Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಂಘದ ಅಭಿವೃದ್ಧಿಯಲ್ಲಿ ಗ್ರಾಹಕರ ಪಾತ್ರ ಮುಖ್ಯ :ಸಂಗೀತಾ
(ರಾಜ್ಯ ) ಜಿಲ್ಲೆ

ಸಂಘದ ಅಭಿವೃದ್ಧಿಯಲ್ಲಿ ಗ್ರಾಹಕರ ಪಾತ್ರ ಮುಖ್ಯ :ಸಂಗೀತಾ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಸಂಘದ ಸರ್ವೋತೋಮುಖ ಅಭಿವೃದ್ಧಿಯಲ್ಲಿ ಸದಸ್ಯರು, ಠೇವುದಾರರು, ನಿರ್ದೇಶಕ ಮಂಡಳಿ ಸೇರಿದಂತೆ ಗ್ರಾಹಕರ ಪಾತ್ರ ಬಹು ಮುಖ್ಯವಾಗಿದೆ ಎಂದು ಸಮೃದ್ಧಿ ಸಹಕಾರ ಸಂಘದ ಅಧ್ಯಕ್ಷೆ ಸಂಗೀತಾ ನಾಯಿಕ್ ಹೇಳಿದರು.
ಪಟ್ಟಣದ ಕಲ್ಮೇಶ್ವರ ಮಂಗಲ ಭವನದಲ್ಲಿ ಗುರುವಾರ ಜರುಗಿದ ಸಮೃದ್ಧಿ ಸಹಕಾರ ಸಂಘದ ೪ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದ ಪ್ರಗತಿಗೆ ಕಳೆದ ೩ ವರ್ಷಗಳಿಂದ ನೀಡುತ್ತಿರುವ ಸದಸ್ಯರ ಸಹಕಾರ ಶ್ಲಾಘನೀಯ ಎಂದರು.
ಸಂಘದ ಉಪಾಧ್ಯಕ್ಷ ರಿಯಾಜ್ ಯಲಗಾರ ಮಾತನಾಡಿ, ಒಟ್ಟು ೯೦೨ ಸದಸ್ಯ ಬಲದ ಸಂಘವು ೧೦.೨೪ ಲಕ್ಷ ಶೇರು ಬಂಡವಾಳದೊಂದಿಗೆ ಕಾರ್ಯಾರಂಭ ಮಾಡಿ ಈಗ ೯೩.೪೬ ಲಕ್ಷ ಶೇರು ಬಂಡವಾಳದೊಂದಿಗೆ ಸುಮಾರು ೭.೮೦ ಕೋಟಿ ದುಡಿಯುವ ಬಂಡವಾಳ ಹೊಂದಿದೆ. ೨೦೨೪-೨೫ನೇ ಸಾಲಿನಲ್ಲಿ ೩೬.೧೬ ಕೋಟಿ ವ್ಯವಹಾರ ನಡೆಸಿ ೩೦.೧೭ ಲಕ್ಷ ರೂ.ಗಳ ನಿವ್ವಳ ಆದಾಯ ಗಳಿಸಿದೆ. ಮುಂಬರುವ ವರ್ಷಗಳಲ್ಲಿ ಠೇವುಗಳನ್ನು ರೂ. ೧೦ ಕೋಟಿಗೆ ಹೆಚ್ಚಿಸಿಕೊಳ್ಳುವುದು. ಶೇರು ಬಂಡವಾಳವನ್ನು ರೂ. ೧.೫೦ ಕೋಟಿಗಳಿಗೆ ಹೆಚ್ಚಿಸಿಕೊಳ್ಳುವುದು. ಹಾಗೂ ದುಡಿಯುವ ಬಂಡವಾಳವನ್ನು ರೂ.೧೪ ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದರು.
ಸಂಘದ ಮಾರ್ಗದರ್ಶಕ ಡಾ.ಆರ್.ಆರ್.ನಾಯಿಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘದ ಸಾಧನೆಯ ಹಿಂದೆ ಸದಸ್ಯರ, ಗ್ರಾಹಕರ ಸದ್ಭಾವನೆ ಸಹಕಾರ, ಆಡಳಿತ ಮಂಡಳಿ ಸದಸ್ಯರ ಕಳಕಳಿ ಪ್ರಾಮಾಣಿಕ ಸೇವೆ ಹಾಗೂ ಮಾರ್ಗದರ್ಶನ, ಸಿಬ್ಬಂದಿಗಳ ಅವಿರತ ಪರಿಶ್ರಮ ಹಾಗೂ ಸೇವಾ ಮನೋಭಾವನೆಗಳೇ ಮುಖ್ಯ ಕಾರಣಗಳಾಗಿವೆ ಎಂದರು.
ನಿವೃತ್ತ ನೌಕರರ ಸಂಘದ ಅಧ್ಯಕ್ಷ ಚನ್ನವೀರ ಕುದರಿ, ಚೈತನ್ಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗುರುರಾಜ ಕುಲಕರ್ಣಿ ಹಾಗೂ ಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕ್ ನಿರ್ದೇಶಕ ಬಿ.ಎಮ್. ಪಾಟೀಲ ಮಾತನಾಡಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಾದ ಕೆ.ಎಸ್.ಕೋರಿ, ಡಾ: ಸಂದೀಪ ನಾಯಿಕ್, ವ್ಹಿ.ಕೆ.ಪಾಟೀಲ, ಲತೀಫ್ ನಧಾಫ್, ವಿಜಯಲಕ್ಷ್ಮಿ ಮೆಟಗಾರ, ಗಂಗು ಬೇವನೂರ ಅವರನ್ನು ಸನ್ಮಾನಿಸಲಾಯಿತು.
ನಿರ್ದೇಶಕರಾದ ಪ್ರಭುದೇವ ಹಿರೇಮಠ, ಬಿ.ಎನ್.ಬಬಲೇಶ್ವರ, ಕೆ.ಎಸ್.ಕೋರಿ, ಎ.ಕೆ.ಹಿರೇಮಠ, ವೆಂಕಟೇಶ ಕುಲಕರ್ಣಿ, ಉಮೇಶ ಹಳಪಾಣಿ, ಗುರು ಕರಭಂಟನಾಳ, ಮಂಜುನಾಥ ಒಂಟೆತ್ತಿನ್, ಸುಭಾಸ್ ಜಾಧವ, ಶಕುಂತಲಾ ಬಿರಾದಾರ ಸೇರಿದಂತೆ ವ್ಹಿ.ಜಿ.ಚಾವರ, ಬಸಪ್ಪ ಕೋರಿ, ಸಿ.ಬಿ.ಬುದ್ನಿ, ಬಿ.ಆರ್.ಬಿರಾದಾರ, ಅಯ್ಯನಗೌಡ ಬಿರಾದಾರ, ಶಾಂತಪ್ಪ ಪಡನೂರ ಸಹಿತ ಸದಸ್ಯರು, ಸಿಬ್ಬಂದಿ ವರ್ಗದವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026

ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ

ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ

ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 02, 2026
    In ದಿನಪತ್ರಿಕೆ
  • ಆರಂಭವಾಗಿ ಆರು ವರ್ಷವಾದರೂ ಸ್ವಂತ ಸೂರಿಲ್ಲದ ವಿದ್ಯಾಲಯ
    In (ರಾಜ್ಯ ) ಜಿಲ್ಲೆ
  • ಅಧಿಕಾರಿಗಳ ನಡೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಬಿಜೆಪಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಕಾರ್ಯಕರ್ತರ ಅಸಮಾಧಾನ
    In (ರಾಜ್ಯ ) ಜಿಲ್ಲೆ
  • ಇತರರ ಸ್ಥಾನದಲ್ಲಿ ನಿಂತು ಯೋಚಿಸುವ ಗುಣವಿರಲಿ
    In ವಿಶೇಷ ಲೇಖನ
  • ಶಿಸ್ತು, ಭಾವೈಕ್ಯ ಮೂಡಿಸುವ ಭಾರತ ಸೇವಾದಳ :ನಡುಗಡ್ಡಿ
    In (ರಾಜ್ಯ ) ಜಿಲ್ಲೆ
  • ಅರ್ಹ‌ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯಬಾರದು
    In (ರಾಜ್ಯ ) ಜಿಲ್ಲೆ
  • ವಿಜಯಪುರದಲ್ಲಿ ಕೋಚ್ ಡಿಪೋ ಸ್ಥಾಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಕಾನಿಪ ಸಂಘದ ವಿವಿಧ ಸ್ಥಾನಗಳಿಗೆ ಹಿರಿಯ ಪತ್ರಕರ್ತರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಹಕರಿಸಿ :ಬೋಸಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.