Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಭೀಮೆಯ ಒಡಲು
(ರಾಜ್ಯ ) ಜಿಲ್ಲೆ

ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಭೀಮೆಯ ಒಡಲು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಭೀಮೆಯ ಒಡಲಿಗೆ ಮತ್ತೆ ಒಂದು ಲಕ್ಷ ಕ್ಯೂಸೆಕ್ಸ್ ನೀರು

ಉದಯರಶ್ಮಿ ದಿನಪತ್ರಿಕೆ

ವರದಿ: ಸಿದ್ರಾಮ ಮಾಳಿ
ರೇವತಗಾಂವ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಉಜನಿ ಜಲಾಶಯದಿಂದ ಮಂಗಳವಾರದಂದು ಮಧ್ಯಾಹ್ನ ಒಂದು ಲಕ್ಷ ಕ್ಯೂಸೆಕ್ಸ್ ನೀರನ್ನು ಭೀಮಾ ನದಿಗೆ ನೀರು ಹರಿಬಿಟ್ಟಿರುವುದರಿಂದ ಚಡಚಣ ತಾಲೂಕಿನಲ್ಲಿ ಭೀಮಾ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ.
ಇದರಿಂದಾಗಿ ಉಮರಜ, ಉಮರಾಣಿ, ಶಿರನಾಳ, ಹಿಂಗಣಿ, ಧೂಳಖೇಡ ಮುಂತಾದ ಗ್ರಾಮಗಳ ಬಳಿ ಇರುವ ಬ್ರಿಜ್ ಕಮ್ ಬಾಂದಾರಗಳು ಜಲಾವೃತಗೊಂಡಿವೆ. ಇದರಿಂದಾಗಿ ಕರ್ನಾಟಕ ಮಹಾರಾಷ್ಟ್ರ ಸಂಪರ್ಕ ಕಲ್ಪಿಸುವ ಉಮರಜ, ಉಮರಾಣಿ, ಹಿಂಗಣಿ, ಶಿರನಾಳ ಕೆಲವು ಹಳ್ಳಿಗಳ ಸಂಪರ್ಕ ಕಳೆದುಕೊಂಡಿವೆ.
ಭೀಮಾ ನದಿಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ನದಿ ತೀರದಲ್ಲಿ ವಾಸವಾಗಿರುವ ಜನರಿಗೆ ಸುರಕ್ಷಿತ ತಾಣಗಳತ್ತ ತೆರಳಲು ಈಗಾಗಲೇ ಸೂಚಿಸಲಾಗಿದೆ. ಭೀಮಾ ನದಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಮುಂಜಾಗೃತಾ ಕ್ರಮವಾಗಿ ನದಿ ತೀರದ ಗ್ರಾಮಗಳಲ್ಲಿ ಡಂಗುರ ಸಾರಿ, ಸುರಕ್ಷಿತ ತಾಣಗಳಿಗೆ ಜನರು ತಮ್ಮ ಸಾಮಾನು ಹಾಗೂ ಜಾನುವಾರಗಳೊಂದಿಗೆ ತೆರಳಲು ಸೂಚಿಸಲಾಗಿದೆ ಎಂದು ಚಡಚಣ ತಹಶೀಲ್ದಾರ್ ಸಂಜಯ ಇಂಗಳೆ ತಿಳಿಸಿದ್ದಾರೆ.

ಪಂಪ್‌ಸೆಟ್ ಸುರಕ್ಷಿತ ಸ್ಥಳಕ್ಕೆ ಸಾಗಿಸುತ್ತಿರುವ ರೈತರು

ಈ ಮಧ್ಯ ಭೀಮಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದಾಗಿ ಎಂಟೂ ಬ್ಯಾರೇಜುಗಳ ಮೇಲೆ ಸುಮಾರು ಮೂರ್ನಾಲ್ಕು ಅಡಿಗಿಂತಲೂ ಹೆಚ್ಚು ನೀರು ಹರಿಯುತ್ತಿದೆ. ಇದರಿಂದಾಗಿ ಈ ಬಾಂದಾರುಗಳ ಮೂಲಕ ಕರ್ನಾಟಕದಿಂದ ಮಹಾರಾಷ್ಟç ಮತ್ತು ಮಹಾರಾಷ್ಟ್ರದಿಂದ ಕರ್ನಾಟಕದ ಗ್ರಾಮಗಳಿಗೆ ದಿನ ನಿತ್ಯದ ಕೃಷಿ ಮತ್ತು ವ್ಯವಹಾರಗಳಿಗಾಗಿ ಸಂಚಾರಕ್ಕೆ ತೊಂದರೆ ಉಂಟಾಗಿದೆ. ನಿಗದಿತ ಗ್ರಾಮಗಳಿಗೆ ತೆರಳಲು ರೈತರು ಮತ್ತು ಸಾರ್ವಜನಿಕರು ಹಲವಾರು ಕಿ.ಮೀ ಸುತ್ತು ಹಾಕಿಕೊಂಡು ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಹಲವಾರು ಕಡೆಗಳಲ್ಲಿ ರೈತರ ಪಂಪಸೆಟ್‌ಗಳು ನೀರು ಏರಿಕೆಯಾದ ಕಾರಣ ನದಿಯಲ್ಲಿ ಮುಳುಗಡೆಯಾಗಿವೆ. ಕೆಲವು ಕಡೆ ಪಂಪಸೆಟ್‌ಗಳು ಕೊಚ್ಚಿಕೊಂಡು ಹೋಗಿವೆ. ಭೀಮಾ ನದಿಯಲ್ಲಿ ಮಹಾಪುರ ಉಂಟಾಗುವ ಮಾಹಿತಿ ತಿಳಿದ ಇನ್ನುಳಿದ ಗ್ರಾಮಗಳ ರೈತರು ನದಿ ಪಾತ್ರದಲ್ಲಿ ಅಳವಡಿಸಲಾಗಿದ್ದ ಪಂಪ್‌ಸೆಟ್‌ಗಳನ್ನು ಹೊರ ತೆಗೆದು ಸುರಕ್ಷಿತ ಸ್ಥಳಗಳಿಗೆ ಸಾಗಿಸುತ್ತಿದ್ದಾರೆ. ನೀರು ಮತ್ತಷ್ಟು ನೀರು ಏರಿಕೆಯಾದರೆ ರೈತರ ಜಮೀನಿನಲ್ಲಿ ಬೆಳೆಯಲಾಗಿರುವ ಬೆಳೆಗಳು ನೀರು ಪಾಲಾಗುವ ಆತಂಕ ಎದುರಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.