದಿ: ಶಂಕರಗೌಡ ಪಾಟೀಲರು ಕಟ್ಟಿದ ಸಂಸ್ಥೆ ಇಂದು ಅಮೃತ ಮಹೋತ್ಸವ ಆಚರಣೆಯಲ್ಲಿರುವುದು ಸಂತೋಷದ ವಿಷಯ. ಸಂಘಕ್ಕೆ ತಮ್ಮ ಧರ್ಮಪತ್ನಿಯ ನೆನೆಪಿನಲ್ಲಿ ಜಾಗ ಹಾಗೂ ಸುಸಜ್ಜಿತ ಕಟ್ಟಡ ನಿರ್ಮಿಸಿದ ಇಂದಿನ ಅಧ್ಯಕ್ಷ ಹಣಮಂತ್ರಾಯಗೌಡ ಪಾಟೀಲರ ಕಾರ್ಯ ಶ್ಲಾಘನೀಯ.
ರೈತರು ಕೃಷಿಯಲ್ಲಿ ವೈಜ್ಞಾನಿಕತೆ ಅಳವಡಿಸಿಕೊಂಡು ಉತ್ತಮ ಫಲಿತಾಂಶ ಪಡೆಯಬಹುದು. ನಾವು ಸಾಧನೆ ಮಾಡಿದ ರೈತರನ್ನು ನೋಡಬೇಕು ಎಂದು ಸಲಹೆ ನೀಡಿದರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ರಾಜಶೇಖರ ಗುಡದಿನ್ನಿ ಹಾಗೂ ನಿರ್ದೇಶಕ ಹಣಮಂತ್ರಾಯಗೌಡ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಅಖಂಡ ಸಿಂದಗಿ ತಾಲ್ಲೂಕಿನ ಎಲ್ಲ ಪಿಕೆಪಿಎಸ್ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.
ಕಡಗಂಚಿ ಕಟ್ಟಿಮಠದ ವೀರಭದ್ರ ಶಿವಾಚಾರ್ಯರು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಸೋಮೇಶ್ವರ ದೇವಸ್ಥಾನ ಸಂಸ್ಥೆಯ ಅಧ್ಯಕ್ಷ ಅಯ್ಯಪ್ಪಯ್ಯ ಹಿರೇಮಠ, ಮುಳಸಾವಳಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹಾದೇವಿ ಆಕಳವಾಡಿ, ಉಪಾಧ್ಯಕ್ಷೆ ಕಸ್ತೂರಿಬಾಯಿ ಹೊಸಟ್ಟಿ, ವ್ಹಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಿ.ಎಸ್.ಪಾಟೀಲ(ಯಾಳಗಿ), ಕಲ್ಲನಗೌಡ ಪಾಟೀಲ, ಗುರುಶಾಂತ ನಿಡೋಣಿ, ಸುರೇಶ ಬಿರಾದಾರ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಕೆ.ಎಚ್.ವಡ್ಡರ, ಡಿಸಿಸಿ ಬ್ಯಾಂಕ್ ಸಿಇಓ ಎಸ್.ಎ.ಢವಳಗಿ, ಸಿಂದಗಿ ಸಹಕಾರಿ ಅಭಿವೃದ್ಧಿ ಅಧಿಕಾರಿ ಲೀಲಾವತಿಗೌಡ, ಸಿಂದಗಿ ಡಿಸಿಸಿ ಬ್ಯಾಂಕ್ ನೋಡಲ್ ಅಧಿಕಾರಿ ಎಂ.ಎಚ್.ಹತ್ತಿ, ಸ್ಥಳೀಯ ಸಂಘದ ಉಪಾಧ್ಯಕ್ಷ ನಿಂಗನಗೌಡ ಪಾಟೀಲ, ಆರ್.ಎಮ್.ಬಣಗಾರ ಆಡಳಿತ ಮಂಡಳಿ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.

ಅವಳಿ ಜಿಲ್ಲೆಗಳ ೫.೫ ಲಕ್ಷ ರೈತರಿಗೆ ೫ ಸಾವಿರ ಕೋಟಿ ಸಾಲ ನೀಡಿಕೆ

ರೈತರ ನೆರವಿಗಾಗಿ ಎಲ್ಲ ಜಿಲ್ಲಾ ಸಹಕಾರಿ ಬ್ಯಾಂಕುಗಳು ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುತ್ತಿವೆ. ಶೂನ್ಯ ಬಡ್ಡಿದರದ ಸಾಲ ನೀಡಿದ ಮೊದಲ ರಾಜ್ಯವೇ ಕರ್ನಾಟಕ ಎಂದರೆ ತಪ್ಪಾಗಲಾರದು. ವಿಜಯಪುರ ಹಾಗೂ ಬಾಗಲಕೋಟ ಅವಳಿ ಜಿಲ್ಲೆಗಳ ೫.೫ ಲಕ್ಷ ರೈತರಿಗೆ ೫ ಸಾವಿರ ಕೋಟಿ ಸಾಲ ನೀಡಲಾಗಿದೆ. ದ್ರಾಕ್ಷಿ, ದಾಳಿಂಬೆ, ಕಬ್ಬು ಬೆಳೆಯುವ ರೈತರ ಸಂಖ್ಯೆ ಈಗ ಹೆಚ್ಚಾಗುತ್ತಿದೆ. ತೋಟದಲ್ಲಿ ಮನೆ ನಿರ್ಮಿಸುವ ರೈತರಿಗೆ ೧೫ ರಿಂದ ೨೦ ಲಕ್ಷ ರೂ.ಗಳ ಸಾಲ ನೀಡುವ ಯೋಜನೆ ರೂಪಿಸಲಾಗಿದೆ . ಜೊತೆಗೆ ಹೈನುಗಾರಿಕೆಯಡಿ ಎಮ್ಮೆ, ಆಕಳು ಸಾಲ ನೀಡಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

“ವಿಜಯಪುರ ಜಿಲ್ಲೆಯ ಎಲ್ಲ ಸಹಕಾರ ಸಂಘ – ಸಂಸ್ಥೆಗಳು ಉತ್ತಮ ಸ್ಥಿತಿಯಲ್ಲಿವೆ ಎಂಬುವುದು ನಮಗೆಲ್ಲ ಹೆಮ್ಮೆಯ ವಿಷಯ.”

– ರಾಜುಗೌಡ ಪಾಟೀಲ (ಕುದರಿಸಾಲವಾಡಗಿ)
ದೇವರಹಿಪ್ಪರಗಿ ಶಾಸಕರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ

ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ

ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶುಲ್ಕ ಮರುಪಾವತಿ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಸಾವಯವ ಕೃಷಿ, ಬೆಳೆಗಳ ಸುಧಾರಿತ ಬೇಸಾಯ ಪದ್ಧತಿಗಳ ವಿಶೇಷ ತರಬೇತಿ
    In (ರಾಜ್ಯ ) ಜಿಲ್ಲೆ
  • ಯರನಾಳ ಗ್ರಾಪಂಗೆ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಭೇಟಿ
    In (ರಾಜ್ಯ ) ಜಿಲ್ಲೆ
  • ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಜಾಗೃತಿ ಜಾಥಾ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಶರಣು ಮಸಳಿ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.