Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾನವ ಕಳ್ಳ ಸಾಗಣೆ ತಡೆಯುವಿಕೆ ಪ್ರತಿಯೊಬ್ಬರ ಜವಾಬ್ದಾರಿ
(ರಾಜ್ಯ ) ಜಿಲ್ಲೆ

ಮಾನವ ಕಳ್ಳ ಸಾಗಣೆ ತಡೆಯುವಿಕೆ ಪ್ರತಿಯೊಬ್ಬರ ಜವಾಬ್ದಾರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಧೀಶರಾದ ಸಚಿನ್ ಕೌಶಿಕ್ ಸಲಹೆ

ಉದಯರಶ್ಮಿ ದಿನಪತ್ರಿಕೆ

ಮುದ್ದೆಬಿಹಾಳ: ಮಾನವ ಕಳ್ಳ ಸಾಗಣೆ ತಡೆಯುವದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಕಂಡು ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಲು ಪ್ರತಿಯೊಬ್ಬ ಸಾರ್ವಜನಿಕರು ಮುಂದಾಗಬೇಕು ಎಂದು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಧೀಶರಾದ ಸಚಿನ್ ಕೌಶಿಕ್ ಅವರು ಹೇಳಿದರು.
ಪಟ್ಟಣದ ನ್ಯಾಯಾಲಯದಲ್ಲಿ ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾನವ ಜೀವನವು ಖರೀದಿ ಅಥವಾ ಮಾರಾಟ ಮಾಡುವ ವಸ್ತುವಲ್ಲ. ಹಣದ ಭಿಕ್ಷೆಗೆ, ಲಾಭದ ಮೋಹಕ್ಕೆ ಅನೇಕರು ಮಕ್ಕಳನ್ನು, ಮಹಿಳೆಯರನ್ನು, ಪುರುಷರನ್ನು ಮೋಸದಿಂದ ಕಳ್ಳಸಾಗಣೆ ಮಾಡುತ್ತಿದ್ದಾರೆ. ಈ ದುಷ್ಕೃತ್ಯಕ್ಕೆ ಯಾರೂ ಬಲಿಯಾಗಬಾರದು. ಇಂತಹ ಅಪರಾಧಗಳನ್ನು ಮಟ್ಟಹಾಕಲು ಸರ್ಕಾರಕ್ಕೆ ಮತ್ತು ಪೊಲೀಸರಿಗೆ ಜನಸಹಕಾರ ಅತ್ಯವಶ್ಯ. ಹಾಗಾಗಿ ಜನತೆ ಇಂತಹ ಸಂಶಯಾಸ್ಪದ ಚಟುವಟಿಕೆಗಳು ಕಂಡ ಕೂಡಲೇ ಪೊಲೀಸರಿಗೆ ಮತ್ತು ಸಿಡಿಪಿಓ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದರು.
ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಅವರು ಅವರು ಮಾತನಾಡಿ, ಒಬ್ಬ ವ್ಯಕ್ತಿಯನ್ನು ಅವನ ಇಚ್ಛೆಯ ವಿರುದ್ಧವಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸುವದೇ ಮಾನವ ಕಳ್ಳಸಾಗಣೆ. ಇಂತಹ ಹೇಯ ಕೃತ್ಯದಲ್ಲಿ ಭಾರತ ಮೂರನೇ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಈ ಅನ್ಯಾಯವನ್ನು ತಡೆಯುವದು ನಮ್ಮ ನಿಮ್ಮೆಲ್ಲರ ಕರ್ತವ್ಯ. ಇಂತಹ ಅನ್ಯಾಯವನ್ನು ತಡೆಯದೇ ಹೋದಲ್ಲಿ ಮುಂದಿನ ದಿನಗಳಲ್ಲಿ ನಮ್ಮನ್ನೇ ನಾವು ಶೋಷಣೆಗೆ ಒಳಪಡಿಸಿಕೋಳ್ಳಬೇಕಾಗುತ್ತದೆ. ಹಾಗಾಗಿ ಇಂತಹ ಪ್ರಕರಣಗಳ ಸುಳಿವು ಸಿಕ್ಕಲ್ಲಿ ಕೂಡಲೇ ಮಹಿಳಾ ಸಹಾಯವಾಣಿ ೧೦೯೮ ಮತ್ತು ಪೊಲೀಸ್ ಸಹಾಯವಾಣಿ ೧೧೨ ಗೆ ಕರೆ ಮಾಡಿ ದೂರು ನೀಡಲು ಮುಂದಾಗಬೇಕು ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿ ಚಿಕ್ಕ ಮಕ್ಕಳನ್ನು ಬಲವಂತವಾಗಿ ಅಪಹರಿಸಿ ಅವರ ಅಂಗಾಗAಗಗಳನ್ನು ಹೀನ ಮಾಡಿ ದೇವಸ್ಥಾನಗಳಲ್ಲಿ, ಆಸ್ಪತ್ರೆಗಳಲ್ಲಿ, ಬಸ್‌ನಿಲ್ದಾಣಗಳಲ್ಲಿ ಭಿಕ್ಷಾಟನೆಗೆ ತಳ್ಳಲಾಗುತ್ತಿದೆ. ಇಂತಹ ಪ್ರಕರಣಗಳಲ್ಲಿ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೆ ತಂದು, ಇಂತಹ ಕೃತ್ಯಗಳಲ್ಲಿ ಭಾಗಿಯಾದ ವ್ಯಕ್ತಿಗಳನ್ನು ಬಂಧಿಸಿ ಯೋಗ್ಯ ಕ್ರಮ ಕೈಗೊಂಡಲ್ಲಿ ಮಾನವ ಕಳ್ಳ ಸಾಗಣೆ ತಡೆಯಬಹುದು ಎಂದರು.
ನ್ಯಾಯವಾದಿ ಆರ್.ವಾಯ್.ನಾಲತವಾಡ ವಿಶೇಶ ಉಪನ್ಯಾಸ ನೀಡಿದರು. ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಸಿವಿಲ್ ನ್ಯಾಯಾಧೀಶರಾದ ರಾಮಮೂರ್ತಿ ಎನ್, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ತಾಲೂಕು ಪಂಚಾಯತ ಇಓ ನಿಂಗಪ್ಪ ಮಸಳಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ, ಶಿಕ್ಷಣ ಸಂಯೋಜಕಿ ಪಿ.ಎ.ಬಾಳಿಕಾಯಿ, ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಎಚ್.ಜಿ.ನಾಗೋಡ, ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ, ಹಿರಿಯ ನ್ಯಾಯವಾದಿಗಳಾದ ಜೆ.ಎ.ಚಿನಿವಾರ, ಎಸ್.ಆರ್.ಸಜ್ಜನ, ಎಸ್.ಬಿ.ಬಾಚಿಹಾಳ, ನ್ಯಾಯವಾದಿಗಳಾದ ಚೇತನ ಶಿವಶಿಂಪಿ, ಎಲ್.ಆರ್.ನಾಲತವಾಡ, ಎಚ್.ಟಿ.ಪೂಜಾರಿ, ತಾಲೂಕು ಕಾನೂನು ಸೇವಾ ಸಮಿತಿಯ ಆಡಳಿತ ಸಹಾಯಕ ಅರವಿಂದ ಕುಂಬಾರ, ದಲಾಯತ್ ಮಹಾಂತೇಶ ಹಚರೆಡ್ಡಿ, ನ್ಯಾಯಾಲಯದ ಸಿಬ್ಬಂದಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಗಾರರು ಭಾಗಿಯಾಗಿದ್ದರು. ಎನ್.ಆರ್.ಮೊಕಾಶಿ ವಕೀಲರು ಕಾರ್ಯಕ್ರಮವನ್ನು ನಿರ್ವಹಿಸಿದರು.

“ಮಾನವ ಕಳ್ಳ ಸಾಗಣೆ ತಡೆಯುವದು ಕೇವಲ ಒಬ್ಬ ವ್ಯಕ್ತಿ, ಒಂದು ಸಂಸ್ಥೆಯಿಂದ ಸಾಧ್ಯವಿಲ್ಲ. ಇದಕ್ಕೆ ಎಲ್ಲ ಇಲಾಖೆಗಳು ಮತ್ತು ಪ್ರತಿಯೊಬ್ಬ ಸಾರ್ವಜನಿಕರು ಕೈ ಜೋಡಿಸಬೇಕು. ವಿದ್ಯಾರ್ಥಿಗಳ ದಿಸೆಯಿಂದಲೇ ಈ ಬಗ್ಗೆ ಅರಿವು ಮೂಡಿಸುವ ಕಾರ್ಯ ಸಿಡಿಪಿಓ ಕಚೇರಿಯಿಂದ ಮತ್ತು ಶಿಕ್ಷಣ ಇಲಾಖೆಯಿಂದ ಆಗಬೇಕು. ಶಾಲೆಗಳು, ಮಹಾ ವಿದ್ಯಾಲಯಗಳು ಮತ್ತು ಸಮಾಜಸೇವಾ ಸಂಸ್ಥೆಗಳು ಮೇಲಿಂದ ಮೇಲೆ ಜಾಗೃತಿ ಅಭಿಯಾನ ನಡೆಸಬೇಕು.”

– ರವೀಂದ್ರಕುಮಾರ ಕಟ್ಟಿಮನಿ
ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು, ಮುದ್ದೇಬಿಹಾಳ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.