ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ೨೨ನೇ ಅವಧಿಗೆ ೨೦೨೫-ಜನವರಿ, ಫೆಬ್ರವರಿ ತಿಂಗಳಲ್ಲಿ ಜರುಗಿದ ಮಹಾಪೌರ ಹಾಗೂ ಉಪ ಮಹಾಪೌರ ಆಯ್ಕೆಯ ಚುನಾವಣೆ ಫಲಿತಾಂಶವನ್ನು ಘೋಷಣೆ ಮಾಡಲು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಆ.೭ರಂದು ಮಧ್ಯಾಹ್ನ ೧ ಗಂಟೆಗೆ ಸಭೆ ಆಯೋಜಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣ್ಣವರ ಅವರು ತಿಳಿಸಿದ್ದಾರೆ.
