Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರದ ಯೋಜನೆ ಫಲಾನುಭವಿಗಳ ಮಾಹಿತಿ ಒದಗಿಸಿ
(ರಾಜ್ಯ ) ಜಿಲ್ಲೆ

ಸರ್ಕಾರದ ಯೋಜನೆ ಫಲಾನುಭವಿಗಳ ಮಾಹಿತಿ ಒದಗಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಧಾನ ಮಂತ್ರಿಗಳ ಸ್ವನಿಧಿ, ಮಾತೃವಂಧನ, ಡೇನಲ್ಮ್ ಹಾಗೂ ಸರ್ಕಾರದ ಇತರೆ ಯೋಜನೆಗಳ ಲಾಭ ಪಡೆದ ಫಲಾನುಭವಿಗಳ ಸಮಗ್ರವಾದ ನಿಖರ ಮಾಹಿತಿಯನ್ನು ಮುಂದಿನ ಸಭೆಯೊಳಗಾಗಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚಿಸಿದರು.
ಗುರುವಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಕೌಶಲ್ಯ ಮಿಷನ್ ಸಮಿತಿ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಯುವನಿಧಿ ಯೊಜನೆಯಡಿ ಜಿಲ್ಲೆಯ ಎಲ್ಲ ಕಾಲೇಜುಗಳಲ್ಲಿ ಅಂತಿಮ ವರ್ಷದಲ್ಲಿ ಪಧವಿ ಹಾಗೂ ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳ ಪಟ್ಟಿಯನ್ನು ಪಡೆದು ಎಲ್ಲ ಅರ್ಹ ಫಲಾನುಭವಿಗಳಿಗೆ ಯುವನಿಧಿ ಯೋಜನೆ ಲಾಭ ದೊರಕಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಯೋಜನೆಗಳ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಅಮೃತ್ ಯೋಜನೆಯಡಿ ಮಹಿಳಾ ಸ್ವ ಸಹಾಯ ಸಂಘಗಳು ವಿವಿಧ ವೃತ್ತಿಪರ ಚಟುವಟಿಕೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಪ್ರತಿಯೊಂದು ಗುಂಪಿಗೆ ಒಂದು ಹೆಸರನ್ನು ಸೂಚಿಸಬೇಕು ಅದರಂತೆ ಸ್ವ ಸಹಾಯ ಗುಂಪಿನ ಎಲ್ಲ ಸದಸ್ಯರುಗಳಿಗೆ ಸುರಕ್ಷತೆ ಒದಗಿಸಲು ಕ್ರಮ ವಹಿಸಬೇಕು. ನಗರದ ಹಿಟ್ನಳ್ಳಿ ಫಾರ್ಮಗಳಲ್ಲಿ ಕೃಷಿ ಚಟುವಟಿಕೆಗಳನ್ನು ಉತ್ತೇಜಿಸಲು ರೈತ ಮಕ್ಕಳಿಗಾಗಿ ಕೃಷಿ ಹಂಗಾಮುಗಳ ಅನುಸಾರ ಸುಮಾರು ೪೦ ಕೃಷಿಕ ರೈತರ ಮಕ್ಕಳಿಗೆ ೨ ಸರತಿಯಂತೆ ಒಟ್ಟು ೮೦ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಸಂಖ್ಯೆಯನ್ನು ಹೆಚ್ಚುಗೊಳಿಸಲು ಕ್ರಮ ವಹಿಸಿ ಪ್ರಸ್ತಾವನೆ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ವಿಶೇಷವಾಗಿ ಜಿಲ್ಲೆಯ ೧೫ ಸದಸ್ಯರಂತೆ ಸ್ವ ಸಹಾಯ ಗುಂಪುಗಳು ಪೇಂಟಿಗ್ ಕಾರ್ಯಗಳಲ್ಲಿ ತೊಡಗಿಕೊಂಡಿದ್ದು ಒಂದು ಉತ್ತಮ ಸಾಧನೆಗೈದಿದ್ದು, ಇಂತಹ ಸ್ವಸಹಾಯ ಗುಂಪುಗಳಿಗೆ ಪ್ರೋತ್ಸಾಹಿಸಬೇಕು. ರುಡ್ ಸೆಟ್ ಸಂಸ್ಥೆ ವತಿಯಿಂದ ಪ್ರತಿ ವರ್ಷ ಬಿಪಿಎಲ್ ಕಾರ್ಡ್ ಹೊಂದಿದ ಗ್ರಾಮೀಣ ಭಾಗದ ಯುವಕ ಹಾಗೂ ಯುವತಿಯರಿಗೆ ವಿವಿಧ ರೀತಿಯ ಕೌಶಲ್ಯ ಆಧಾರಿತ ತರಬೇತಿಗಳನ್ನು ಆಯೋಜಿಸಲಾಗುತ್ತದೆ. ಈ ಮಾದರಿಯಲ್ಲಿಯೇ ನಗರದ ಯುವಕ ಯುವತಿಯರು ತರಬೇತಿ ನೀಡಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಕುಮಾರ ಮೆಕ್ಕಳಕಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಸಿ.ಬಿ ಕುಂಬಾರ, ಉದ್ಯೋಗ ಮತ್ತು ತರಬೇತಿ ಇಲಾಖೆಯ ಅಧಿಕಾರಿಗಳಾದ ಮಹೇಶ ಮಾಳವಾಡೇಕರ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕರಾದ ಬದ್ರುದ್ದೀನ ಸೌದಾಗರ, ಡಿಸ್ಟಿçಕ್ಟ್ ಇಂಡಸ್ಟ್ರಿಯಲ್ ಓನರ್ ಅಸೊಷಿಯೇಶನ್ ಅಧ್ಯಕ್ಷರಾದ ಎಸ್.ವಿ ಪಾಟೀಲ, ಜಿಲ್ಲಾ ಕೈಗಾರಿಕಾ ಉದ್ಯಮಿದಾರರ ಸಂಘದ ಅಧ್ಯಕ್ಷರಾದ ಗಂಗಾಧರ ಸಂಬಣ್ಣಿ, ಉದ್ಯಮಿ ಪೀಟರ್ ಅಲೆಕ್ಸಾಂಡರ್ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ

ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ

ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ

ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮನುಷ್ಯನಲ್ಲಿ ಸಮಾನತೆ, ತಾಳ್ಮೆ ಇದ್ದಾಗ ಮಾತ್ರ ಸಾಧನೆ ಸಾಧ್ಯ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೂ ನೀಡಿ ಸ್ವಾಗತಿಸಿದ ಸಿಬ್ಬಂದಿ
    In (ರಾಜ್ಯ ) ಜಿಲ್ಲೆ
  • ಹಂಚನಾಳ ಕೆರೆ ಸೌಂದರ್ಯೀಕರಣಕ್ಕೆ ಡಿಸಿ ಡಾ.ಆನಂದ ಕೆ. ಸೂಚನೆ
    In (ರಾಜ್ಯ ) ಜಿಲ್ಲೆ
  • ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿ ತೀರದತ್ತ ನೂರಾರು ದೇವ-ದೇವತೆಗಳ ಪಲ್ಲಕ್ಕಿಗಳ ಮಹಾಪೂರ
    In (ರಾಜ್ಯ ) ಜಿಲ್ಲೆ
  • ಗ್ರಾಪಂ ಅಧ್ಯಕ್ಷರಾಗಿ ಶೃತಿ, ಉಪಾಧ್ಯಕ್ಷರಾಗಿ ಚಂದ್ರಮ್ಮ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವೂ ಮುಖ್ಯ :ಡೋಣುರ
    In (ರಾಜ್ಯ ) ಜಿಲ್ಲೆ
  • ಸಾವಿಲ್ಲದ, ಕೊನೆಯಿಲ್ಲದ ಭಾಷೆ ಕನ್ನಡ :ಡಾ.ನಾಗರಾಜ
    In (ರಾಜ್ಯ ) ಜಿಲ್ಲೆ
  • ಪರೀಕ್ಷೆ ವೆಬ್ ಕಾಸ್ಟಿಂಗ್ ಕೇಂದ್ರ ಕ್ಕೆ ಜಿಪಂ ಸಿಇಒ ರಿಷಿ ಆನಂದ ಭೇಟಿ
    In (ರಾಜ್ಯ ) ಜಿಲ್ಲೆ
  • ಉಚಿತ ತರಬೇತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.