ಸ್ವೀಪ್ ಕಾರ್ಯಚಟುವಟಿಕೆಗಳ ಪರಿಶೀಲನಾ ಸಭೆಯಲ್ಲಿ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಸೂಚನೆ
ವಿಜಯಪುರ: ಕಳೆದ ಚುನಾವಣೆಗಳಲ್ಲಿ ಅತಿ ಕಡಿಮೆ ಮತದಾನವಾದ ಮತಗಟ್ಟೆಗಳನ್ನು ಗುರುತಿಸಿಕೊಂಡು ವಿಭಾಗವಾರು ಆಯ್ಕೆ ಮಾಡಿಕೊಂಡು ಸ್ವೀಪ್ ಸಮಿತಿ ವತಿಯಿಂದ ಕ್ರಿಯಾತ್ಮಕ ಚಟುವಟಿಕೆಗಳನ್ನು ಕೈಗೊಂಡು ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸುವಂತೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಅಧಿಕಾರಿಗಳಿಗೆ ಸೂಚಿಸಿದರು.
ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ೨೦೨೩-೨೪ನೇ ಸಾಲಿನ ಸ್ವೀಪ್ ಕಾರ್ಯಚಟುವಟಿಕೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮುಂಬರುವ ಚುನಾವಣೆಗಳಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್ ಸಮಿತಿ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿಶೇಷ ಚೇತನ ಮತದಾರರು, ತೃತೀಯ ಲಿಂಗ ಮತದಾರರು, ದುರ್ಬಲ ವರ್ಗದ ಮತದಾರರನ್ನು ವಿಶೇಷ ಆಸಕ್ತಿ ವಹಿಸಿ ಸ್ವೀಪ್ ಕಾರ್ಯಚಟುವಟಿಕೆ ಕೈಗೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಮತದಾನ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಮತದಾರರಲ್ಲಿ ಜಾಗೃತಿ ಮೂಡಿಸಿದರು.ಜಿಲ್ಲೆಯಲ್ಲಿ ರಚನೆಯಾಗಿರುವ ೯೦೦ ಇಎಲ್‌ಸಿ ಕ್ಲಬ್‌ಗಳು ಹಾಗೂ ೨೦೭೨ ಚುನಾವಣಾ ಜಾಗೃತಿ ಕ್ಲಬ್‌ಗಳು ಸಕ್ರೀಯವಾಗಿ ಕಾರ್ಯನಿರ್ವಹಿಸಿ ಮತದಾರರಲ್ಲಿ ಜಾಗೃತಿ ಮೂಡಿಸುವಲ್ಲಿ ನಿರತರಾಗಬೇಕು,. ಮಹಿಳೆಯರು ಹೆಚ್ಚು ಮತದಾನ ಮಾಡಲು ಪ್ರೇರೆಪಿಸಬೇಕು ಎಂದು ಸೂಚಿಸಿದ ಅವರು ಈ ಹಿಂದೆ ನಡೆದ ಚುನಾವಣೆಗಳಲ್ಲಿ ಸ್ವೀಪ್ ಕಾರ್ಯಚಟುವಟಿಕೆ ಕುರಿತು ಪ್ರಶಂಸೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಡಾ.ವಿಜಯಕುಮಾರ ಆಜೂರ, ಡಯಟ್ ಪ್ರಾಂಶುಪಾಲ ಸಾಯಿರಾಬಾನು ಖಾನ್, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯತ್ ಯೋಜನಾ ವಿಭಾಗದ ಉಪನಿರ್ದೇಶಕ ಎ.ಬಿ.ಅಲ್ಲಾಪುರ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಸೇರಿದಂತೆ ತಾಲೂಕಾ ತಹಶೀಲ್ದಾರ, ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಕ್ಷಣಾಧಿಕಾರಿಗಳು, ಜಿಲ್ಲಾ ಮಟ್ಟದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.